AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಪ್ರಯತ್ನದಲ್ಲಿರುವ ಭಾರತಕ್ಕೆ ಇಂದು ಮಹತ್ವದ ದಿನ; ಪ್ರಧಾನಿ ಮೋದಿಯವರಿಂದ ಸರಣಿ ಟ್ವೀಟ್​​

ಇಂದು ಭಾರತದಲ್ಲಿ ದೇಶೀಯವಾಗಿ ತಯಾರಾದ (ಸ್ವದೇಶಿ) ಲಸಿಕೆಗಳು ಹಲವು ಇವೆ.  ಮೊದಲು ಎರಡೇ ಲಸಿಕೆಗಳನ್ನು ಬಳಸಲಾಗುತ್ತಿದ್ದರೂ, ಬಳಿಕ ವಿವಿಧ ಲಸಿಕೆಗಳ ಮೌಲ್ಯಮಾಪನ ಮಾಡಿ ಅವುಗಳ ಬಳಕೆಗೂ ಅನುಮೋದನೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿರಂತರ ಪ್ರಯತ್ನದಲ್ಲಿರುವ ಭಾರತಕ್ಕೆ ಇಂದು ಮಹತ್ವದ ದಿನ; ಪ್ರಧಾನಿ ಮೋದಿಯವರಿಂದ ಸರಣಿ ಟ್ವೀಟ್​​
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Mar 16, 2022 | 3:01 PM

Share

ಇಂದಿನಿಂದ ದೇಶದಲ್ಲಿ ಮತ್ತೊಂದು ಹಂತದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಿದೆ. 12-14ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಣಿ ಟ್ವೀಟ್​ ಮಾಡಿ, ಕೊರೊನಾ ವಿರುದ್ಧ ದೇಶ ಹೋರಾಡುತ್ತಿರುವ ರೀತಿ ಮತ್ತು ಅದಕ್ಕೆ ಜನರು ನೀಡುತ್ತಿರುವ ಸಹಕಾರವನ್ನು ಹೊಗಳಿದ್ದಾರೆ. ದೇಶದ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಅವರನ್ನು ಸೋಂಕಿನಿಂದ ಪಾರು ಮಾಡಲು ಪ್ರಯತ್ನಿಸುತ್ತಿರುವ ಭಾರತದ ಪಾಲಿಗೆ ಇದು ಅತ್ಯಂತ ಮಹತ್ವದ ದಿನ. ಇಂದಿನಿಂದ 12-14ನೇ ವರ್ಷ ವಯಸ್ಸಿನವರಿಗೂ ಕೊವಿಡ್​ 19 ಲಸಿಕೆ ನೀಡಿಕೆ ಪ್ರಾರಂಭವಾಗಿದೆ. ಹಾಗೇ, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಡೋಸ್​ ನೀಡಿಕೆಯೂ ಶುರುವಾಗಲಿದೆ. ಇಂದಿನಿಂದ ಶುರುವಾದ ಹಂತದಲ್ಲಿ ಯಾರೆಲ್ಲ ಲಸಿಕೆ ಪಡೆಯಲು ಅರ್ಹರಿದ್ದಾರೋ, ಅವರು ಬೇಗನೇ ಕೊವಿಡ್ 19 ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಭಾರತದ ಲಸಿಕೆ ಅಭಿಯಾನವನ್ನು ವಿಜ್ಞಾನ-ಚಾಲಿತ ಎಂದೇ ಉಲ್ಲೇಖಿಸಿರುವ ಪ್ರಧಾನಿ ಮೋದಿ, 2020ರಲ್ಲಿ ನಮ್ಮ ದೇಶದಲ್ಲಿ ಕೊರೊನಾ ಲಸಿಕೆ ತಯಾರಿಕೆ ಶುರುವಾಯಿತು. ನಮ್ಮ ದೇಶದ ನಾಗರಿಕರನ್ನು ಕೊರೊನಾ ಸೋಂಕಿನಿಂದ ರಕ್ಷಿಸುವಲ್ಲಿ ಇದು ಬಹುಮುಖ್ಯವಾಗಿದೆ. ನಮ್ಮ ಕೊರೊನಾ ಲಸಿಕೆ ತಯಾರಿಕೆ ಪ್ರಯತ್ನಕ್ಕೆ ವಿಜ್ಞಾನಿಗಳು, ಸಂಶೋಧಕರು, ಖಾಸಗಿ ವಲಯದವರು ನೀಡಿದ ಸಹಕಾರ, ಅವರು ತೆರೆದುಕೊಂಡ ರೀತಿ ನಿಜಕ್ಕೂ ಶ್ಲಾಘನೀಯ. 2020ರ ಕೊನೆಯಲ್ಲಿ ನಾನು ಮೂರು ಲಸಿಕಾ ತಯಾರಿಕಾ ಸಂಸ್ಥೆಗಳಿಗೆ ಭೇಟಿ ನೀಡಿದ್ದೆ. ಲಸಿಕೆಗಳು ನಾಗರಿಕರನ್ನು ಹೇಗೆ ರಕ್ಷಣೆ ಮಾಡುತ್ತವೆ, ದೇಹದೊಳಗೆ ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬ ವಿವರಗಳನ್ನು ತಯಾರಕರ ಬಳಿಯಿಂದಲೇ ಕೇಳಿದ್ದೆ ಎಂದು ಹಳೇ ದಿನಗಳನ್ನು ನೆನಪಿಸಿಕೊಂಡರು.

2021ರ ಜನವರಲ್ಲಿ ನಮ್ಮ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಮೊದಲು ವೈದ್ಯರು, ಆರೋಗ್ಯ ಕಾರ್ಯಕರ್ತರು, ಕೊರೊನಾ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಲಸಿಕೆ ನೀಡಲಾಯಿತು. ಒಂದೊಂದೇ ಹಂತವಾಗಿ ಇದೀಗ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೊರೊನಾ ಲಸಿಕೆ ಅಭಿಯಾನದಲ್ಲಿ ಕೇಂದ್ರದೊಂದಿಗೆ ಸಹಕರಿಸಿದ ಎಲ್ಲ ರಾಜ್ಯ ಸರ್ಕಾರಗಳಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಇಂದು ಭಾರತದಲ್ಲಿ ದೇಶೀಯವಾಗಿ ತಯಾರಾದ (ಸ್ವದೇಶಿ) ಲಸಿಕೆಗಳು ಹಲವು ಇವೆ.  ಮೊದಲು ಎರಡೇ ಲಸಿಕೆಗಳನ್ನು ಬಳಸಲಾಗುತ್ತಿದ್ದರೂ, ಬಳಿಕ ವಿವಿಧ ಲಸಿಕೆಗಳ ಮೌಲ್ಯಮಾಪನ ಮಾಡಿ ಅವುಗಳ ಬಳಕೆಗೂ ಅನುಮೋದನೆ ನೀಡಲಾಗಿದೆ. ಮಾರಣಾಂತಿಕ ಕೊರೊನಾ ವಿರುದ್ಧ ಅತ್ಯುತ್ತಮವಾಗಿ ಹೋರಾಟ ಮಾಡುತ್ತಿದ್ದೇವೆ. ಇನ್ನೊಂದೆಡೆ ಕೊರೊನಾ ಸೋಂಕಿನ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನೂ ಸರಿಯಾಗಿ ಪಾಲನೆ ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.  ಅಷ್ಟೇ ಅಲ್ಲ, ಜಾಗತಿಕವಾಗಿ ಕೊರೊನಾ ವಿರುದ್ಧ ಹೋರಾಟದಲ್ಲಿ ಕೂಡ ಭಾರತ ಮುಂಚೂಣಿಯಲ್ಲಿದೆ ಎಂದಿದ್ದಾರೆ.

ಇದನ್ನೂ ಓದಿ: Covid Vaccine: 12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ನಿರೋಧಕ ಲಸಿಕೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್