ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ನಿಧನ

ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.

ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ನಿಧನ
ಸಮೀರ್Image Credit source: India Today
Follow us
ನಯನಾ ರಾಜೀವ್
|

Updated on: Dec 24, 2023 | 8:07 AM

ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.

ಖಂಡೇಕರ್ ಅವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾತನಾಡುತ್ತಿದ್ದರು. ಖಂಡೇಕರ್ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ಎದೆಯಲ್ಲಿ ಸ್ಬಲ್ಪ ನೋವು ಕಾಣಿಸಿಕೊಂಡಿತ್ತು. ಅವರು ಭಾವುಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಸ್ವಲ್ಪ ಸಮಯದ ನಂತರ ಬೆವರು ಬರಲು ಶುರುವಾಗಿತ್ತು. ವೇದಿಕೆ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯ ನೀರಜ್ ಕುಮಾರ್ ಪ್ರಕಾರ, ಆಸ್ಪತ್ರೆಗೆ ಕರೆತರುವ ಮೊದಲೇ ಖಂಡೇಕರ್ ಮೃತಪಟ್ಟಿದ್ದರು.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಪ್ರೊಫೆಸರ್ ಅವರ ಮಗ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಲಿದ್ದಾರೆ. ಖಂಡೇಕರ್ ಅವರು 2019 ರಿಂದ ಕೊಲೆಸ್ಟ್ರಾಲ್‌ನಿಂದ ಬಳಲುತ್ತಿದ್ದರು ಮತ್ತು ನಿರಂತರ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ತಂದೆ-ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಮತ್ತಷ್ಟು ಓದಿ: ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಜನಿಸಿದ ಖಾಂಡೇಕರ್ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ಓದಿದ್ದು, ಪಿಎಚ್‌ಡಿಗಾಗಿ ಜರ್ಮನಿಗೆ ತೆರಳಿದ್ದರು. 2004 ರಲ್ಲಿ, ಅವರು ಐಐಟಿ ಕಾನ್ಪುರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇರಿದರು, ನಂತರ ಅವರು ಸಹ ಪ್ರಾಧ್ಯಾಪಕರಾದರು. ನಂತರ ಅವರನ್ನು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾಗಿದ್ದರು. ಅವರ ಹೆಸರಿಗೆ ಎಂಟು ಪೇಟೆಂಟ್‌ಗಳೂ ಇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ