AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಕಡ್ಡಾಯ ರಜೆ ಮೇಲೆ ಹೊರ ನಡೆದ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ

ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣವು ಜಾತಿ ತಾರತಮ್ಯದ ಆಧಾರದ ಮೇಲೆ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ಮಾನಸಿಕ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪಗಳೊಂದಿಗೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ದೂಲ್ಲಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಘಟನೆ ಕ್ಯಾಂಪಸ್‌ನಲ್ಲಿನ ಜಾತಿ ತಾರತಮ್ಯದ ಗಂಭೀರ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಕಡ್ಡಾಯ ರಜೆ ಮೇಲೆ ಹೊರ ನಡೆದ  ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ
ಪ್ರೊಫೆಸರ್ Image Credit source: PTI
ನಯನಾ ರಾಜೀವ್
|

Updated on:Sep 23, 2026 | 10:33 AM

Share

ಮುಂಬೈ, ಸೆಪ್ಟೆಂಬರ್ 23: ಪ್ರತಿಷ್ಠಿತ ಐಐಟಿ ಬಾಂಬೆಯ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿದ್ಯಾರ್ಥಿಯ ಸಾವಿಗೆ ಕಾರಣರೆಂದು ಆರೋಪಿಸಲಾದ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ಅವರನ್ನು ಸಂಸ್ಥೆಯು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ. ವಿದ್ಯಾರ್ಥಿ ಸಂಘಟನೆಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಹಿಂದೆಯೇ ಅವರನ್ನು ಆಡಳಿತ ವ್ಯವಹಾರಗಳ ಡೀನ್ ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಪ್ರಸ್ತುತ ಪ್ರೊಫೆಸರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.

ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಕಲಿಯುತ್ತಿದ್ದ ಸಾಹಿಲ್ ವಕೋಡ್, ಸೆಪ್ಟೆಂಬರ್ 18 ರಂದು ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ಮಧ್ಯಂತರ ಸೆಮಿಸ್ಟರ್ ಪರೀಕ್ಷೆಯ ವೇಳೆ ಆತ ಚಾಟ್‌ಜಿಪಿಟಿ (ChatGPT) ಬಳಸುತ್ತಿದ್ದ ಆರೋಪ ಹೊರಿಸಲಾದ ಕೆಲವೇ ಗಂಟೆಗಳಲ್ಲಿ ಈ ದುರಂತ ಸಂಭವಿಸಿತ್ತು.

ತಾಯಿಯ ಗಂಭೀರ ಆರೋಪ

ಸಾಹಿಲ್ ಸಾವಿನ ಬೆನ್ನಲ್ಲೇ ಆತನ ತಾಯಿ ಸೋನಾಲಿ ವಕೋಡ್ ಆಡಳಿತ ಮಂಡಳಿ ಮತ್ತು ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ಕಳೆದ ಮೂರು ತಿಂಗಳಿಂದ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ನನ್ನ ಮಗನಿಗೆ ಜಾತಿ ಆಧಾರದ ಮೇಲೆ ನಿರಂತರ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದರು. ‘ನಾನು ಮೇಲ್ಜಾತಿಯವನು, ನೀನು ಕೆಳಜಾತಿಯವನು’ ಎಂದು ನಿಂದಿಸಿ ಅವಮಾನಿಸುತ್ತಿದ್ದರು. ಸೆಪ್ಟೆಂಬರ್ 13 ರಂದು ಹಾಸ್ಟೆಲ್‌ನಲ್ಲಿ ಭೇಟಿಯಾದಾಗಲೂ ಸಾಹಿಲ್ ತನ್ನ ಮೇಲಾಗುತ್ತಿದ್ದ ದೌರ್ಜನ್ಯದ ಬಗ್ಗೆ ಕಣ್ಣೀರಿಟ್ಟಿದ್ದ” ಎಂದು ಅವರು ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ. ಅಲ್ಲದೆ ಮಗನ ಮೇಲೆ ಹೊರಿಸಲಾದ ನಕಲು ಆರೋಪವನ್ನು ನಿರಾಕರಿಸಿರುವ ಅವರು, ಸಾಕ್ಷ್ಯ ಒದಗಿಸುವಂತೆ ಸವಾಲು ಹಾಕಿದ್ದಾರೆ.

ಮತ್ತಷ್ಟು ಓದಿ: ವಿದ್ಯಾರ್ಥಿ ಸಾಹಿಲ್ ಸಾವು ರಾಜಕೀಯ ವೇದಿಕೆಯಾಗಬಾರದು: ಅಮಾನತುಗೊಂಡ ಡೀನ್ ಪರ ನಿಂತ ಐಐಟಿ ಬಾಂಬೆ ವಿದ್ಯಾರ್ಥಿ ಪ್ರತಿನಿಧಿಗಳು

ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಐಐಟಿ ಬಾಂಬೆ

ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಆತ ಚಾಟ್‌ಜಿಪಿಟಿ ಬಳಸಿ ಸಿಕ್ಕಿಬಿದ್ದಿದ್ದ ಎಂದು ಬಿಡುಗಡೆ ಮಾಡಿದ್ದ ಅಧಿಕೃತ ಹೇಳಿಕೆಯಿಂದ ಐಐಟಿ ಬಾಂಬೆ ಆಡಳಿತ ಮಂಡಳಿ ಯು-ಟರ್ನ್ ತೆಗೆದುಕೊಂಡಿದೆ. ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ನಂತರ ಸಂಸ್ಥೆಯು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, “ಪೊಲೀಸ್ ತನಿಖೆ ಪೂರ್ಣಗೊಳ್ಳುವ ಮೊದಲೇ ಆ ರೀತಿ ವಿವರ ನೀಡುವುದು ಸರಿಯಲ್ಲವಾಗಿತ್ತು. ಘಟನೆಯ ಕುರಿತು ಪಾರದರ್ಶಕ ತನಿಖೆ ನಡೆಯುತ್ತಿದೆ” ಎಂದು ಸ್ಪಷ್ಟನೆ ನೀಡಿದೆ.

ಪೋಸ್ಟ್​

ಆಂತರಿಕ ತನಿಖಾ ಸಮಿತಿ ರಚನೆ: ಐಐಟಿ ಬಾಂಬೆ ಆವರಣದಲ್ಲಿ ಹೆಚ್ಚುತ್ತಿರುವ ಜಾತಿ ತಾರತಮ್ಯದ ದೂರುಗಳ ಹಿನ್ನೆಲೆಯಲ್ಲಿ ಕ್ಯಾಂಪಸ್‌ನಲ್ಲಿ ನಿಷ್ಪಕ್ಷಪಾತ ಆಂತರಿಕ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸುವಂತೆ ವಿದ್ಯಾರ್ಥಿ ಸಂಘಟನೆಗಳು (APPSC) ಆಗ್ರಹಿಸಿವೆ.

ದರ್ಶನ್ ಸೋಲಂಕಿ ಪ್ರಕರಣದ ನೆನಪು: 2023ರಲ್ಲೂ ಐಐಟಿ ಬಾಂಬೆಯಲ್ಲಿ ದರ್ಶನ್ ಸೋಲಂಕಿ ಎಂಬ ದಲಿತ ವಿದ್ಯಾರ್ಥಿ ಜಾತಿ ತಾರತಮ್ಯದ ಕಾರಣದಿಂದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಈಗ ಸಾಹಿಲ್ ಸಾವು ಕ್ಯಾಂಪಸ್‌ನಲ್ಲಿನ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂಬುದನ್ನು ಮತ್ತೆ ಮುನ್ನೆಲೆಗೆ ತಂದಿದೆ.

ಮಾನಸಿಕ ಕೌನ್ಸೆಲಿಂಗ್ ಮತ್ತು ಸಹಾಯವಾಣಿ: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಶೈಕ್ಷಣಿಕ ಒತ್ತಡ ಹಾಗೂ ತಾರತಮ್ಯದಂತಹ ಸಮಸ್ಯೆಗಳನ್ನು ಎದುರಿಸಲು ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್ ಮತ್ತು ವಿದ್ಯಾರ್ಥಿ ಕೌನ್ಸೆಲಿಂಗ್ ವಿಭಾಗವನ್ನು ಸಂಪೂರ್ಣ ಪುನಾರಚನೆ ಮಾಡಲು ಶಿಕ್ಷಣ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:28 am, Wed, 23 September 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ನೋಡಿ ಫ್ಯಾನ್ಸ್ ಏನಂದ್ರು?
‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ನೋಡಿ ಫ್ಯಾನ್ಸ್ ಏನಂದ್ರು?
ದಸರಾ: ಪ್ರಶಾಂತ ಆನೆಯ ಆಯ್ಕೆ ಎಷ್ಟು ಸವಾಲಾಗಿತ್ತು? ವಿವರಿಸಿದ ಸಿಸಿಎಫ್
ದಸರಾ: ಪ್ರಶಾಂತ ಆನೆಯ ಆಯ್ಕೆ ಎಷ್ಟು ಸವಾಲಾಗಿತ್ತು? ವಿವರಿಸಿದ ಸಿಸಿಎಫ್
ಹಿಂದಿ ಸರಿಗಮಪದಲ್ಲಿ ಮಿಂಚು ಹರಿಸಿದ ಕನ್ನಡತಿ ಶಿವಾನಿ ಸ್ವಾಮಿ
ಹಿಂದಿ ಸರಿಗಮಪದಲ್ಲಿ ಮಿಂಚು ಹರಿಸಿದ ಕನ್ನಡತಿ ಶಿವಾನಿ ಸ್ವಾಮಿ
ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ
ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ
₹90 ಲಕ್ಷ ಹೂವಿನ ಅಲಂಕಾರ: ಹಾಸನಾಂಬೆ ಜಾತ್ರೆ ಖರ್ಚು ಕೇಳಿ ರೇವಣ್ಣ ಶಾಕ್!
₹90 ಲಕ್ಷ ಹೂವಿನ ಅಲಂಕಾರ: ಹಾಸನಾಂಬೆ ಜಾತ್ರೆ ಖರ್ಚು ಕೇಳಿ ರೇವಣ್ಣ ಶಾಕ್!