Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಿಮಾನ ನಿಲ್ದಾಣದಲ್ಲಿ ಜಾನಪದ ನೃತ್ಯಕ್ಕೆ ಮನಸೋತು ಹೆಜ್ಜೆ ಹಾಕಿದ ಐಎಂಎಫ್ ಮುಖ್ಯಸ್ಥೆ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಟ್ವಿಟರ್​​ನಲ್ಲಿ ಜಾರ್ಜಿವಾ ಹಾಡಿಗೆ ಹೆಜ್ಜೆ ಹಾಕುತ್ತಿರುವುದನ್ನು ಮತ್ತು ಸಂಬಲ್ಪುರಿ ಕಲಾವಿದರೊಂದಿಗೆ ಸಂಭಾಷಣೆ ನಡೆಸುತ್ತಿರುವ ವಿಡಿಯೊವನ್ನು ಶೇರ್ ಮಾಡಿದ್ದಾರೆ. ಸಂಬಲ್ಪುರಿ ಬೀಟ್ಸ್ ಗೆ ಹೆಜ್ಜೆ ಹಾಕದೇ ಇರುವುದು ಕಷ್ಟ. ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಮುಖ್ಯಸ್ಥೆ ಜಾರ್ಜಿವಾ G20 ಶೃಂಗಸಭೆಗಾಗಿ ಬಂದಾಗ ಅವರನ್ನು ಸಂಬಲ್ಪುರಿ ಹಾಡು ಮತ್ತು ನೃತ್ಯ ಮೂಲಕ ಸ್ವಾಗತಿಸಲಾಯಿತು #OdiaPride ಅವರ ಪ್ರಧಾನ್ ಎಕ್ಸ್ ನಲ್ಲಿ ಮಾಡಿದ ಪೋಸ್ಟ್​​ನಲ್ಲಿ ಬರೆದಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಜಾನಪದ ನೃತ್ಯಕ್ಕೆ ಮನಸೋತು ಹೆಜ್ಜೆ ಹಾಕಿದ ಐಎಂಎಫ್ ಮುಖ್ಯಸ್ಥೆ
ಕ್ರಿಸ್ಟಲಿನಾ ಜಾರ್ಜಿವಾ
Follow us
ರಶ್ಮಿ ಕಲ್ಲಕಟ್ಟ
|

Updated on: Sep 08, 2023 | 5:19 PM

ದೆಹಲಿ ಸೆಪ್ಟೆಂಬರ್ 08: ಜಿ20 ಶೃಂಗಸಭೆಯಲ್ಲಿ (G20 Summit) ಪಾಲ್ಗೊಳ್ಳಲು ಅಂತಾರಾಷ್ಟ್ರೀಯ ಹಣಕಾಸು ನಿಧಿಯ (IMF) ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ (Kristalina Georgieva) ಗುರುವಾರ ದೆಹಲಿಗೆ ಆಗಮಿಸಿದ್ದಾರೆ. ಅವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತವನ್ನು ಕೋರಲಾಗಿತ್ತು. ಐಎಂಎಫ್ ಮುಖ್ಯಸ್ಥರನ್ನು ಸ್ವಾಗತಿಸುವ ಸಲುವಾಗಿ ಸಾಂಸ್ಕೃತಿಕ ತಂಡವು ಸಂಬಲ್ಪುರಿ ಹಾಡಿನಲ್ಲಿ ಸಾಂಪ್ರದಾಯಿಕ ಜಾನಪದ ನೃತ್ಯವನ್ನು ಪ್ರದರ್ಶಿಸಿತು. ನೃತ್ಯಗಾರರ ಹೆಜ್ಜೆಗಳನ್ನು ಮೆಚ್ಚಿ ಅವರನ್ನು ಹುರಿದುಂಬಿಸಿದ ಜಾರ್ಜಿಯಾ ಅವರು ನಿಂತಲ್ಲೇ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಟ್ವಿಟರ್​​ನಲ್ಲಿ ಜಾರ್ಜಿವಾ ಹಾಡಿಗೆ ಹೆಜ್ಜೆ ಹಾಕುತ್ತಿರುವುದನ್ನು ಮತ್ತು ಸಂಬಲ್ಪುರಿ ಕಲಾವಿದರೊಂದಿಗೆ ಸಂಭಾಷಣೆ ನಡೆಸುತ್ತಿರುವ ವಿಡಿಯೊವನ್ನು ಶೇರ್ ಮಾಡಿದ್ದಾರೆ. ಸಂಬಲ್ಪುರಿ ಬೀಟ್ಸ್ ಗೆ ಹೆಜ್ಜೆ ಹಾಕದೇ ಇರುವುದು ಕಷ್ಟ. ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಮುಖ್ಯಸ್ಥೆ ಜಾರ್ಜಿವಾ G20 ಶೃಂಗಸಭೆಗಾಗಿ ಬಂದಾಗ ಅವರನ್ನು ಸಂಬಲ್ಪುರಿ ಹಾಡು ಮತ್ತು ನೃತ್ಯ ಮೂಲಕ ಸ್ವಾಗತಿಸಲಾಯಿತು #OdiaPride ಅವರ ಪ್ರಧಾನ್ ಎಕ್ಸ್ ನಲ್ಲಿ ಮಾಡಿದ ಪೋಸ್ಟ್​​ನಲ್ಲಿ ಬರೆದಿದ್ದಾರೆ.

ಕೆಲವೇ ಗಂಟೆಗಳ ಹಿಂದೆ ಹಂಚಿಕೊಳ್ಳಲಾದ ವಿಡಿಯೊ ಈಗಾಗಲೇ 78.7 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು 15.9 ಸಾವಿರ ಜನರ ಇದನ್ನು ಲೈಕ್ ಮಾಡಿದ್ದಾರೆ. ಒಡಿಯಾದ ಜನರಿಗೆ ಅದ್ಭುತ, ಹೆಮ್ಮೆಯ ಕ್ಷಣ ಎಂದು ಬಳಕೆದಾರರೊಬ್ಬರು ಎಂದು ಕಾಮೆಂಟ್ ಮಾಡಿದ್ದು, ಇದು ನಮ್ಮ ಸಂಸ್ಕೃತಿ ಮತ್ತು ಸಂಗೀತದ ಶಕ್ತಿ” ಎಂದು ಇನ್ನೊಬ್ಬರು ಹೇಳಿದ್ದಾರೆ.

ಭಾರತೀಯ ಸಂಸ್ಕೃತಿ ,ಸಂಗೀತ ಮತ್ತು ನೃತ್ಯದ ಅತ್ಯುತ್ತಮ ಪ್ರದರ್ಶನ ಎಂದು ಬಳಕೆದಾರರೊಬ್ಬರು ಬರೆದಿದ್ದು, ಎಷ್ಟು ಸುಂದರ ವಿಡಿಯೊ, ಆಕೆ ಉನ್ನತ ಸ್ಥಾನದಲ್ಲಿದ್ದರೂ ಆಕೆಯಲ್ಲಿರುವ ಮಗು ಮನಸ್ಸು ಸುಮ್ಮನಿರಲಿಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: G20 ಶೃಂಗಸಭೆಗೆ ಆಗಮಿಸುತ್ತಿರುವ ವಿದೇಶಿ ನಾಯಕರನ್ನು ಬರಮಾಡಿಕೊಳ್ಳುತ್ತಿರುವವರು ಯಾರು? ಯಾರಿಗೆ ಯಾವ ಜವಾಬ್ದಾರಿ?

ಜಿ20 ಶೃಂಗಸಭೆ ನಾಳೆ ನವದೆಹಲಿಯಲ್ಲಿ ಆರಂಭವಾಗಲಿದ್ದು, ಪ್ರಗತಿ ಮೈದಾನದಲ್ಲಿ ನೂತನವಾಗಿ ಉದ್ಘಾಟನೆಗೊಂಡಿರುವ ಭಾರತ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್, ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಇತರ ರಾಷ್ಟ್ರಗಳ ಮುಖ್ಯಸ್ಥರು ಸೇರಿದಂತೆ ವಿಶ್ವದ  ಪ್ರಭಾವಿ ನಾಯಕರು ವಿಶ್ವದ ಅನಾರೋಗ್ಯದ ಸಮಸ್ಯೆಗಳ ಕುರಿತು ಚರ್ಚೆಗೆ ಸಾಕ್ಷಿಯಾಗಲಿದ್ದಾರೆ. ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್‌ನಂತಹ ಅಂತರರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಕೂಡಾ ಭಾಗವಹಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ