AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Assembly Elections 2021: ಬಿಜೆಪಿ ಅಧಿಕಾರಕ್ಕೇರಿದರೆ ಕೇರಳದಲ್ಲಿ ಸಿಎಎ ಜಾರಿ; ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದ ಪೀಯೂಷ್ ಗೋಯಲ್

Piyush Goyal in Kerala: ಎಲ್​ಡಿಎಫ್ ಮತ್ತು ಯುಡಿಎಫ್ ಒಂದೇ ನಾಣ್ಯದ ಮುಖಗಳು. ಯುಡಿಎಫ್ ಸೋಲಾರ್ ಹಗರಣ ಮಾಡಿತ್ತು, ಎಲ್​ಡಿಎಫ್ ಚಿನ್ನ ಹಗರಣ ಮಾಡಿದೆ. ಇದನ್ನು ಕೇರಳದ ಜನರು ಇನ್ನುಮಂದೆ ಸಹಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

Kerala Assembly Elections 2021: ಬಿಜೆಪಿ ಅಧಿಕಾರಕ್ಕೇರಿದರೆ ಕೇರಳದಲ್ಲಿ ಸಿಎಎ ಜಾರಿ; ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದ ಪೀಯೂಷ್ ಗೋಯಲ್
ಪೀಯೂಷ್ ಗೋಯಲ್
ರಶ್ಮಿ ಕಲ್ಲಕಟ್ಟ
|

Updated on: Mar 29, 2021 | 7:23 PM

Share

ಕೊಚ್ಚಿ: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ತರುತ್ತೇವೆ ಎಂದು ಕೇಂದ್ರ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ ರಾಜ್ಯದಲ್ಲಿ ನ್ಯಾಯಸಮ್ಮತವಾಗಿ ನೆಲೆಸಿರುವವರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಕೊಚ್ಚಿ ಮತ್ತು ತ್ರಿಶ್ಶೂರ್​ನಲ್ಲಿ  ರೋಡ್ ಶೋ ನಡೆಸಿದ  ಗೋಯಲ್, ಎಲ್​ಡಿಫ್ ಮತ್ತು ಯುಡಿಎಫ್ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕೋಮುವಾದವನ್ನು ತಂದಿದೆ. ಕೇರಳದಲ್ಲಿ ಉತ್ತಮ, ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ತರಲು ಬಿಜೆಪಿಗೆ ಅವಕಾಶ ನೀಡಿ ಎಂದು ಮತದಾರರಲ್ಲಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಜನರು ಮನಸ್ಸು ಬದಲಿಸಿದ್ದು, ಬಿಜೆಪಿಯನ್ನು ಗೆಲ್ಲಿಸಲು ನಿರ್ಧರಿಸಿದ್ದಾರೆ. ಪಶ್ಚಿಮ ಬಂಗಾಳದ ಜನರು ಟಿಎಂಸಿ ಮತ್ತು ಕಮ್ಯುನಿಸ್ಟ್ ಸರ್ಕಾರದ ಅವ್ಯವಸ್ಥೆಯನ್ನು ನೋಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆರಿ 200ಕ್ಕಿಂತ ಹೆಚ್ಚು ಕ್ಷೇತ್ರಗಳನ್ನುವ ಗೆಲ್ಲುವ ನಿರೀಕ್ಷೆಇದೆ.

ಎಲ್​ಡಿಎಫ್ ಮತ್ತು ಯುಡಿಎಫ್ ಒಂದೇ ನಾಣ್ಯದ ಮುಖಗಳು. ಯುಡಿಎಫ್ ಸೋಲಾರ್ ಹಗರಣ ಮಾಡಿತ್ತು, ಎಲ್​ಡಿಎಫ್ ಚಿನ್ನ ಹಗರಣ ಮಾಡಿದೆ. ಇದನ್ನು ಕೇರಳದ ಜನರು ಇನ್ನುಮಂದೆ ಸಹಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಜ್ಯಕ್ಕೆ ದುಪ್ಪಟ್ಟು ಸಾಮರ್ಥ್ಯ ಸಿಗಲಿದೆ. ಇಲ್ಲಿ ಅಭಿವೃದ್ಧಿಯಾಗಲಿದೆ. ಉತ್ತಮ ಆಡಳಿತ ನೀಡುವ ಮೂಲಕ ಭ್ರಷ್ಟಾಚಾರದ ಕೂಪವಾಗಿರುವ ಕೇರಳ ರಾಜ್ಯವನ್ನು ನಾವು ಅಭಿವೃದ್ಧಿ ಪಡಿಸುತ್ತೇವೆ. ಕೇರಳದಲ್ಲಿ ಇಂದು ಇರುವ ಸಮಸ್ಯೆಗಳೆಂದರೆ ಎಲ್​ಡಿಎಫ್ ಸರ್ಕಾರದ ಭ್ರಷ್ಟಾಚಾರ, ಚಿನ್ನ ಹಗರಣ, ಹಿಂದೂಗಳ ಮೇಲಿನ ಕಿರುಕುಳ ಎಂದು ಸಚಿವರು ಹೇಳಿದ್ದಾರೆ.

ಚಿನ್ನಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೆಸರು ಉಲ್ಲೇಖಿಸುವಂತೆ ಆರೋಪಿಗಳ ಮೇಲೆ ಜಾರಿ ನಿರ್ದೇಶನಾಲಯ ಒತ್ತಡ ಹೇರಿದೆ ಎಂದು ಆರೋಪಿಸಿ ಕೇರಳ ಸರ್ಕಾರ ಜಾರಿ ನಿರ್ದೇಶನಾಲಯದ ವಿರುದ್ಧವೇ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ನಾಯಕರಾದ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಂಡಿಸಿದ್ದರು.

ಇದೊಂದು ಕೆಟ್ಟ ಬೆಳವಣಿಗೆ. ಕೇರಳ ಸರ್ಕಾರ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ವಿರುದ್ಧ ತನಿಖೆಗೆ ಆದೇಶಿಸುವುದಾದರೂ ಹೇಗೆ? ಇದು ದೇಶದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಎಂದು ಭಾನುವಾರ ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ್ದ ರಾಜನಾಥ್ ಸಿಂಗ್ ಹೇಳಿದ್ದರು.

ಕೇಂದ್ರ ಸಚಿವ ಸಂಪುಟದಲ್ಲಿ ರೈಲ್ವೆ ಖಾತೆ ಹೊಂದಿರುವ ಗೋಯಲ್, ಕೇರಳದಲ್ಲಿ ಶಬರಿಮಲೆ ರೈಲು ಸಂಪರ್ಕ ಯೋಜನೆ ತರಲು ಕೇಂದ್ರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಕೇರಳದಲ್ಲಿರುವ ವಿವಿಧ ರೈಲು ಯೋಜನೆಗಳನ್ನು ನೋಡಿದಾಗ, ಶಬರಿಮಲೆಗಿರುವ ರೈಲು ಸಂಪರ್ಕವನ್ನು ಅವರು ಮಾಡದೇ ಇರುವುದು ಯಾಕೆ ಎಂಬುದು ಅಚ್ಚರಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಬರಿಮಲೆಯ ಆಚಾರಗಳನ್ನು ಕಾಪಾಡಲು ಕಾನೂನು ತರುತ್ತೇವೆ: ರಾಜನಾಥ್ ಸಿಂಗ್

Kerala Assembly Elections 2021: ಬಿಜೆಪಿಯವರು ಸೃಷ್ಟಿಸುವ ಲವ್ ಜಿಹಾದ್ ಭೀತಿ, ಕೋಮುವಾದ ಕೇರಳದಲ್ಲಿ ನಡೆಯಲ್ಲ: ಶಶಿ ತರೂರ್

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?