ಅಕ್ರಮ ನಿರಾಶ್ರಿತರು ಗಂಭೀರ ಸವಾಲಾಗಿದ್ದಾರೆ; ವಲಸಿಗರ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನಖರ್ ಕಳವಳ
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ನಿಲುವು ತೆಗೆದುಕೊಳ್ಳುವಂತೆ ಉಪರಾಷ್ಟ್ರಪತಿ ಜಗದೀಪ್ ಧನಖರ್ ಯುವಕರಿಗೆ ಕರೆ ನೀಡಿದ್ದಾರೆ. ಭಾರತವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿರುವವರನ್ನು ಎದುರಿಸುವುದು ಅತ್ಯಗತ್ಯ ಎಂದಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ರಾಜ್ಯದ ನಾಯಕತ್ವವನ್ನು ಅವರು ಶ್ಲಾಘಿಸಿದ್ದು, ಅದರ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದ್ದಾರೆ.
ಲಕ್ನೋ: ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಜನರು ಮತ್ತು ಸಂಸ್ಥೆಗಳ ವಿರುದ್ಧ ನಿಲ್ಲುವಂತೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ದೇಶದ ಯುವಕರಿಗೆ ಕರೆ ನೀಡಿದ್ದಾರೆ. ನಮ್ಮ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಿಗೆ ಗಂಭೀರವಾದ ಸವಾಲುಗಳನ್ನು ಒಡ್ಡುವ ಕೋಟ್ಯಂತರ ಅಕ್ರಮ ನಿರಾಶ್ರಿತರು ಭಾರತದಲ್ಲಿದ್ದಾರೆ ಎಂದು ಲಕ್ನೋದಲ್ಲಿ ಉತ್ತರ ಪ್ರದೇಶದ 76ನೇ ಸಂಸ್ಥಾಪನಾ ದಿನಾಚರಣೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ.
ಅಕ್ರಮ ವಲಸೆ ಗಂಭೀರ ಕಳವಳದ ವಿಷಯವಾಗಿದೆ. ಏಕೆಂದರೆ, ಅವರು ಈಗ ಚುನಾವಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ. ಜಗತ್ತಿನಾದ್ಯಂತ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಅಂತಹ ಸಮಸ್ಯೆಗಳನ್ನು ಪರಿಹರಿಸುತ್ತಿವೆ ಮತ್ತು ಭಾರತವೂ ಅದರ ಸ್ಥಿರತೆ ಮತ್ತು ಘನತೆಗಾಗಿ ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮಹಾಕುಂಭಕ್ಕೆ ವಿದೇಶಗಳಿಂದ ಜನಪ್ರವಾಹ; ಋಷಿಕೇಶ, ವಾರಾಣಸಿ, ಹರಿದ್ವಾರಕ್ಕೂ ಭರ್ಜರಿ ಭಕ್ತರ ದಂಡು
ಭಾರತವನ್ನು ದುರ್ಬಲಗೊಳಿಸಲು ಕೆಲಸ ಮಾಡುವ ಮತ್ತು ರಾಷ್ಟ್ರವಿರೋಧಿ ಅಂಶಗಳೊಂದಿಗೆ ಕೈಜೋಡಿಸುವ ಶಕ್ತಿಗಳನ್ನು ಎದುರಿಸುವುದು ಮತ್ತು ತಟಸ್ಥಗೊಳಿಸುವುದು ಅತ್ಯಗತ್ಯ ಎಂದು ಉಪರಾಷ್ಟ್ರಪತಿ ಜಗದೀಪ್ ಧನಖರ್ ಮನವಿ ಮಾಡಿದ್ದಾರೆ. “ಯುವಕರು ಅಂತಹ ಬೆದರಿಕೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ತಮ್ಮ ಅಗಾಧ ಶಕ್ತಿಯನ್ನು ಬಳಸಬೇಕು” ಎಂದು ಅವರು ಹೇಳಿದ್ದಾರೆ.
#WATCH | Vice President Jagdeep Dhankhar attends the inaugural event of ‘Uttar Pradesh Divas’ organized in Lucknow on the occasion of Uttar Pradesh Foundation Day
Uttar Pradesh CM Yogi Adityanatha and Governor Anandiben Patel are also present pic.twitter.com/fHwlZgTPbL
— ANI (@ANI) January 24, 2025
ಫೆಬ್ರವರಿ 1ರಂದು ಮಹಾ ಕುಂಭ ಮೇಳದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಹ್ವಾನವನ್ನು ಸ್ವೀಕರಿಸುವುದಾಗಿ ಉಪರಾಷ್ಟ್ರಪತಿ ಜಗದೀಪ್ ಧನಖರ್ ಘೋಷಿಸಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ಪ್ರಯಾಗರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದಾಗಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ