ಗೋಮೂತ್ರದಲ್ಲಿರುವ ಔಷಧೀಯ ಗುಣಗಳ ಕೊಂಡಾಡಿದ ಐಐಟಿ ಮದ್ರಾಸ್ ನಿರ್ದೇಶಕ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಇದರಲ್ಲಿ ಅವರು ಗೋಮೂತ್ರದ ಔಷಧೀಯ ಗುಣಗಳನ್ನು ಹೊಗಳಿದ್ದಾರೆ ಎಂದು ಹೇಳಲಾಗುತ್ತದೆ. ದೇಶಿ ತಳಿಯ ಗೋವುಗಳನ್ನು ಸಂರಕ್ಷಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಮಹತ್ವ ಕುರಿತು ಅವರು ಮಾತನಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಗೋಮೂತ್ರದಲ್ಲಿರುವ ಔಷಧೀಯ ಗುಣಗಳ ಕೊಂಡಾಡಿದ ಐಐಟಿ ಮದ್ರಾಸ್ ನಿರ್ದೇಶಕ
ವಿ. ಕಾಮಕೋಟಿImage Credit source: India Today
Follow us
ನಯನಾ ರಾಜೀವ್
|

Updated on: Jan 20, 2025 | 1:56 PM

ಗೋಮೂತ್ರದ ಔಷಧೀಯ ಗುಣಗಳ ಬಗ್ಗೆ ದೇಶದಲ್ಲಿ ಹಲವು ಬಾರಿ ಚರ್ಚೆ ನಡೆದಿದೆ. ಈ ಬಗ್ಗೆ ವ್ಯತಿರಿಕ್ತ ಹೇಳಿಕೆಗಳು ಕೂಡ ಬಂದಿವೆ. ಕೆಲವರು ಗೋಮೂತ್ರ ಆರೋಗ್ಯಕರ ಎಂದು ಹೇಳಿದರೆ ಇನ್ನು ಕೆಲವರು ಈ ಹೇಳಿಕೆಯನ್ನು ಲೇವಡಿ ಮಾಡುತ್ತಾರೆ. ಇದೀಗ ಐಐಟಿ ಮದ್ರಾಸ್ ನಿರ್ದೇಶಕ ವಿ.ಕಾಮಕೋಟಿ ಅವರು ಗೋಮೂತ್ರದ ‘ಔಷಧೀಯ ಗುಣ’ಗಳನ್ನು ಶ್ಲಾಘಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪಿಟಿಐ ವರದಿಯ ಪ್ರಕಾರ, ಕಾಮಕೋಟಿಯು ಗೋಮೂತ್ರದ ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಜೀರ್ಣಕಾರಿ ಗುಣಲಕ್ಷಣಗಳಿವೆ ಎಂದು ಹೇಳಿರುವುದು ವೀಡಿಯೊದಲ್ಲಿ ಕಂಡುಬರುತ್ತದೆ. ದೇಶಿ ತಳಿಯ ಗೋವುಗಳನ್ನು ಸಂರಕ್ಷಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದರ ಮಹತ್ವ ಕುರಿತು ಅವರು ಮಾತನಾಡಿದರು.

ತೀವ್ರ ಜ್ವರದಿಂದ ಬಳಲುತ್ತಿದ್ದ ನಂತರ ಗೋಮೂತ್ರ ಸೇವಿಸಿ ಗುಣಮುಖನಾದ ಸನ್ಯಾಸಿಯೊಬ್ಬನ ಜೀವನದ ಪ್ರಸಂಗವನ್ನು ಹೇಳುವಾಗ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಇರಿಟೇಬಲ್ ಬವೆಲ್ ಸಿಂಡ್ರೋಮ್, ದೊಡ್ಡ ಕರುಳಿಗೆ ಸಂಬಂಧಿಸಿದ ಕಾಯಿಲೆಯಂತಹ ಸಮಸ್ಯೆಗಳಿಗೆ ಇದು ಉಪಯುಕ್ತವಾಗಿದೆ ಎಂದು ಹೇಳಿದರು.

ಗೋಮೂತ್ರದ ಕುರಿತ ಅವರ ಹೇಳಿಕೆಯು ಸತ್ಯಕ್ಕೆ ವಿರುದ್ಧವಾಗಿದೆ ಮತ್ತು ನಾಚಿಕೆಗೇಡಿನ ಸಂಗತಿ ಎಂದು ವಿಚಾರವಾದಿ ಸಂಘಟನೆ ಡಿಎಂಕೆ ಟೀಕಿಸಿದೆ. ಕೇಂದ್ರ ಸರ್ಕಾರ ದೇಶದ ಶಿಕ್ಷಣವನ್ನು ಹಾಳು ಮಾಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ.

ಮತ್ತಷ್ಟು ಓದಿ: ಕೇರಳ ಸರ್ಕಾರದ ಆಯುರ್ವೇದ ಕಂಪನಿಯಿಂದ ‘ಪಂಚಗವ್ಯ ಘೃತ’: ವೈರಲ್ ಪೋಸ್ಟ್​ ಹಿಂದಿರುವ ನಿಜ ಸಂಗತಿಯಿದು

ಕಾಂಗ್ರೆಸ್ ನಾಯಕ ಕಾರ್ತಿ ಪಿ ಚಿದಂಬರಂ ಹೇಳಿಕೆಯನ್ನು ಖಂಡಿಸಿದ್ದಾರೆ ಮತ್ತು ಐಐಟಿ ಮದ್ರಾಸ್ ನಿರ್ದೇಶಕರು ಸುಳ್ಳು ವಿಜ್ಞಾನವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಅವರು ನಿರ್ದೇಶಕರ ಹೇಳಿಕೆಯನ್ನು ಟೀಕಿಸಿದ್ದಾರೆ ಮತ್ತು ಅವರನ್ನು ಸಂಸ್ಥೆಯಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು