IIT Delhi: ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

IIT Delhi: ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ದೆಹಲಿ ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on:Jul 09, 2023 | 3:56 PM

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶನಿವಾರ ತಡರಾತ್ರಿ ಕ್ಯಾಂಪಸ್‌ನಲ್ಲಿರುವ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಆಯುಷ್ ಅಶ್ನಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಆಯುಷ್ ಈ ವರ್ಷ ಬಿ.ಟೆಕ್ ಅಂತಿಮ ಪರೀಕ್ಷೆಗೆ ಹಾಜರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಕೊಠಡಿಯಿಂದ ಇದುವರೆಗೆ ಯಾವುದೇ ಸೂಸೈಡ್ ನೋಟು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಯುಷ್ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ ಈ ಘಟನೆ ವರದಿಯಾಗಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳ ಮೂಲಕ ಶಿಕ್ಷಣ ನೀಡಲು ಮುಂದಾದ ಐಐಟಿ ಮದ್ರಾಸ್

ಉತ್ತರ ಪ್ರದೇಶದ ರಾಂಪುರದ ವಿದ್ಯಾರ್ಥಿಯು ಎರಡು ತಿಂಗಳ ಹಿಂದೆಯಷ್ಟೇ ಕೋಟಾಕ್ಕೆ ಸ್ಥಳಾಂತರಗೊಂಡಿದ್ದರು, ಅವರು ಕಠಿಣವಾದ ಐಐಟಿ ಜೆಇಇಯನ್ನು ಪೂರೈಸಲು ಕೋಚಿಂಗ್ ತೆಗೆದುಕೊಳ್ಳುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ನೇಹಿತ ಊರಿಗೆ ಹೋಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:56 pm, Sun, 9 July 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್