IIT Delhi: ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

IIT Delhi: ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ದೆಹಲಿ ಪೊಲೀಸ್
Image Credit source: NDTV

Updated on: Jul 09, 2023 | 3:56 PM

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶನಿವಾರ ತಡರಾತ್ರಿ ಕ್ಯಾಂಪಸ್‌ನಲ್ಲಿರುವ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಆಯುಷ್ ಅಶ್ನಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಆಯುಷ್ ಈ ವರ್ಷ ಬಿ.ಟೆಕ್ ಅಂತಿಮ ಪರೀಕ್ಷೆಗೆ ಹಾಜರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಕೊಠಡಿಯಿಂದ ಇದುವರೆಗೆ ಯಾವುದೇ ಸೂಸೈಡ್ ನೋಟು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಯುಷ್ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ ಈ ಘಟನೆ ವರದಿಯಾಗಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳ ಮೂಲಕ ಶಿಕ್ಷಣ ನೀಡಲು ಮುಂದಾದ ಐಐಟಿ ಮದ್ರಾಸ್

ಉತ್ತರ ಪ್ರದೇಶದ ರಾಂಪುರದ ವಿದ್ಯಾರ್ಥಿಯು ಎರಡು ತಿಂಗಳ ಹಿಂದೆಯಷ್ಟೇ ಕೋಟಾಕ್ಕೆ ಸ್ಥಳಾಂತರಗೊಂಡಿದ್ದರು, ಅವರು ಕಠಿಣವಾದ ಐಐಟಿ ಜೆಇಇಯನ್ನು ಪೂರೈಸಲು ಕೋಚಿಂಗ್ ತೆಗೆದುಕೊಳ್ಳುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ನೇಹಿತ ಊರಿಗೆ ಹೋಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 3:56 pm, Sun, 9 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us