ಐಐಟಿ ದೆಹಲಿಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆ
ಕೋಟಾದಲ್ಲಿ ನೀಟ್ ವಿದ್ಯಾರ್ಥಿಗಳು ತಪ್ಪು ಹೆಜ್ಜೆ ಇಡುವಂತೆ ದೆಹಲಿಯಲ್ಲೂ ಅಂಥದ್ದೇ ಘಟನೆ ಬೆಳಕಿಗೆ ಬಂದಿದೆ. ಐಐಟಿ ದೆಹಲಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಹಾಸ್ಟೆಲ್ ರೂಮನ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಐಐಟಿ ದೆಹಲಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜಯ್ ನೇರ್ಕರ್ (24) ಎಂಬ ವಿದ್ಯಾರ್ಥಿಯು ಪೋಷಕರು ಕರೆ ಮಾಡಿದಾಗ ಉತ್ತರಿಸದ ಕಾರಣ ತಕ್ಷಣ ಹಾಸ್ಟೆಲ್ ಮೇಟ್ನ್ನು ವಿಚಾರಿಸಿದ್ದಾರೆ. ಆಗ ಅವರು ಕೋಣೆಗೆ ಹೋಗಿ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ.
ನೇರ್ಕರ್ ದ್ರೋಣಾಚಾರ್ಯ ಹಾಸ್ಟೆಲ್‌ನಲ್ಲಿ ಕೊಠಡಿ ಸಂಖ್ಯೆ 757 ರಲ್ಲಿ ತಂಗಿದ್ದರು. ಆತ ಮಹಾರಾಷ್ಟ್ರದ ನಾಸಿಕ್ ಮೂಲದವನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಳಿದ ವಿದ್ಯಾರ್ಥಿಗಳು ಆತನ ಕೊಠಡಿಗೆ ಹೋಗಿ ನೋಡಿದಾಗ ಒಳಗಿನಿಂದ ಚಿಲಕ ಹಾಕಿರುವುದು ಕಂಡು ಬಂತು. ಹಾಸ್ಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಬಾಗಿಲು ಒಡೆದಿದ್ದಾರೆ. ನೇರ್ಕರ್ ಅವರ ದೇಹವು ಕೋಣೆಯ ಮೇಲ್ಛಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿದ್ಯಾರ್ಥಿಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಸಾವಿಗೆ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗೆ ಓದಿನ ಬಗ್ಗೆ ಚಿಂತೆ ಇತ್ತಾ ಅಥವಾ ಬೇರೆ ಯಾವುದೋ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರಾ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಮತ್ತಷ್ಟು ಓದಿ: ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ
ಕೋಟಾದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಲವು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬರುತ್ತಿದೆ. ಇದೇ ಜನವರಿಯಲ್ಲಿ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಮೊರಾದಾಬಾದ್ ಮೂಲದ ಮೊಹಮ್ಮದ್ ಜೈದ್, ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಅಖಿಲ ಭಾರತ ಪ್ರವೇಶ ಪರೀಕ್ಷೆಯಾದ ನೀಟ್‌ಗೆ ತಯಾರಿ ನಡೆಸುತ್ತಿದ್ದ.
ಕೋಟಾದ ಜವಾಹರ್ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ, ನಿನ್ನೆ ರಾತ್ರಿ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಝೈದ್ ಅವರು NEET ನಲ್ಲಿ ತನ್ನ ಎರಡನೇ ಪ್ರಯತ್ನಕ್ಕೆ ತಯಾರಿ ನಡೆಸುತ್ತಿದ್ದ ಎಂಬುದು ತಿಳಿದುಬಂದಿದೆ.
ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದು, ಯುವಕನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಕೋಟಾ ತಲುಪಿದ ನಂತರ ಶವಪರೀಕ್ಷೆ ನಡೆಸಲಾಗುವುದು. ಯಾವುದೇ ಸೂಸೈಡ್ ನೋಟ್ ಇನ್ನೂ ಪತ್ತೆಯಾಗಿಲ್ಲ, ಯಾವ ಕಾರಣಕ್ಕಾಗಿ ಝೈದ್ ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು ಎಂಬುದರ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ