AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!

ಗಾಂಜಾ ಹೊಂದಿದ್ದಕ್ಕಾಗಿ ಐಐಟಿ ಬಾಬಾ ವಿರುದ್ಧ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನಿನ ಮೇಲೆ ಬಿಡಲಾಗಿದೆ. ಆದರೆ, ಅದು ಗಾಂಜಾ ಅಲ್ಲ ಪ್ರಸಾದ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಮಹಾ ಕುಂಭಮೇಳದ ಸಮಯದಲ್ಲಿ ಜನಪ್ರಿಯರಾದ ಐಐಟಿ ಬಾಬಾ ಅಭಯ್ ಸಿಂಗ್ ಅವರನ್ನು ಜೈಪುರದಲ್ಲಿ ಗಾಂಜಾ ಹೊಂದಿದ್ದಲ್ಲಿ ಪತ್ತೆಯಾದ ನಂತರ ಬಂಧಿಸಲಾಗಿತ್ತು.

ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!
Iit Baba
ಸುಷ್ಮಾ ಚಕ್ರೆ
|

Updated on: Mar 03, 2025 | 9:50 PM

Share

ಜೈಪುರ (ಮಾರ್ಚ್ 3): ಮಹಾ ಕುಂಭಮೇಳದ ಸಮಯದಲ್ಲಿ ಬಹಳ ಫೇಮಸ್ ಆದ, ಐಐಟಿ ಬಾಬಾ ಎಂದೇ ಜನಪ್ರಿಯರಾಗಿರುವ ಅಭಯ್ ಸಿಂಗ್ ಅವರನ್ನು ಗಾಂಜಾ ಇಟ್ಟುಕೊಂಡಿದ್ದಕ್ಕಾಗಿ ಬಂಧಿಸಲಾಗಿದೆ. ಜೈಪುರದಲ್ಲಿ ಬಂಧಿಸಲ್ಪಟ್ಟ ಅವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅಭಯ್ ಸಿಂಗ್ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ ಬಾಂಬೆ) ಪದವೀಧರರಾಗಿದ್ದು, ಮಹಾ ಕುಂಭದಲ್ಲಿ “ಐಐಟಿ ಬಾಬಾ” ಎಂದೇ ಜನಪ್ರಿಯರಾದರು. ಅವರು ಆಧ್ಯಾತ್ಮಿಕತೆಗೆ ಕಾರಣವಾದ ಸತ್ಯದ ಅನ್ವೇಷಣೆಯಲ್ಲಿ ಅಲ್ಲಿಗೆ ಹೋಗಿದ್ದರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: 3 ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಾಕುಂಭ; ಈ ಉತ್ಸವದ ಕುರಿತ 7 ಅಚ್ಚರಿಯ ಸಂಗತಿಗಳಿವು

ರಿದ್ಧಿ ಸಿದ್ಧಿ ಪ್ರದೇಶದ ಹೋಟೆಲ್‌ನಲ್ಲಿ ಉಳಿದುಕೊಂಡು ಗದ್ದಲ ಸೃಷ್ಟಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ನಂತರ ಐಐಟಿ ಬಾಬಾ ಅವರನ್ನು ಬಂಧಿಸಲಾಯಿತು. ಪೊಲೀಸರು ಆ ಸ್ಥಳಕ್ಕೆ ತಲುಪಿ ಅವರಿಂದ ಗಾಂಜಾವನ್ನು ವಶಪಡಿಸಿಕೊಂಡರು. ಆದರೂ ಗಾಂಜಾ ಬಹಳ ಕಡಿಮೆ ಪ್ರಮಾಣದಲ್ಲಿತ್ತು. ಅವರ ಬಳಿ ದೊರೆತ ಗಾಂಜಾದ ಪ್ರಮಾಣವು ಅನುಮತಿಸಲಾದ ಮಿತಿಯೊಳಗೆ ಇದ್ದುದರಿಂದ ಪೊಲೀಸರು ಆತನನ್ನು ಸ್ವಲ್ಪ ಸಮಯದ ಬಂಧನದ ನಂತರ ಬಿಡುಗಡೆ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧನದಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಐಐಟಿ ಬಾಬಾ ಅಭಯ್ ಸಿಂಗ್, ಅದು ಗಾಂಜಾ ಅಲ್ಲ “ಪ್ರಸಾದ” ಎಂದು ಹೇಳಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೂಡ ದೃಢಪಡಿಸಿದ್ದಾರೆ.

ಇದನ್ನೂ ಓದಿ: ತೊಂದರೆಯಾಗಿದ್ದರೆ ಕ್ಷಮಿಸಿ; ಮಹಾಕುಂಭದ ಮುಕ್ತಾಯದ ವೇಳೆ ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

‘ಐಐಟಿ ಬಾಬಾ’ ಅಭಯ್ ಸಿಂಗ್ ಯಾರು?:

ಐಐಟಿ ಬಾಬಾ ಅಭಯ್ ಸಿಂಗ್ ಐಐಟಿ ಬಾಂಬೆಯ ಹಳೆಯ ವಿದ್ಯಾರ್ಥಿ ಮತ್ತು ಮಾಜಿ ಏರೋಸ್ಪೇಸ್ ಎಂಜಿನಿಯರ್. ಅವರು ಶೈಕ್ಷಣಿಕ ಕ್ಷೇತ್ರ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ್ದು, ಮಹಾ ಕುಂಭದಲ್ಲಿ ಪಾಲ್ಗೊಂಡಿದ್ದರು. ಟಿವಿ ಚಾನೆಲ್ ಒಂದರ ಸಂದರ್ಶನದ ಬಳಿಕ ಅಭಯ್ ಸಿಂಗ್ ಐಐಟಿ ಬಾಬಾ ಎಂದೇ ಪ್ರಸಿದ್ಧರಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್