AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022-23ರಲ್ಲಿ ₹ 250 ಕೋಟಿಗೂ ಅಧಿಕ ದೇಣಿಗೆ ಪಡೆದಿದೆ ಬಿಜೆಪಿ: ಎಡಿಆರ್

2022-23ರಲ್ಲಿ ಚುನಾವಣಾ ಟ್ರಸ್ಟ್‌ಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ದೇಣಿಗೆಯಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಬಿಜೆಪಿ ಪಡೆದುಕೊಂಡಿದೆ. ಅಂದರೆ ಬಿಜೆಪಿ ₹ 250 ಕೋಟಿಗೂ ಅಧಿಕ ದೇಣಿಗೆ ಪಡೆದಿದೆ,. ಅದೇ ವೇಳೆ ಭಾರತ್ ರಾಷ್ಟ್ರ ಸಮಿತಿ ಸುಮಾರು 25 ಪ್ರತಿಶತದಷ್ಟು ದೇಣಿಗೆಯನ್ನು ಸ್ವೀಕರಿಸಿದೆ ಎಂದು ಎಡಿಆರ್ ಹೇಳಿದೆ

2022-23ರಲ್ಲಿ ₹ 250 ಕೋಟಿಗೂ ಅಧಿಕ ದೇಣಿಗೆ ಪಡೆದಿದೆ ಬಿಜೆಪಿ: ಎಡಿಆರ್
ಬಿಜೆಪಿ
ರಶ್ಮಿ ಕಲ್ಲಕಟ್ಟ
|

Updated on: Jan 04, 2024 | 12:49 PM

Share

ದೆಹಲಿ ಜನವರಿ 04 : ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ, 2022-23ರಲ್ಲಿ ಚುನಾವಣಾ ಟ್ರಸ್ಟ್‌ಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ದೇಣಿಗೆಯಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಬಿಜೆಪಿ (BJP) ಪಡೆದುಕೊಂಡಿದೆ. ಅದೇ ವೇಳೆ ಭಾರತ್ ರಾಷ್ಟ್ರ ಸಮಿತಿ (BRS) ಸುಮಾರು 25 ಪ್ರತಿಶತದಷ್ಟು ದೇಣಿಗೆಯನ್ನು ಸ್ವೀಕರಿಸಿದೆ ಎಂದು ಎಡಿಆರ್ ಹೇಳಿದೆ. 2022-23ರ ಚುನಾವಣಾ ಟ್ರಸ್ಟ್‌ಗಳ ಕೊಡುಗೆ ವರದಿಗಳ ವಿಶ್ಲೇಷಣೆಯ ಪ್ರಕಾರ, ಚುನಾವಣಾ ಟ್ರಸ್ಟ್‌ಗಳಿಗೆ ₹ 363 ಕೋಟಿಗೂ ಹೆಚ್ಚು ಕೊಡುಗೆ ನೀಡಿರುವ 39 ಕಾರ್ಪೊರೇಟ್ ಮತ್ತು ವ್ಯಾಪಾರ ಸಂಸ್ಥೆಗಳಿವೆ.

ಮೂವತ್ನಾಲ್ಕು ಕಾರ್ಪೊರೇಟ್ ಮತ್ತು ವ್ಯಾಪಾರ ಸಂಸ್ಥೆಗಳು ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್‌ಗೆ ₹ 360 ಕೋಟಿ, ಸಮಾಜ್ ಎಲೆಕ್ಟೋರಲ್ ಟ್ರಸ್ಟ್‌ಗೆ ಒಂದು ಕಂಪನಿ ₹ 2 ಕೋಟಿ, ಪರಿಬರ್ತನ್ ಎಲೆಕ್ಟೋರಲ್ ಟ್ರಸ್ಟ್‌ಗೆ ಎರಡು ಕಂಪನಿಗಳು ₹ 75.50 ಲಕ್ಷ, ಮತ್ತು ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್‌ಗೆ ಎರಡು ಕಂಪನಿಗಳು ₹ 50 ಲಕ್ಷ ಕೊಡುಗೆ ನೀಡಿವೆ ಎಡಿಆರ್ ಹೇಳಿದೆ.

ಎಡಿಆರ್ ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, ಬಿಜೆಪಿಯು ₹ 259.08 ಕೋಟಿ ಅಥವಾ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಟ್ರಸ್ಟ್‌ಗಳಿಂದ ಪಡೆದ ಒಟ್ಟು ದೇಣಿಗೆಯಲ್ಲಿ 70.69 ಪ್ರತಿಶತವನ್ನು ಸ್ವೀಕರಿಸಿದೆ. ಬಿಆರ್ ಎಸ್₹ 90 ಕೋಟಿ ಅಥವಾ ಒಟ್ಟು ದೇಣಿಗೆಯಲ್ಲಿ 24.56 ಪ್ರತಿಶತವನ್ನು ಸ್ವೀಕರಿಸಿದೆ.

ಇತರ ಮೂರು ರಾಜಕೀಯ ಪಕ್ಷಗಳಾದ ವೈಎಸ್ಆರ್ ಕಾಂಗ್ರೆಸ್, ಎಎಪಿ ಮತ್ತು ಕಾಂಗ್ರೆಸ್ ಒಟ್ಟಾರೆಯಾಗಿ ₹ 17.40 ಕೋಟಿ ಪಡೆದಿವೆ ಎಂದು ಎಡಿಆರ್ ಹೇಳಿದೆ.

2021-22ರಲ್ಲಿ ₹ 336.50 ಕೋಟಿಗೆ ಹೋಲಿಸಿದರೆ ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಬಿಜೆಪಿಗೆ ₹ 256.25 ಕೋಟಿ ದೇಣಿಗೆ ನೀಡಿದೆ. ಆದರೆ ಸಮಾಜ್ ಇಟಿ ಅಸೋಸಿಯೇಷನ್ 2022-23ರಲ್ಲಿ ಬಿಜೆಪಿಗೆ ತನ್ನ ಒಟ್ಟು ಆದಾಯದ ₹ 1.50 ಕೋಟಿ ದೇಣಿಗೆ ನೀಡಿದೆ ಎಂದು ಎಡಿಆರ್ ವರದಿ ತಿಳಿಸಿದೆ.

ಇದನ್ನೂ ಓದಿ: ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ: ಪ್ರೊಫೈಲ್ ಫೋಟೋ ಬದಲಿಸಿ ಬಿಜೆಪಿ ನಾಯಕರ ಪ್ರತಿಭಟನೆ

ಸಮಾಜ್ ಎಲೆಕ್ಟೋರಲ್ ಟ್ರಸ್ಟ್ ₹ 50 ಲಕ್ಷವನ್ನು ಕಾಂಗ್ರೆಸ್‌ಗೆ ದೇಣಿಗೆ ನೀಡಿದರೆ, ಪ್ರೂಡೆಂಟ್ ಎಲೆಕ್ಟೋರಲ್ ಟ್ರಸ್ಟ್ ನಾಲ್ಕು ರಾಜಕೀಯ ಪಕ್ಷಗಳಾದ ಬಿಜೆಪಿ, ಬಿಆರ್‌ಎಸ್, ವೈಎಸ್‌ಆರ್ ಕಾಂಗ್ರೆಸ್ ಮತ್ತು ಎಎಪಿಗೆ ದೇಣಿಗೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ