ಐಐಟಿ ಗುವಾಹಟಿ ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ಶವವಾಗಿ ಪತ್ತೆ

|

Updated on: Apr 12, 2024 | 11:24 AM

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)-ಗುವಾಹಟಿಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್​ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಿಟೆಕ್ ಮೊದಲ ವರ್ಷದ ವಿದ್ಯಾರ್ಥಿ ಬುಧವಾರ ರಾತ್ರಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಐಐಟಿ ಗುವಾಹಟಿ ವಿದ್ಯಾರ್ಥಿ ಹಾಸ್ಟೆಲ್​ ಕೊಠಡಿಯಲ್ಲಿ ಶವವಾಗಿ ಪತ್ತೆ
ವಿದ್ಯಾರ್ಥಿ
Image Credit source: NDTV
Follow us on

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)-ಗುವಾಹಟಿಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್​ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಿಟೆಕ್ ಮೊದಲ ವರ್ಷದ ವಿದ್ಯಾರ್ಥಿ ಬುಧವಾರ ರಾತ್ರಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಅವರ ಕೊಠಡಿಯಿಂದ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ತನ್ನ ರೂಮ್​ ಮೇಟ್​ ಇಲ್ಲದ ಸಮಯದಲ್ಲಿ ವಿದ್ಯಾರ್ಥಿ ದುಡುಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಿಹಾರ ಮೂಲದ ವಿದ್ಯಾರ್ಥಿಯ ಕುಟುಂಬದವರು ಸಂಸ್ಥೆಯ ನಿರ್ಲಕ್ಷ್ಯದಿಂದ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಒತ್ತಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ:  ಕೇರಳ ವಿದ್ಯಾರ್ಥಿ ಆತ್ಮಹತ್ಯೆ; ಸಾಯುವ ಮುನ್ನ 29 ಗಂಟೆ ನಿರಂತರ ಹಲ್ಲೆ? ಸಿಬಿಐಗಿನ್ನೂ ಹಸ್ತಾಂತರವಾಗಿಲ್ಲವಾ ದಾಖಲೆಗಳು?

ನಾವು ಎಲ್ಲಾ ಸಂಭಾವ್ಯ ಕೋನಗಳನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 10 ರಂದು ಐಐಟಿ ಗುವಾಹಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬನ ಸಾವಿನ ದುರದೃಷ್ಟಕರ ಸುದ್ದಿಯನ್ನು ಹಂಚಿಕೊಳ್ಳಲು ನೋವಾಗುತ್ತಿದೆ ಎಂದು ಐಐಟಿ ಗುವಾಹಟಿ ಹೇಳಿದೆ.

ಜನವರಿಯಲ್ಲಿ, ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿನಿಯೊಬ್ಬಳು ನ್ಯೂ ಇಯರ್ ಪಾರ್ಟಿಯ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಬಳಿಕ ಆಕೆ ಮೃತಪಟ್ಟಿದ್ದಳು.

ಐಐಟಿ ಗುವಾಹಟಿಯ ಮತ್ತೊಬ್ಬ ವಿದ್ಯಾರ್ಥಿಯನ್ನು ಐಸಿಸ್‌ಗೆ ಸೇರುತ್ತೇನೆ ಎಂದು ಹೇಳಿಕೊಂಡಿದ್ದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ