ನೀಟ್​ ಪರೀಕ್ಷೆ ಅಕ್ರಮ ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿರುವ ನಿರ್ಧಾರ ಸ್ವಾಗತಿಸಿದ ಐಎಂಎ

ನೀಟ್​ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಐಎಂಎ ಸ್ವಾಗತಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಡೈರೆಕ್ಟರ್ ಜನರಲ್ ಅಂದರೆ ಎನ್‌ಟಿಎ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರದ ಕುರಿತು ಕೂಡ ಸಂತಸ ವ್ಯಕ್ತಪಡಿಸಿದೆ.

ನೀಟ್​ ಪರೀಕ್ಷೆ ಅಕ್ರಮ ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿರುವ ನಿರ್ಧಾರ ಸ್ವಾಗತಿಸಿದ ಐಎಂಎ
ವಿದ್ಯಾರ್ಥಿಗಳು
Follow us
ನಯನಾ ರಾಜೀವ್
|

Updated on: Jun 24, 2024 | 9:58 AM

ನೀಟ್​-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಸ್ವಾಗತಿಸಿದೆ. ನೀಟ್​-ಯುಜಿಯಲ್ಲಿನ ಅಕ್ರಮಗಳನ್ನು ಗಂಭೀರವಾಗಿ ತನಿಖೆ ಮಾಡಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ನಾವು ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಡೈರೆಕ್ಟರ್ ಜನರಲ್ ಅಂದರೆ ಎನ್‌ಟಿಎ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರವನ್ನು ಐಎಂಎ ಸ್ವಾಗತಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತೆಗೆದುಹಾಕಲು ಕಠಿಣ ಕಾನೂನುಗಳನ್ನು ಜಾರಿಗೊಳಿಸುವ ಸರ್ಕಾರದ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಐಎಂಎ ಹೇಳಿಕೆ ತಿಳಿಸಿದೆ.

ವಿದ್ಯಾರ್ಥಿಗಳೇ ಭಾರತದ ಭವಿಷ್ಯ. ಸರ್ಕಾರ ನೀಡಿದ ಭರವಸೆಯಂತೆ ಬಲಿಷ್ಠ ವ್ಯವಸ್ಥೆಯನ್ನು ನಿರೀಕ್ಷಿಸುತ್ತೇವೆ. ಪರೀಕ್ಷೆಗಳಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಕಾನೂನು ಜಾರಿಗೆ ತರುವುದರೊಂದಿಗೆ ಪರೀಕ್ಷಾ ಅಧಿಕಾರಿಗಳು, ಸೇವಾ ಪೂರೈಕೆದಾರರು ಅಥವಾ ಇತರ ಸಂಸ್ಥೆಗಳನ್ನು ಒಳಗೊಂಡ ಸಂಘಟಿತ ಅಪರಾಧ ಪ್ರಕರಣಗಳಲ್ಲಿ, ಅಪರಾಧಿಗಳಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ.

ಮತ್ತಷ್ಟು ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ

ನೀಟ್​-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಈ ಪ್ರಕರಣದ ಮೊದಲ ಎಫ್‌ಐಆರ್ ಕೂಡ ಸಿಬಿಐ ಭಾನುವಾರ ದಾಖಲಿಸಿದೆ. ಆಪಾದಿತ ಅಕ್ರಮಗಳ ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವುದಾಗಿ ಶಿಕ್ಷಣ ಸಚಿವಾಲಯ ಘೋಷಿಸಿದ ಒಂದು ದಿನದ ನಂತರ ಸಿಬಿಐನ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ನೀಟ್​-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಎನ್​ಟಿಎ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23 ರ ಶನಿವಾರ ನಡೆಯಲಿರುವ ನೀಟ್​-ಪಿಜಿ ಪರೀಕ್ಷೆಯನ್ನು ಮುಂದೂಡಿದೆ. ನೀಟ್-ಯುಜಿಯಲ್ಲಿ ಗ್ರೇಸ್ ಅಂಕ ಪಡೆದ ವಿದ್ಯಾರ್ಥಿಗಳಿಗೆ ಭಾನುವಾರ ಮರು ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ಒಟ್ಟು 1563 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು, ಆದರೆ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ