AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2023: ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ 20ಕ್ಕೂ ಅಧಿಕ ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕೆಲವು ರಾಜ್ಯಗಳಲ್ಲಿ ಮುಂಗಾರು(Monsoon) ಶುರುವಾದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಉಷ್ಣಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Monsoon 2023: ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ 20ಕ್ಕೂ ಅಧಿಕ ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಮಳೆImage Credit source: India Today
ನಯನಾ ರಾಜೀವ್
|

Updated on: Jun 26, 2023 | 10:43 AM

Share

ಕೆಲವು ರಾಜ್ಯಗಳಲ್ಲಿ ಮುಂಗಾರು(Monsoon) ಶುರುವಾದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಉಷ್ಣಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂನ್ 29ರವರೆಗೂ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್,ರಾಜಸ್ಥಾನ, ಛತ್ತೀಸ್​ಗಢ, ಒಡಿಶಾ, ಕೇರಳ, ಮೇಘಾಲಯ, ಪಶ್ಚಿಮ ಬಂಗಾಳ, ಜಾರ್ಖಂಡ್, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡ, ಹರ್ಯಾಣ, ಉತ್ತರ ಪ್ರದೇಶ, ದೆಹಲಿ,ಅರುಣಾಚಲಪ್ರದೇಶ, ಕರ್ನಾಟಕ, ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ.

ಮಧ್ಯಪ್ರದೇಶದ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದ್ದು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಮೇಘಾಲಯ, ಒಡಿಶಾ, ಛತ್ತೀಸ್‌ಗಢ ಮತ್ತು ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ‘ಹಳದಿ’ ಮತ್ತು ‘ಆರೆಂಜ್’ ಅಲರ್ಟ್‌ಗಳನ್ನು ನೀಡಲಾಗಿದೆ.

ಮತ್ತಷ್ಟು ಓದಿ: Monsoon 2023: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಪೂರ್ವ ಮತ್ತು ಈಶಾನ್ಯ ಭಾರತ ಜೂನ್ 26 ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಜೂನ್ 28 ಮತ್ತು ಜೂನ್ 29 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಮಳೆಯಾಗಲಿದ್ದು, ಜೂನ್ 29 ರಂದು ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.

ವಾಯುವ್ಯ ಭಾರತ ಜೂನ್ 28 ರಂದು ಪೂರ್ವ ರಾಜಸ್ಥಾನದ ಮೇಲೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಜೂನ್ 26 ರಂದು ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಬೀಳಲಿದೆ.

ಮಧ್ಯ ಭಾರತ ಮುಂದಿನ 5 ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

ದಕ್ಷಿಣ ಭಾರತ ಮುಂದಿನ 5 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಮತ್ತು ಮುಂದಿನ 2 ದಿನಗಳಲ್ಲಿ ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್ 27 ರಂದು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ. ಜೂನ್ 29 ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಪಶ್ಚಿಮ ಭಾರತ ಜೂನ್ 26 ರಂದು ಮಹಾರಾಷ್ಟ್ರ ಮತ್ತು ಗೋವಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮತ್ತೊಂದೆಡೆ, ಸೌರಾಷ್ಟ್ರ ಮತ್ತು ಕಚ್ ಸೇರಿದಂತೆ ಗುಜರಾತ್‌ನ ಕೆಲವು ಭಾಗಗಳಲ್ಲಿ ಜೂನ್ 29 ರವರೆಗೆ ಲಘು ಅಥವಾ ಸಾಧಾರಣ ಮಳೆಯಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ