AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಬಡತನದಿಂದ ಬೇಸತ್ತು ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ

ಬಡತನದಿಂದ ಬೇಸತ್ತು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ತೀಸ್ತಾ ನದಿಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದಿದೆ.  ಘಟನೆ ಸಮಯದಲ್ಲಿ ಅಲ್ಲೇ ಇದ್ದ ಸ್ಥಳೀಯರು ಕೂಡಲೇ ಓಡಿ ಬಂದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೀಮಾ ದಿನಗಟ್ಟಲೆ ಹೊಟ್ಟೆಗೆ ಕೂಳಿಲ್ಲದೆ ಇದ್ದರು, ಗಂಡ ಬಿಪುಲ್ ಬವಾಲಿ ಬಡಗಿ ಮತ್ತು ದಿನಗೂಲಿ ನೌಕರರಾಗಿದ್ದು, ಉತ್ತರ ಬಂಗಾಳದಲ್ಲಿ ಭಾರಿ ಮಳೆಯಿಂದಲಾಗಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ.

ಪಶ್ಚಿಮ ಬಂಗಾಳ: ಬಡತನದಿಂದ ಬೇಸತ್ತು ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ
ನದಿ
ನಯನಾ ರಾಜೀವ್
|

Updated on: Jul 04, 2025 | 3:04 PM

Share

ಜಲ್ಪೈಗುರಿ, ಜುಲೈ 04: ಬಡತನದಿಂದ ಬೇಸತ್ತು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ತೀಸ್ತಾ ನದಿಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದಿದೆ.  ಘಟನೆ ಸಮಯದಲ್ಲಿ ಅಲ್ಲೇ ಇದ್ದ ಸ್ಥಳೀಯರು ಕೂಡಲೇ ಓಡಿ ಬಂದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೀಮಾ ದಿನಗಟ್ಟಲೆ ಹೊಟ್ಟೆಗೆ ಕೂಳಿಲ್ಲದೆ ಇದ್ದರು, ಗಂಡ ಬಿಪುಲ್ ಬವಾಲಿ ಬಡಗಿ ಮತ್ತು ದಿನಗೂಲಿ ನೌಕರರಾಗಿದ್ದು, ಉತ್ತರ ಬಂಗಾಳದಲ್ಲಿ ಭಾರಿ ಮಳೆಯಿಂದಾಗಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ. ಹೀಗಾಗಿ ಚಿಂತಿತರಾಗಿದ್ದರು. ಗಂಡ ಕೆಲಸ ಹುಡುಕಿಕೊಂಡು ಹೊರಗೆ ಹೋಗಿದ್ದಾಗ ಪತ್ನಿ ಈ ದುಡುಕಿನ ನಿರ್ಧಾರ ಮಾಡಿದ್ದಾರೆ.

ಮನೆಯಲ್ಲಿ ಅಡುಗೆ ಸಾಮಗ್ರಿಗಳೆಲ್ಲಾ ಖಾಲಿಯಾಗಿತ್ತು, ಹಸಿದ ಮಗು ದಿನವಿಡೀ ಅಳುತ್ತಿತ್ತು. ತಾಯಿಗೆ ಏನು ಮಾಡಬೇಕು ಎಂಬುದೇ ತೋಚಲಿಲ್ಲ. ಹಾಗಾಗಿ ಮಗು ಬದುಕಿದ್ದರೆ ತನಗೆ ಆ ಮಗುವಿನ ಹೊಟ್ಟೆ ತುಂಬಿಸುವ ಶಕ್ತಿಯೂ ಇಲ್ಲ ಎಂದು ಭಾವಿಸಿ ತಪ್ಪು ನಿರ್ಧಾರ ಮಾಡಿದ್ದರು. ಆದರೆ ಮಹಿಳೆ ಹೇಳುವ ಪ್ರಕಾರ, ತಾನು ಮಗುವನ್ನು ಹೆದರಿಸುವ ಉದ್ದೇಶದಿಂದ ಎಸೆದಿದ್ದೆ ಕೊಲ್ಲುವ ಆಲೋಚನೆ ಇರಲಿಲ್ಲ ಎಂದಿದ್ದಾರೆ. ಪಲ್ಲವಿ ಕೀರ್ತಾನಿಯಾ ಮತ್ತು ಮಲ್ಲಿಕಾ ಪಾಲ್ ಎಂಬ ಇಬ್ಬರು ಮಗುವನ್ನು ರಕ್ಷಿಸಿದ್ದಾರೆ.ನದಿಯಲ್ಲಿ ನೀರು ಉಕ್ಕುತ್ತಿತ್ತು. ಹೇಗೋ ಸಾಹಸ ಮಾಡಿ ಮಗುವನ್ನು ಹೊರಕ್ಕೆ ತೆಗೆದಿದ್ದಾರೆ.

ಮತ್ತಷ್ಟು ಓದಿ:ಲಕ್ನೋ: ಮಕ್ಕಳ ಜಗಳ ತಪ್ಪಿಸಲು ಹೋದ ಮಹಿಳೆಯ ಬರ್ಬರ ಹತ್ಯೆ

ಸೀಮಾ ಮಗುವನ್ನು ಕಸಿದುಕೊಳ್ಳಲು ಪ್ರಯತ್ನಿಸಿದಾಗ ಅಲ್ಲಿದ್ದ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು. ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ಆಗಮಿಸಿ, ಉದ್ವಿಗ್ನತೆಯನ್ನು ಶಾಂತಗೊಳಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡರು. ಮನೆಯಲ್ಲಿ ಆಹಾರದ ಕೊರತೆ ಇದೆ. ಮಗುವಿಗೆ ಕುಡಿಯಲು ಹಾಲು ಇಲ್ಲ. ಬೆಳಗ್ಗೆಯಿಂದ ಅಳುತ್ತಿತ್ತು. ಮಗು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನದಿಗೆ ಎಸೆಯಲು ಬಯಸಿದ್ದೆ ಎಂದು ಪೊಲೀಸರೆದುರು ಒಪ್ಪಿಕೊಂಡಿದ್ದಾಳೆ.

ಸುದ್ದಿ ತಿಳಿದು ಓಡೋಡಿ ಬಂದ ಪತಿ ಬಿಪುಲ್, ತಾನು ಕೆಲಸ ಹುಡುಕಿಕೊಂಡು ಹೊರಗೆ ಹೋಗಿದ್ದೆ, ಸುದ್ದಿ ತಿಳಿದ ತಕ್ಷಣ ಬಂದಿದ್ದೇನೆ.ಕೆಲ ದಿನಗಳ ಹಿಂದೆ ಹಣ ಸಂಪಾದಿಸಿ ತಂದ ಅಕ್ಕಿಯೂ ಮುಗಿದುಹೋಗಿದೆ ಎಂದು ಅಸಹಾಯಕತೆಯನ್ನು ವಿವರಿಸಿದ್ದಾರೆ.

ದಂಪತಿಗೆ ಮೂರು ವರ್ಷದ ಮಗಳು ಕೂಡ ಇದ್ದಾಳೆ. ಬಿಪುಲ್ ಅವರ ಅಣ್ಣ ಪಲಾಶ್ ಸೇರಿದಂತೆ ಕುಟುಂಬ ಸದಸ್ಯರ ಪ್ರಕಾರ, ದಂಪತಿ ನಡುವೆ ವಾದಗಳು ನಡೆದಿದ್ದರೂ, ಇಷ್ಟೊಂದು ದುರಂತ ತಿರುವು ಸಿಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ