Monsoon 2024: ಮಹಾರಾಷ್ಟ್ರ, ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಹಾಮಳೆ, ಹವಾಮಾನ ಇಲಾಖೆ ಎಚ್ಚರಿಕೆ

ಮುಂಗಾರು ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಮುಂಬೈನಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Monsoon 2024: ಮಹಾರಾಷ್ಟ್ರ, ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಹಾಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ಮಳೆImage Credit source: India Today
Follow us
|

Updated on: Jun 11, 2024 | 2:07 PM

ದೇಶಾದ್ಯಂತ ಮುಂಗಾರು ಮಳೆಯ ಆರ್ಭಟ ಶುರುವಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಾಗಲಿದೆ, ದಕ್ಷಿಣ ಹಾಗೂ ಮಧ್ಯಮಹಾರಾಷ್ಟ್ರ, ಮರಾಠವಾಡ, ಕೊಂಕಣ, ಹಾಗೂ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹೇಳಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಸೋಮವಾರ ಸಂಜೆ ಮುಂಬೈನಲ್ಲಿ ಭಾರಿ ಮಳೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 50 ಮಿಲಿಮೀಟರ್​ ಮಳೆಯಾಗಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಉಪ-ಹಿಮಾಲಯ ಪಶ್ಚಿಮದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.

ಮುಂದಿನ ಏಳು ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ, ಜೂನ್​ 11 ರಿಂದ 15ರವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಹೆಚ್ಚು ಮಳೆ ಸುರಿಯಲಿದೆ. ಜೂನ್ 13, 14ರಂದು ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಜೋರಿರಲಿದೆ ವರುಣನ ಆರ್ಭಟ, ಆರೆಂಜ್​ ಅಲರ್ಟ್​

ಬಿಹಾರ, ಒಡಿಶಾ, ಮಧ್ಯಪ್ರದೇಶ, ವಿದರ್ಭಾ, ಛತ್ತೀಸ್​ಗಢದಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್​ 11 ರಂದು ದಕ್ಷಿಣ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ