AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 2 ದಿನಗಳಲ್ಲಿ ಉತ್ತರ ಭಾರತದಲ್ಲಿ ಕಡಿಮೆಯಾಗಲಿದೆ ಬಿಸಿಲು; ಈಶಾನ್ಯ ರಾಜ್ಯಗಳಲ್ಲಿ ಮಳೆ ಸಾಧ್ಯತೆ: ಐಎಂಡಿ

ಪಂಜಾಬ್, ಹರಿಯಾಣ, ಚಂಡೀಗಢ-ದೆಹಲಿ, ಪಶ್ಚಿಮ ಮತ್ತು ಪೂರ್ವ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ ಮತ್ತು ಪೂರ್ವ ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ,  ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತಾಪಮಾನದಲ್ಲಿ ಕ್ರಮೇಣ ಕುಸಿತದ ಸಾಧ್ಯತೆಯಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಭಾರತದಲ್ಲಿ ಕಡಿಮೆಯಾಗಲಿದೆ ಬಿಸಿಲು; ಈಶಾನ್ಯ ರಾಜ್ಯಗಳಲ್ಲಿ ಮಳೆ ಸಾಧ್ಯತೆ: ಐಎಂಡಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Jun 01, 2024 | 5:47 PM

Share

ದೆಹಲಿ ಜೂನ್ 01: ಮುಂದಿನ ಎರಡು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಸುಡು ಬಿಸಿಲು (Heat Waves) ಕ್ರಮೇಣ ಕಡಿಮೆಯಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಶನಿವಾರ ತಿಳಿಸಿದೆ. ಮುಂದಿನ 2-3 ದಿನಗಳಲ್ಲಿ ವಾಯುವ್ಯ ಮತ್ತು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ (Temperature) 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಇಳಿಕೆಯಾಗುವ ಸಾಧ್ಯತೆಯಿದ್ದು ನಂತರ ಯಾವುದೇ ಮಹತ್ವದ ಬದಲಾವಣೆಯಾಗುವುದಿಲ್ಲ.”ಮುಂದಿನ 5 ದಿನಗಳಲ್ಲಿ ಮಧ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಸೆಲ್ಸಿಯಸ್ ನಷ್ಟು ಕ್ರಮೇಣ ಇಳಿಕೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಹೇಳಿದೆ.

ಪಂಜಾಬ್, ಹರಿಯಾಣ, ಚಂಡೀಗಢ-ದೆಹಲಿ, ಪಶ್ಚಿಮ ಮತ್ತು ಪೂರ್ವ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ ಮತ್ತು ಪೂರ್ವ ರಾಜಸ್ಥಾನ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ,  ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತಾಪಮಾನದಲ್ಲಿ ಕ್ರಮೇಣ ಕುಸಿತದ ಸಾಧ್ಯತೆಯಿದೆ.

ಉತ್ತರ ಮತ್ತು ಮಧ್ಯ ಭಾರತದಲ್ಲಿನ ಈ ರಾಜ್ಯಗಳಲ್ಲಿ ಹೆಚ್ಚಿನವು ತೀವ್ರವಾದ ಶಾಖದ ಅಲೆಯಿಂದ ತತ್ತರಿಸುತ್ತಿವೆ. ಅನೇಕ ನಗರಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗಿಂತ ಏರಿಕೆ ಆಗಿದೆ.  ಶುಕ್ರವಾರ ಬಿಸಿಲಿನಿಂದಾಗಿ ಕನಿಷ್ಠ 40 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾದ 25 ಸಿಬ್ಬಂದಿ ಸೇರಿದ್ದಾರೆ.

ಹರಿಯಾಣದ ಸಿರ್ಸಾ 47.8 ಡಿಗ್ರಿ ಸೆಲ್ಸಿಯಸ್‌ನಲ್ಲಿ ಎರಡನೇ ಅತಿ ಹೆಚ್ಚು ತಾಪಮಾನದ ಸ್ಥಳವಾಗಿದೆ. ದೆಹಲಿಯ ಅಯಾನಗರದಲ್ಲಿ ನಗರದ ಗರಿಷ್ಠ ತಾಪಮಾನ 47 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಈಶಾನ್ಯ ಭಾರತ ಮತ್ತು ದಕ್ಷಿಣ ಪರ್ಯಾಯ ದ್ವೀಪದಲ್ಲಿ ಮಳೆ ಸಾಧ್ಯತೆ

ಮುಂದಿನ 4-5 ದಿನಗಳಲ್ಲಿ ಈಶಾನ್ಯ ಭಾರತ ಮತ್ತು ದಕ್ಷಿಣ ಪರ್ಯಾಯದ್ವೀಪದ ಭಾರತದಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಏಳು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (30-40 kmph) ಜೊತೆಗೆ ಸಾಧಾರಣ ಮಳೆಯಾಗಲಿದೆ.

ಮುಂದಿನ 5 ದಿನಗಳಲ್ಲಿ ಬಿಹಾರ, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ವಿದರ್ಭ, ಕೊಂಕಣ ಮತ್ತು ಗೋವಾದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (30-40 kmph) ಸಹಿತ ಮಳೆಯಲಾಗಲಿದೆ.”ಮುಂದಿನ 5 ದಿನಗಳಲ್ಲಿ ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ