AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 1ರಿಂದ ಭಾರತದ ಈ ನಗರದಲ್ಲಿ ಭಿಕ್ಷುಕರಿಗೆ ಹಣ ನೀಡಿದರೆ ಕೇಸ್​ ಬೀಳುತ್ತೆ ಹುಷಾರ್!

ಕಾರಿನಲ್ಲಿ ಹೋಗುವಾಗ, ಮನೆಯಲ್ಲಿರುವಾಗ ಅಥವಾ ಹೊರಗೆ ರಸ್ತೆಯಲ್ಲಿ ಹೀಗೆ ಎಲ್ಲೆಂದರಲ್ಲಿ ಭಿಕ್ಷುಕರು ಎದುರಾಗುತ್ತಲೇ ಇರುತ್ತಾರೆ. ಅವರಲ್ಲಿ ಕೆಲವರು ನಿಜವಾಗಿಯೂ ಕಡು ಬಡವರಾಗಿದ್ದರೆ ಇನ್ನು ಕೆಲವರು ದುಡಿದು ತಿನ್ನುವ ಸಾಮರ್ಥ್ಯವಿದ್ದರೂ ಭಿಕ್ಷಾಟನೆ ಮಾಡುವವರೂ ಇದ್ದಾರೆ. ಭಿಕ್ಷುಕರು ಎದುರು ಬಂದಾಗ ಬಹುತೇಕರು ಹಣ ನೀಡೇ ನೀಡುತ್ತಾರೆ, ಇನ್ನು ಕೆಲವರು ಅವರಿಗೆ ಆಹಾರ ನೀಡುತ್ತಾರೆ. ಆದರೆ, ಭಾರತದ ಈ ಸಿಟಿಯಲ್ಲಿ ನೀವೇನಾದರೂ ಭಿಕ್ಷುಕರಿಗೆ ಹಣ ನೀಡಿದರೆ ಪೊಲೀಸ್ ಕೇಸ್ ದಾಖಲಾಗುವುದು ಗ್ಯಾರಂಟಿ.

ಜನವರಿ 1ರಿಂದ ಭಾರತದ ಈ ನಗರದಲ್ಲಿ ಭಿಕ್ಷುಕರಿಗೆ ಹಣ ನೀಡಿದರೆ ಕೇಸ್​ ಬೀಳುತ್ತೆ ಹುಷಾರ್!
Beggars
ಸುಷ್ಮಾ ಚಕ್ರೆ
|

Updated on: Dec 17, 2024 | 4:14 PM

Share

ಇಂದೋರ್: 2025ರ ಜನವರಿ 1ರಿಂದ ನೀವೇನಾದರೂ ಈ ನಗರದಲ್ಲಿ ಭಿಕ್ಷಾಟನೆ ಮಾಡುವವರಿಗೆ ಹಣ ನೀಡಿದರೆ ನಿಮ್ಮ ವಿರುದ್ಧ ಪೊಲೀಸರು ಕೇಸ್ ದಾಖಲಿಸುತ್ತಾರೆ. ಹಾಗಾದರೆ, ಈ ನಗರ ಯಾವುದು? ಭಿಕ್ಷೆ ನೀಡಿದರೆ ಕೇಸ್ ಹಾಕುವುದು ಏಕೆ? ಎಂಬ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಈ ರೀತಿಯ ಹೊಸ ನಿಯಮ ಜಾರಿಯಾಗುವ ನಗರ ಇಂದೋರ್. ಜನವರಿ 1, 2025ರಿಂದ ಇಂದೋರ್ ನಗರದಲ್ಲಿ ಭಿಕ್ಷುಕರಿಗೆ ಭಿಕ್ಷೆ ನೀಡುವ ವ್ಯಕ್ತಿಗಳ ವಿರುದ್ಧ ಎಫ್​ಐಆರ್​ ದಾಖಲಿಸುವುದು ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇಂದೋರ್ ಜಿಲ್ಲಾಡಳಿತ ಪ್ರಕಟಿಸಿದೆ.

ಈ ಕ್ರಮವು ಇಂದೋರ್ ಸೇರಿದಂತೆ 10 ನಗರಗಳನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸುವ ಗುರಿಯನ್ನು ಹೊಂದಿರುವ ಸ್ಮೈಲ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಪ್ರಾಯೋಗಿಕ ಯೋಜನೆಯ ಭಾಗವಾಗಿದೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶಾಲ ಉಪಕ್ರಮದ ಭಾಗವಾಗಿ ಇಂದೋರ್ ಅನ್ನು ಭಿಕ್ಷುಕ ಮುಕ್ತಗೊಳಿಸುವ ಗುರಿಯನ್ನು ಈ ನಿರ್ಧಾರ ಹೊಂದಿದೆ.

ಇದನ್ನೂ ಓದಿ: ಪರಿಸರ ಸಂರಕ್ಷಣೆ ದಾರಿದೀಪ: ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಇಂದೋರ್​ನಲ್ಲಿ ಭಿಕ್ಷಾಟನೆಯ ವಿರುದ್ಧ ಜಾಗೃತಿ ಅಭಿಯಾನ ನಡೆಯುತ್ತಿದೆ. 2024ರ ಡಿಸೆಂಬರ್ ಅಂತ್ಯದವರೆಗೆ ಈ ಅಭಿಯಾನ ಮುಂದುವರಿಯುತ್ತದೆ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಹೇಳಿದ್ದಾರೆ. ಭಿಕ್ಷೆ ನೀಡುವುದನ್ನು ತಡೆಯಲು ಜನರಿಗೆ ಮನವಿ ಮಾಡಲಾಗುತ್ತಿದೆ. ಜನರಿಗೆ ಭಿಕ್ಷೆ ನೀಡುವ ಮೂಲಕ ಪಾಪದಲ್ಲಿ ಪಾಲುದಾರರಾಗಬೇಡಿ ಎಂದು ಅಭಿಯಾನ ನಡೆಸಲಾಗುತ್ತಿದೆ.

ಭಿಕ್ಷಾಟನೆ ನಿಷೇಧಿಸಿ ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಜನವರಿಯಲ್ಲಿ ಹೊಸ ನಿಯಮ ಜಾರಿ ಆರಂಭವಾಗಲಿದೆ. ಆಡಳಿತವು ಆರ್ಥಿಕವಾಗಿ ದುರ್ಬಲ ವ್ಯಕ್ತಿಗಳನ್ನು ಭಿಕ್ಷಾಟನೆಗಾಗಿ ಬಳಸಿಕೊಳ್ಳುವ ಸಂಘಟಿತ ಗುಂಪುಗಳನ್ನು ಗುರುತಿಸಿದೆ. ಭಿಕ್ಷಾಟನೆ ಅಭ್ಯಾಸದಲ್ಲಿ ತೊಡಗಿರುವ ಅನೇಕ ಜನರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಅವರಿಗೆ ವೈದ್ಯಕೀಯ ಆರೈಕೆ, ಸಮಾಲೋಚನೆ ಮತ್ತು ಶಿಕ್ಷಣ, ಸುಸ್ಥಿರ ಜೀವನೋಪಾಯಕ್ಕಾಗಿ ಕೌಶಲ್ಯ ಅಭಿವೃದ್ಧಿಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನೀರು, ಹೂಡಿಕೆ, ಅಭಿವೃದ್ಧಿ, ಉದ್ಯೋಗ; ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

2011ರ ಜನಗಣತಿಯ ಪ್ರಕಾರ ಭಾರತದ ಭಿಕ್ಷುಕರು ಮತ್ತು ಅಲೆಮಾರಿಗಳ ಜನಸಂಖ್ಯೆ ಸರಿಸುಮಾರು 4.13 ಲಕ್ಷ ಎಂದು ಅಂದಾಜಿಸಲಾಗಿದೆ. ಅವರಲ್ಲಿ ಬಹುಪಾಲು ಕಾರ್ಮಿಕರಲ್ಲದವರು ಮತ್ತು ಸುಮಾರು 41,400 ಕನಿಷ್ಠ ಕಾರ್ಮಿಕರು ಎಂದು ವರ್ಗೀಕರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ