ದ್ವೇಷ ತುಂಬಿದ ಧ್ವನಿಗಳಿಗೆ ನಿಮ್ಮ ಮೌನ ಪ್ರೋತ್ಸಾಹ ನೀಡುತ್ತಿದೆ: ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರು

ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್​ ಸಮಾರಂಭ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಅದರಲ್ಲಿ ಪಾಲ್ಗೊಂಡಿದ್ದ ಹಿಂದೂ ಧಾರ್ಮಿಕ ಮುಖಂಡರು, ದೇಶದಲ್ಲಿ ಜನರು ಮುಸ್ಲಿಮರ ವಿರುದ್ಧ ಕತ್ತಿ ಎತ್ತಬೇಕು ಎನ್ನುತ್ತ, ನರಮೇಧಕ್ಕೆ ಕರೆ ನೀಡಿದ್ದರು.

ದ್ವೇಷ ತುಂಬಿದ ಧ್ವನಿಗಳಿಗೆ ನಿಮ್ಮ ಮೌನ ಪ್ರೋತ್ಸಾಹ ನೀಡುತ್ತಿದೆ: ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರು
ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Lakshmi Hegde

Updated on:Jan 08, 2022 | 1:19 PM

ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ (Hate Speech)ಮತ್ತು ಜಾತಿ-ಧರ್ಮ ಆಧಾರಿತ ಹಿಂಸಾಚಾರಗಳನ್ನು ಹತ್ತಿಕ್ಕಬೇಕು ಎಂದರೆ ನೀವು ಈ ಬಗ್ಗೆ ಮಾತನಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್​​ನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಗುಂಪು ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರಿಗೆ ಮನವಿ ಮಾಡಿದೆ. ಬಹಿರಂಗ ಪತ್ರ ಬರೆದಿರುವ ಅವರು, ನಿಮ್ಮ ಮೌನವೆಂಬುದು ದ್ವೇಷ ತುಂಬಿದ ಧ್ವನಿಗಳಿಗೆ ಇನ್ನಷ್ಟು ಉತ್ತೇಜನ ನೀಡುತ್ತಿದೆ ಎಂದು ಹೇಳಿದ್ದಾರೆ.  ಈಗೀಗ ಹೆಚ್ಚುತ್ತಿರುವ ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರಗಳು ದೇಶದ ಏಕತೆ ಮತ್ತು ಸಮಗ್ರತೆಗೆ ಅಪಾಯವೊಡ್ಡುತ್ತಿವೆ. ಈ ವಿಭಜಿತ ಶಕ್ತಿಗಳ ವಿರುದ್ಧ ನೀವು ಗಟ್ಟಿಯಾಗಿ ನಿಲ್ಲಬೇಕು. ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದ ಪತ್ರದಲ್ಲಿ ಉಲ್ಲೇಖಿಸಿದೆ.  

ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್​ ಸಮಾರಂಭ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಅದರಲ್ಲಿ ಪಾಲ್ಗೊಂಡಿದ್ದ ಹಿಂದೂ ಧಾರ್ಮಿಕ ಮುಖಂಡರು, ದೇಶದಲ್ಲಿ ಜನರು ಮುಸ್ಲಿಮರ ವಿರುದ್ಧ ಕತ್ತಿ ಎತ್ತಬೇಕು ಎನ್ನುತ್ತ, ನರಮೇಧಕ್ಕೆ ಕರೆ ನೀಡಿದ್ದರು. ಆ ಸಮಾರಂಭದಲ್ಲಿ ಪಾಲ್ಗೊಂಡವರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.  ಅದರ ಬೆನ್ನಲ್ಲೇ ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ. ಹೀಗೆ ಜಾತಿ, ಧರ್ಮ ಆಧಾರಿತ ಹಿಂಸಾಚಾರಗಳು, ಅದನ್ನು ಪ್ರಚೋದಿಸುವ ಹೇಳಿಕೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಪ್ರತಿಯೊಬ್ಬನಿಗೂ ತನ್ನ ಧರ್ಮವನ್ನು ಘನತೆಯಿಂದ ಆಚರಿಸುವ ಹಕ್ಕನ್ನು ಭಾರತದ ಸಂವಿಧಾನ ನೀಡಿದೆ.  ಆದರೆ ಈಗ ಅದನ್ನು ಮಾಡಲೂ ಭಯ ಶುರುವಾಗಿದೆ. ಚರ್ಚ್​ಗಳು ಸೇರಿ ಪೂಜೆ ನಡೆಯುವ ಇನ್ನಿತರ ಸ್ಥಳಗಳೆಲ್ಲ ಧ್ವಂಸಗೊಳ್ಳುತ್ತಿವೆ. ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳುವಂತೆ ಬಹಿರಂಗವಾಗಿ ಕರೆನೀಡಲಾಗುತ್ತಿದೆ. ಇವೆಲ್ಲವನ್ನೂ ನಿರ್ಭಯದಿಂದ ನಡೆಸಲಾಗುತ್ತಿದೆ. ಹಾಗಾಗಿ ಪ್ರಧಾನಿಯಾದ ನೀವು ಮಧ್ಯಪ್ರವೇಶಿಸಲೇಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮೂಡಲಪಾಳ್ಯದಲ್ಲಿ ಸಿಲಿಂಡರ್ ರೀಫಿಲ್ಲಿಂಗ್ ವೇಳೆ ಗ್ಯಾಸ್​ ಲೀಕ್​ ಸ್ಫೋಟ, ತಪ್ಪಿದ ಭಾರಿ ಅನಾಹುತ

Published On - 1:18 pm, Sat, 8 January 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ