AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಂದಿನಿಂದ ಹೆಚ್ಚಲಿದೆ ಮಳೆ; ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​

ಕೇರಳ, ಕರ್ನಾಟಕ ಮತ್ತು ತಮಿಳುನಾಡು ಅಷ್ಟೇ ಅಲ್ಲದೆ, ರಾಷ್ಟ್ರರಾಜಧಾನಿ ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕೂಡ ಆಗಸ್ಟ್​ 29ರಿಂದ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಂದಿನಿಂದ ಹೆಚ್ಚಲಿದೆ ಮಳೆ; ಕೇರಳದ 6 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​
ಮಳೆಯ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 28, 2021 | 9:47 AM

Share

ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಇಂದಿನಿಂದ (ಆಗಸ್ಟ್​ 28) ಆಗಸ್ಟ್​ 30ರವರೆಗೆ ವಿಪರೀತ ಮಳೆ (Heavy Rainfall)ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳು, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಅದು ಮುಂದಿನ ಎರಡು ದಿನಗಳಲ್ಲಿ ಇನ್ನಷ್ಟು ವ್ಯಾಪಕವಾಗಿ ಸುರಿಯಲಿದೆ. ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ತಮಿಳುನಾಡು ಮತ್ತು ಕೇರಳದ ಘಟ್ಟ ಪ್ರದೇಶಗಳಲ್ಲಿ ಅಲ್ಲಲ್ಲಿ ಇಂದು ಮತ್ತು ಭಾನುವಾರ ಸಿಕ್ಕಾಪಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಅದರಲ್ಲೂ ಕೇರಳದಲ್ಲಿ ತುಂಬ ಮಳೆಬೀಳುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆ ಒಟ್ಟು 6 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಸದ್ಯ ನೈಋತ್ಯ ಮಾನ್ಸೂನ್​ ಪ್ರಭಾವ ಕೇರಳದಲ್ಲಿ ಹೆಚ್ಚಾಗಲಿದೆ ಎಂದು ಐಎಂಡಿ ತಿಳಿಸಿದೆ. ಆಗಸ್ಟ್​ 30ರವರೆಗೂ ಸಮುದ್ರಕ್ಕೆ ಇಳಿಯಬೇಡಿ ಎಂದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ನೈಋತ್ಯ ಮತ್ತು ಪಶ್ಚಿಮ ಮಧ್ಯ ಅರೇಬಿಯನ್​ ಸಮುದ್ರದ ಮೇಲೆ ಗಂಟೆಗೆ 50/60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಎಚ್ಚರಿಕೆಯಿಂದ ಇರಬೇಕು..ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದು ಐಎಂಡಿ ಸೂಚಿಸಿದೆ.

ದೆಹಲಿಯಲ್ಲೂ ಮಳೆ ರಾಷ್ಟ್ರರಾಜಧಾನಿ ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲೂ ಆಗಸ್ಟ್​ 29ರಿಂದ ಭರ್ಜರಿ ಮಳೆ ಸುರಿಯಲಿದೆ ಎಂದು ಐಎಂಡಿ ಹೇಳಿದೆ. ಮಾನ್ಸೂನ್​ನ ಕಡಿಮೆ ಒತ್ತಡ ಪ್ರದೇಶವು ಹಿಮಾಲಯದ ತಪ್ಪಲಿನಿಂದಲ ಬಯಲು ಪ್ರದೇಶಗಳ ಕಡೆಗೆ ಚಲಿಸುವ ಕಾರಣಕ್ಕೆ ಮಳೆ ಹೆಚ್ಚಲಿದೆ ಎಂದು ಹೇಳಲಾಗಿದೆ.  ಇದನ್ನೂ ಓದಿ: ಚಿಕ್ಕಮಗಳೂರು ಪೊಲೀಸರ ಬೃಹತ್​ ಬೇಟೆ; 1 ಕ್ವಿಂಟಲ್​ಗೂ ಹೆಚ್ಚು ತೂಕದ ಒಣ ಗಾಂಜಾ ತರಕಾರಿ ಗಾಡಿಯಲ್ಲಿ ಪತ್ತೆ, ಮೂವರು ವಶಕ್ಕೆ

India vs England: ಶತಕದತ್ತ ಪೂಜಾರ, ಅರ್ಧಶತಕದತ್ತ ಕೊಹ್ಲಿ: ಇಂಗ್ಲೆಂಡ್​ಗೆ ಶುರುವಾಗಿದೆ ನಡುಕ: 4ನೇ ದಿನ ಏನಾಗಲಿದೆ?

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ