AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯೊಂದಿಗೆ ಹಗ್ಗದಲ್ಲಿ ಕಟ್ಟಿ ಭಾರತ್ ಮಾತಾ ಕೀ ಜೈ ಎಂದು ಕೂಗಿ ಮೆರವಣಿಗೆ ನಡೆಸಿದ ಗ್ರಾಮಸ್ಥರು

Madhya Pradesh: ಮಧ್ಯಪ್ರದೇಶದ ಅಲಿರಾಜ್​ಪುರ್‌ ಜಿಲ್ಲೆಯಲ್ಲಿ ಆರೋಪಿ ಜತೆ ಅತ್ಯಾಚಾರ ಸಂತ್ರಸ್ತೆಯನ್ನ ಹಗ್ಗದಲ್ಲಿ ಕಟ್ಟಿ ಗ್ರಾಮಸ್ಥರು ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ವೇಳೆ ಸಂತ್ರಸ್ತೆಗೆ ಹೊಡೆಯುತ್ತಿರುವುದು ವಿಡಿಯೊದಲ್ಲಿದೆ. ಅಲ್ಲಿದ್ದ ಕೆಲವು ಗಂಡಸರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.

ಮಧ್ಯಪ್ರದೇಶ: ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯೊಂದಿಗೆ ಹಗ್ಗದಲ್ಲಿ ಕಟ್ಟಿ ಭಾರತ್ ಮಾತಾ ಕೀ ಜೈ ಎಂದು ಕೂಗಿ ಮೆರವಣಿಗೆ ನಡೆಸಿದ ಗ್ರಾಮಸ್ಥರು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 29, 2021 | 1:54 PM

Share

ಭೋಪಾಲ್: ಮಧ್ಯಪ್ರದೇಶದ ಅಲಿರಾಜ್​ಪುರ್‌ ಜಿಲ್ಲೆಯ ಬುಡಕಟ್ಟು ಜನರ ಗ್ರಾಮವೊಂದರಲ್ಲಿ 16 ಹರೆಯದ ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯೊಂದಿಗೆ ಹಗ್ಗದಲ್ಲಿ ಕಟ್ಟಿ ಮೆರವಣಿಗೆ ನಡೆಸಿದ ಘಟನೆ ಭಾನುವಾರ ನಡೆಸಿದೆ. ಸಂತ್ರಸ್ತೆ ಮತ್ತು ಆರೋಪಿಯನ್ನು ಹಗ್ಗದಲ್ಲಿ ಕಟ್ಟಿ ಗ್ರಾಮಸ್ಥರು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿ ಮೆರವಣಿಗೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಪ್ರಕರಣದಲ್ಲಿ ಆರೋಪಿ ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿಡಿಯೊದಲ್ಲೇನಿದೆ? ಆರೋಪಿ ಜತೆ ಅತ್ಯಾಚಾರ ಸಂತ್ರಸ್ತೆಯನ್ನು ಹಗ್ಗದಲ್ಲಿ ಕಟ್ಟಿ ಗ್ರಾಮಸ್ಥರು ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆ ವೇಳೆ ಸಂತ್ರಸ್ತೆಗೆ ಹೊಡೆಯುತ್ತಿರುವುದು ವಿಡಿಯೊದಲ್ಲಿದೆ. ಇನ್ನು ಕೆಲವು ಗಂಡಸರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ದಿಂದ ಸುಮಾರು 400 ಕಿಮೀ ದೂರದಲ್ಲಿರುವ ಅಲಿರಾಜ್ ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.  ಸಂತ್ರಸ್ತೆಯನ್ನು ಮೆರವಣಿಗೆ ನಡೆಸುವಾಗ ಆಕೆಯ ಕುಟುಂಬದವರೂ ಅದರಲ್ಲಿ ಭಾಗಿಯಾಗಿದ್ದರು. ಘಟನೆ ಬಗ್ಗೆ ತಿಳಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿ ದಿಲೀಪ್ ಸಿಂಗ್ ಬಿಲ್ವಾಲ್ ಹೇಳಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ 21ರ ಹರೆಯದ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯನ್ನು ಮೆರವಣಿಗೆ ನಡೆಸಿ, ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರ ವಿರೋಧ ಎಫ್ಐಆರ್ ದಾಖಲಾಗಿದೆ ಎಂದು ಬಿಲ್ವಾಲ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆ (IPC) ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ, ಸಂತ್ರಸ್ತೆಯ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆ 294 (ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ಕೃತ್ಯ, 355(ವ್ಯಕ್ತಿಯನ್ನು ಅವಮಾನಿಸುವ ಉದ್ದೇಶದಿಂದ ಹಲ್ಲೆ ಅಥವಾ ಅಪರಾಧ), 323 ( ನೋವನ್ನುಂಟುಮಾಡುವುದು), 342 (ತಪ್ಪಾದ ನಿರ್ಬಂಧ) ಮತ್ತು ಇನ್ನಿತರ ಸೆಕ್ಷನ್​ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ .

ಇದನ್ನೂ ಓದಿ:  ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

ಮನನೊಂದ ಮಹಿಳೆ ಸಾಬರಮತಿ ನದಿಗೆ ಹಾರಿ ಆತ್ಮಹತ್ಯೆ; ಸಾವಿಗೂ ಮುನ್ನ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

Published On - 1:52 pm, Mon, 29 March 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ