Heatwave Alert: ಈ ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ತಾಪಮಾನ 4 ಡಿಗ್ರಿಗಳಷ್ಟು ಹೆಚ್ಚುವ ಸಾಧ್ಯತೆ

ದೇಶದ ವಿವಿಧ ರಾಜ್ಯಗಳು ಮಧ್ಯೆ ಮಧ್ಯೆ ಮಳೆ ಕಂಡರೂ ಕೂಡ, ತಾಪಮಾನದಲ್ಲಿ ತುಂಬಾ ವ್ಯತ್ಯಾಸವನ್ನು ಅನುಭವಿಸಿಲ್ಲ. ಕೆಲವು ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ಗರಿಷ್ಠ ಉಷ್ಣಾಂಶ 4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heatwave Alert: ಈ ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ತಾಪಮಾನ 4 ಡಿಗ್ರಿಗಳಷ್ಟು ಹೆಚ್ಚುವ ಸಾಧ್ಯತೆ
ತಾಪಮಾನImage Credit source: The Leaflet
Follow us
ನಯನಾ ರಾಜೀವ್
|

Updated on: Apr 13, 2023 | 7:28 AM

ದೇಶದ ವಿವಿಧ ರಾಜ್ಯಗಳು ಮಧ್ಯೆ ಮಧ್ಯೆ ಮಳೆ ಕಂಡರೂ ಕೂಡ, ತಾಪಮಾನದಲ್ಲಿ ತುಂಬಾ ವ್ಯತ್ಯಾಸವನ್ನು ಅನುಭವಿಸಿಲ್ಲ. ಕೆಲವು ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ಗರಿಷ್ಠ ಉಷ್ಣಾಂಶ 4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಶಾಖದ ಅಲೆ ವಿಪರೀತವಾಗಲಿದೆ. ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣದಲ್ಲಿ ಗರಿಷ್ಠ ಉಷ್ಣಾಂಶವು 40-42 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಜಮ್ಮು ಕಾಶ್ಮೀರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ 40 ಡಿಗ್ರಿಗಿಂತ ಕಡಿಮೆ ತಾಪಮಾನವಿದೆ.

ಏಪ್ರಿಲ್ 13 ರಿಂದ 17ರ ಒಳಗೆ ಪಶ್ಚಿಮ ಬಂಗಾಳದಲ್ಲಿ, ಏಪ್ರಿಲ್ 13 ರಿಂದ 15ರ ನಡುವೆ ಒಡಿಶಾದಲ್ಲಿ ಶಾಖದ ಅಲೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಪಶ್ಚಿಮ ಭಾರತದ ಬಗ್ಗೆ ಮಾತನಾಡುವುದಾದರೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದೆಹಲಿ-ಎನ್‌ಸಿಆರ್ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ತಾಪ ಶುರುವಾಗಿದೆ. ಬುಧವಾರ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿತ್ತು. ಅದೇ ಸಮಯದಲ್ಲಿ, ಗರಿಷ್ಠ ತಾಪಮಾನವು 36.7 ಡಿಗ್ರಿ ಸೆಲ್ಸಿಯಸ್ ಆಗಿತ್ತು, ಇದು ಸಾಮಾನ್ಯಕ್ಕಿಂತ ಹೆಚ್ಚು ಎಂದೇ ಹೇಳಬಹುದು.

ಮತ್ತಷ್ಟು ಓದಿ: Karnataka Rain: ಮುಂದಿನ ಒಂದೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಏಪ್ರಿಲ್ 15-16 ರ ಹೊತ್ತಿಗೆ, ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಏಪ್ರಿಲ್ 16-17 ರ ಹೊತ್ತಿಗೆ ಅದು 40 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಬಯಲು ಪ್ರದೇಶದಲ್ಲಿ ತಾಪಮಾನವು ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ತಲುಪಿದರೆ, ಅದನ್ನು ಶಾಖದ ಅಲೆ ಎಂದು ಪರಿಗಣಿಸಲಾಗುತ್ತದೆ. ಮತ್ತೊಂದೆಡೆ, ಕರಾವಳಿ ಪ್ರದೇಶಗಳಲ್ಲಿ ತಾಪಮಾನವು ಕನಿಷ್ಠ 37 ಡಿಗ್ರಿ ಸೆಲ್ಸಿಯಸ್ ತಲುಪಿದರೆ, ಅದನ್ನು ಬಿಸಿ ಗಾಳಿ ಎಂದು ಕರೆಯಲಾಗುತ್ತದೆ.

ದೆಹಲಿ ಅಥವಾ ಅದರ ಸುತ್ತಮುತ್ತಲಿನ ಪ್ರದೇಶಗಳು ಮಾತ್ರವಲ್ಲದೆ, ದೇಶದ ಹಲವು ಭಾಗಗಳಲ್ಲಿ, ಮುಂದಿನ 2-3 ದಿನಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿಗಳಷ್ಟು ಹೆಚ್ಚಾಗಬಹುದು. ‘ಸ್ಕೈಮೆಟ್ ವೆದರ್’ ಪ್ರಕಾರ, ಮುಂದಿನ ಒಂದು ಅಥವಾ ಎರಡು ದಿನಗಳ ಕಾಲ ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಗಂಟೆಗೆ 25 ರಿಂದ 35 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಲಘು ಬಿರುಗಾಳಿ ಮತ್ತು ಚಂಡಮಾರುತ ಸಂಭವಿಸಬಹುದು. ಮತ್ತೊಂದೆಡೆ, ದಕ್ಷಿಣ ಗುಜರಾತ್, ಕೊಂಕಣ, ಗೋವಾ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಅರುಣಾಚಲ ಪ್ರದೇಶದಲ್ಲಿ ಲಘು ಮಳೆಯಾಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ