ಐಐಟಿ ಕಾನ್ಪುರದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ, ತಿಂಗಳಲ್ಲಿ ಮೂರನೇ ಘಟನೆ

ಐಐಟಿ ಕಾನ್ಪುರದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ-ಕಾನ್ಪುರ) ಪಿಎಚ್‌ಡಿ ವಿದ್ಯಾರ್ಥಿನಿ ಗುರುವಾರ ಬೆಳಗ್ಗೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಒಂದು ತಿಂಗಳಲ್ಲಿ ಸಂಸ್ಥೆಯಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದೆ.

ಐಐಟಿ ಕಾನ್ಪುರದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ, ತಿಂಗಳಲ್ಲಿ ಮೂರನೇ ಘಟನೆ
ಸಾವುImage Credit source: India Today
Follow us
ನಯನಾ ರಾಜೀವ್
|

Updated on: Jan 18, 2024 | 3:32 PM

ಐಐಟಿ ಕಾನ್ಪುರ(IIT Kanpur)ದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ-ಕಾನ್ಪುರ) ಪಿಎಚ್‌ಡಿ ವಿದ್ಯಾರ್ಥಿನಿ ಗುರುವಾರ ಬೆಳಗ್ಗೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಒಂದು ತಿಂಗಳಲ್ಲಿ ಸಂಸ್ಥೆಯಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದೆ.

ಪೊಲೀಸರ ಪ್ರಕಾರ, ಸಂಶೋಧನಾ ವಿದ್ಯಾರ್ಥಿ ಪ್ರಿಯಾಂಕಾ ಜಾರ್ಖಂಡ್‌ನ ದುಮ್ಕಾ ಮೂಲದವರು, ಪ್ರಿಯಾಂಕಾ ಅವರ ತಂದೆ ನರೇಂದ್ರ ಜೈಸ್ವಾಲ್ ಅವರ ಹಾಸ್ಟೆಲ್‌ನ ಮ್ಯಾನೇಜರ್ ಅನ್ನು ಸಂಪರ್ಕಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ, ಅವರ ಕರೆಗಳಿಗೆ ಮಗಳು ಉತ್ತರಿಸುತ್ತಿಲ್ಲ ಎಂದು ತಿಳಿಸಿದ್ದರು.

ಹಾಸ್ಟೆಲ್ ಮ್ಯಾನೇಜರ್ ರಿತು ಪಾಂಡೆ, ತನ್ನ ಹಾಸ್ಟೆಲ್ ರೂಮ್ ತಲುಪಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಕಂಡು ಬಂತು. ಬಹಳ ಹೊತ್ತಾದರೂ ಪ್ರಿಯಾಂಕಾ ಬಾಗಿಲು ತೆರೆಯದೇ ಇದ್ದಾಗ ಪಾಂಡೆ ಬಲವಂತವಾಗಿ ಆಕೆಯ ಕೋಣೆಗೆ ನುಗ್ಗಿದ್ದರು. ಸೀಲಿಂಗ್ ಫ್ಯಾನ್‌ಗೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡಿರುವುದನ್ನು ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಐಐಟಿ ಗುವಾಹಟಿಯ ವಿದ್ಯಾರ್ಥಿನಿ ಹೊಸ ವರ್ಷದ ಪಾರ್ಟಿ ಬಳಿಕ ಹೋಟೆಲ್​ ರೂಂನಲ್ಲಿ ಶವವಾಗಿ ಪತ್ತೆ

ಫೋರೆನ್ಸಿಕ್ಸ್ ತಂಡದೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಐಐಟಿ-ಕಾನ್ಪುರ ಆಡಳಿತದ ಮೂಲಗಳ ಪ್ರಕಾರ, ಪ್ರಿಯಾಂಕಾ ಅವರು ಡಿಸೆಂಬರ್ 29, 2023 ರಂದು ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಸಂಸ್ಥೆಯ ಪಿಎಚ್‌ಡಿಗೆ ಪ್ರವೇಶ ಪಡೆದಿದ್ದಳು.

ಘಟನೆಯ ಬಗ್ಗೆ ಪ್ರಿಯಾಂಕಾ ಅವರ ಕುಟುಂಬಕ್ಕೆ ತಿಳಿಸಲಾಯಿತು ಮತ್ತು ಅವರು ಶೀಘ್ರದಲ್ಲೇ ಕಾನ್ಪುರಕ್ಕೆ ತೆರಳಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ, ಮಂಗಳವಾರ ಕಾನ್ಪುರದ ಐಐಟಿಯ ಹಾಸ್ಟೆಲ್ ಕೊಠಡಿಯೊಳಗೆ ಸಂಶೋಧನಾ ವಿದ್ಯಾರ್ಥಿಯೊಬ್ಬ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು . ಪಲ್ಲವಿ ಚಿಲ್ಕಾ ಐಐಟಿ ಕಾನ್ಪುರದಲ್ಲಿ ಜೈವಿಕ ವಿಜ್ಞಾನ ಮತ್ತು ಜೈವಿಕ ಇಂಜಿನಿಯರಿಂಗ್ ವಿಭಾಗದಿಂದ ತಮ್ಮ ಪೋಸ್ಟ್‌ಡಾಕ್ಟರಲ್ ಸಂಶೋಧನೆಯನ್ನು ಮುಂದುವರಿಸುತ್ತಿದ್ದರು.

ಪಿಟಿಐ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಸ್ವಚ್ಛತಾ ಸಿಬ್ಬಂದಿ ಮಧ್ಯಾಹ್ನ ಚಿಲ್ಕಾ ಅವರ ರೂಮಿನ ಬಾಗಿಲು ತಟ್ಟಿದ್ದರು ಮತ್ತು ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ವ್ಯಕ್ತಿ ಒಳಗೆ ಇಣುಕಿ ನೋಡಿದಾಗ ಚಿಲ್ಕಾ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ