ದೇಶಾದ್ಯಂತ ಮುಂಗಾರು ಮಳೆಯ ಆರ್ಭಟ ಶುರುವಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಾಗಲಿದೆ, ದಕ್ಷಿಣ ಹಾಗೂ ಮಧ್ಯಮಹಾರಾಷ್ಟ್ರ, ಮರಾಠವಾಡ, ಕೊಂಕಣ, ಹಾಗೂ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹೇಳಿದೆ.
ಕರ್ನಾಟಕದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಸೋಮವಾರ ಸಂಜೆ ಮುಂಬೈನಲ್ಲಿ ಭಾರಿ ಮಳೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 50 ಮಿಲಿಮೀಟರ್ ಮಳೆಯಾಗಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಉಪ-ಹಿಮಾಲಯ ಪಶ್ಚಿಮದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.
ಮುಂದಿನ ಏಳು ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ, ಜೂನ್ 11 ರಿಂದ 15ರವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಹೆಚ್ಚು ಮಳೆ ಸುರಿಯಲಿದೆ.
ಜೂನ್ 13, 14ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಜೋರಿರಲಿದೆ ವರುಣನ ಆರ್ಭಟ, ಆರೆಂಜ್ ಅಲರ್ಟ್
ಬಿಹಾರ, ಒಡಿಶಾ, ಮಧ್ಯಪ್ರದೇಶ, ವಿದರ್ಭಾ, ಛತ್ತೀಸ್ಗಢದಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್ 11 ರಂದು ದಕ್ಷಿಣ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.
ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ