ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ, ಇದು ಈ ವರ್ಷ 4ನೇ ಪ್ರಕರಣ

| Updated By: ಅಕ್ಷಯ್​ ಪಲ್ಲಮಜಲು​​

Updated on: Feb 13, 2024 | 11:17 AM

ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಿಗ್ಗೆ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಲ್ಲಿನ ಕಾಲೇಜಿಗೆ ದೇಶದ ಅನೇಕ ಕಡೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಬರುತ್ತಾರೆ. ಇಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಅಚ್ಚರಿಯ ವಿಚಾರವಾಗಿದೆ.

ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ, ಇದು ಈ ವರ್ಷ 4ನೇ ಪ್ರಕರಣ
ಸಾಂದರ್ಭಿಕ ಚಿತ್ರ
Follow us on

ಕೋಟಾ, ಫೆ.13: ರಾಜಸ್ಥಾನದ ಕೋಟಾದಲ್ಲಿ ಐಐಟಿ (Indian Institute of Technology) ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದೇಶದ ಅನೇಕ ಕಡೆಯಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಇಲ್ಲಿನ ಕಾಲೇಜಿಗೆ ಬುರತ್ತಾರೆ. ಆದರೆ ಇಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅಚ್ಚರಿ ಎಂದು ಹೇಳಲಾಗುತ್ತದೆ. 2023ರಲ್ಲೂ ಇಂತಹ ಅನೇಕ ಘಟನೆಗಳು ಇಲ್ಲಿ ನಡೆದಿದೆ. ಈ ವರ್ಷ ಇದು ನಾಲ್ಕನೇ ವಿದ್ಯಾರ್ಥಿ ಆತ್ಮಹತ್ಯೆಯಾಗಿದೆ ಎಂದು ಹೇಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಜಾರ್ಖಂಡ್‌ನ ನಿವಾಸಿ ಶುಭ್ ಚೌಧರಿ ಎಂದು ಹೇಳಲಾಗಿದೆ. ಅವರು ಐಐಟಿ ಸೇರಿದಂತೆ ದೇಶದ ಉನ್ನತ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅಗತ್ಯವಿರುವ ಜೆಇಇ-ಮೇನ್ಸ್‌ಗೆ ತಯಾರಿ ನಡೆಸುತ್ತಿದ್ದರು. ಈ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕೋಟಾದಲ್ಲಿದ್ದರು. ನಿನ್ನೆ ಜೆಇಇ ಮೇನ್ಸ್ ಫಲಿತಾಂಶಗಳು ಪ್ರಕಟವಾಗಿದೆ. ಇದರಲ್ಲಿ ಶುಭ್ ಅವರು ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳನ್ನು ಪಡೆದುಕೊಂಡಿದ್ದಾರೆ. ಫಲಿತಾಂಶ ನೋಡಿದ ನಂತರ ಅವರು ಹಾಸ್ಟೆಲ್​​​ನ ಕೋಣೆ ಹೋಗಿದ್ದಾರೆ. ಇಂದು ಬೆಳಿಗ್ಗೆ ನೋಡಿದಾಗ ಶುಭ್ ಚೌಧರಿ ಸೀಲಿಂಗ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

ಇನ್ನು ಆತ್ಮಹತ್ಯೆಗೆ ಅವರು ಪಡೆದ ಅಂಕ ಕಾರಣವೇ ಅಥವಾ ಇನ್ನು ಬೇರೆ ಏನಾದರೂ ಕಾರಣ ಇರಬಹುದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಜತೆಗೆ ಅವರ ಕೋಣೆಯಲ್ಲಿ ಡೆತ್​​​ ನೋಟ್​​​​​ ಇದ್ದೀಯಾ ಎಂಬ ಬಗ್ಗೆಯು ತನಿಖೆ ನಡೆಸುತ್ತಿದ್ದಾರೆ. ಇನ್ನು ಈ ವಿಚಾರವನ್ನು ಶುಭ್ ಚೌಧರಿ ಅವರ ಮನೆಯವರಿಗೆ ತಿಳಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:06 am, Tue, 13 February 24