Weather: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಕರ್ನಾಟಕ, ಗುಜರಾತ್ ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ

ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವ ತೆಲಂಗಾಣದಲ್ಲಿಯೂ ಮಳೆ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.

Weather: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಕರ್ನಾಟಕ, ಗುಜರಾತ್ ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ
ಮಳೆImage Credit source: NDTV
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 10, 2022 | 11:16 AM

ದೆಹಲಿ: ದೇಶದ ವಿವಿಧೆಡೆ ಮುಂಗಾರು (Monsoor Rain) ಚುರುಕಾಗಿದ್ದು ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ಹರಿಯುವ ಬೆಳಗಾವಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ತಲೆದೋರಿದೆ. ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವ ತೆಲಂಗಾಣದಲ್ಲಿಯೂ ಮಳೆ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.

ಪಶ್ಚಿಮ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ. ಮಹಾರಾಷ್ಟ್ರದ ಗಡ್​ಚಿರೋಲಿ ಜಿಲ್ಲೆಯಲ್ಲಿ ಹಲವು ಗ್ರಾಮಗಳು ನೀರಿನಲ್ಲಿ ಮುಳುಗಿವೆ. ಹಿಂಗ್ಲೋಯಿ ಮತ್ತು ನಾಂದೇಡ್ ಜಿಲ್ಲೆಗಳಲ್ಲಿ ಅಸನಾ ನದಿ ಉಕ್ಕಿ ಹರಿಯುತ್ತಿದೆ. ನದಿ ಪಾತ್ರದ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಮಹಾರಾಷ್ಟ್ರದ ಕೊಂಕಣ್, ಮಧ್ಯ, ಮರಾಠವಾಡ ಪ್ರದೇಶಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಆಗಬಹುದು ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಕೆಲವು ದಿನಗಳ ಅವಧಿಗೆ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಒಡಿಶಾದಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು ಮೋಡ ಹೊತ್ತ ಮಾರುತಗಳು ಪಶ್ಚಿಮ ಭಾರತದತ್ತ ಧಾವಿಸುತ್ತಿವೆ. ಮುಂಗಾರು ಮಾರುತಗಳ ಪ್ರಭಾವವೂ ಇರುವುದರಿಂದ ಛತ್ತೀಸಗಡ, ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ, ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್ ಪ್ರಾಂತ್ಯಗಳಲ್ಲಿ ಸೋಮವಾರದವರೆಗೆ ಮಳೆಯ ಪ್ರಮಾಣ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದೆ.

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ