ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಸರ್ಕಾರ ಬದ್ಧ: ಚೆನ್ನೈನಲ್ಲಿ ಪ್ರಧಾನಿ ಮೋದಿ

ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಸರ್ಕಾರ ಬದ್ಧ: ಚೆನ್ನೈನಲ್ಲಿ ಪ್ರಧಾನಿ ಮೋದಿ
ನರೇಂದ್ರ ಮೋದಿ

ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಸರ್ಕಾರ ಬದ್ಧವಾಗಿದೆ. ನನ್ನ ಕ್ಷೇತ್ರದಲ್ಲಿರುವ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ತಮಿಳು ಅಧ್ಯಯನ ವಿಭಾಗವು ನನಗೆ ಹೆಚ್ಚು ವಿಶೇಷವಾಗಿದೆ. ಎನ್ಇಪಿ ಭಾರತೀಯ ಭಾಷೆಗಳನ್ನು ಉತ್ತೇಜಿಸಲು ವಿಶೇಷ ಪ್ರಾಮುಖ್ಯತೆಯನ್ನು ನೀಡುತ್ತದೆ.

TV9kannada Web Team

| Edited By: Rashmi Kallakatta

May 26, 2022 | 8:06 PM

ಚೆನ್ನೈ: ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ISB) ತನ್ನ 20 ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹೈದರಾಬಾದ್‌ನಿಂದ ಗುರುವಾರ ಸಂಜೆ ಚೆನ್ನೈಗೆ (Chennai) ಬಂದಿಳಿದಿದ್ದು ಇಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ಚೆನ್ನೈನಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಮೋದಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಡಿಎಂಕೆ ನಾಯಕರು ಮತ್ತು ತಮಿಳುನಾಡು ಸಚಿವರಾದ ದುರೈಮುರುಗನ್, ಕೆ ಪೊನ್ಮುಡಿ, ಮೀನುಗಾರಿಕೆ ರಾಜ್ಯ ಸಚಿವ ಎಲ್ ಮುರುಗನ್ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಡ್ಡಿ ಕೆ ಪಳನಿಸ್ವಾಮಿ ಉಪಸ್ಥಿತರಿದ್ದರು. ಡಿಎಂಕೆ ಅಧಿಕಾರಕ್ಕೇರಿದ ನಂತರ ತಮಿಳಿನಾಡಿಗೆ ಮೋದಿಯವರ ಮೊದಲನೇ ಭೇಟಿ ಇದಾಗಿದೆ. ಜವಾಹರ್ ಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ₹31,000 ಕೋಟಿಗಿಂತಲೂ ಹೆಚ್ಚು ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಯೋಜನೆಗಳಲ್ಲಿ ಚೆನ್ನೈ ಎಗ್ಮೋರ್, ರಾಮೇಶ್ವರಂ, ಮಧುರೈ, ಕಟ್ಪಾಡಿ ಮತ್ತು ಕನ್ಯಾಕುಮಾರಿ ಸೇರಿದಂತೆ ತಮಿಳುನಾಡಿನ ಐದು ನಿಲ್ದಾಣಗಳ ಪುನರಾಭಿವೃದ್ಧಿ, ತಾಂಬರಂ-ಚೆಂಗಲ್ಪಟ್ಟು ನಡುವಿನ 30 ಕಿಮೀ ಉದ್ದದ ಮೂರನೇ ರೈಲು ಮಾರ್ಗ ಸೇರಿವೆ. ತಮಿಳುನಾಡಿಗೆ ಮತ್ತೆ ಬರುತ್ತಿರುವುದು ಖುಷಿ. ಇಲ್ಲಿನ ಜನರು, ಸಂಸ್ಕೃತಿ, ಭಾಷೆ ಅತ್ಯುತ್ತಮವಾಗಿದೆ. ತಮಿಳು ಭಾಷೆ ಶಾಶ್ವತ ಮತ್ತು ತಮಿಳು ಸಂಸ್ಕೃತಿ ಜಾಗತಿಕವಾಗಿದೆ ಎಂದು ಮೋದಿ ಹೇಳಿದ್ದಾರೆ.

“ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಬೆಳವಣಿಗೆಯ 2 ಪ್ರಮುಖ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಮಧುರವಾಯಲ್-ಚೆನ್ನೈ ಬಂದರು ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬಂದರು ಚಟುವಟಿಕೆಗಳನ್ನು ಹೆಚ್ಚಿಸುತ್ತದೆ.

“ಮೂಲಸೌಕರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವ ದೇಶದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕೆ ಬದಲಾಗಿದೆ ಎಂದು ಇತಿಹಾಸವು ನಮಗೆ ಕಲಿಸಿದೆ. ಭಾರತವು ಅದರ ಮೇಲೆ ಕೇಂದ್ರೀಕರಿಸುತ್ತಿದೆ. ನಾನು ಮೂಲಸೌಕರ್ಯ ಎಂದು ಹೇಳಿದಾಗ, ನನ್ನ ಪ್ರಕಾರ ಸಾಮಾಜಿಕ ಮೂಲಸೌಕರ್ಯವನ್ನು ನವೀಕರಿಸುವುದು. ಪ್ರಮುಖ ಯೋಜನೆಗಳನ್ನು ಮಾಡಲು ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ. ಎಲ್ಲರಿಗೂ ಕುಡಿಯುವ ನೀರು ಖಾತ್ರಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಭೌತಿಕ ಮೂಲಸೌಕರ್ಯವನ್ನು ಕೇಂದ್ರೀಕರಿಸಿ, ಯುವಕರು ಹೆಚ್ಚು ಪ್ರಯೋಜನ ಪಡೆಯುತ್ತಾರೆ. ಪ್ರತಿ ಮನೆಗೂ ಹೈಸ್ಪೀಡ್ ಇಂಟರ್‌ನೆಟ್ ಕೊಂಡೊಯ್ಯುವುದು ನಮ್ಮ ದೃಷ್ಟಿಯಾಗಿದೆ ಎಂದು ಅವರು ಹೇಳಿದರು.

ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಸರ್ಕಾರ ಬದ್ಧವಾಗಿದೆ. ನನ್ನ ಕ್ಷೇತ್ರದಲ್ಲಿರುವ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ತಮಿಳು ಅಧ್ಯಯನ ವಿಭಾಗವು ನನಗೆ ಹೆಚ್ಚು ವಿಶೇಷವಾಗಿದೆ. ಎನ್ಇಪಿ ಭಾರತೀಯ ಭಾಷೆಗಳನ್ನು ಉತ್ತೇಜಿಸಲು ವಿಶೇಷ ಪ್ರಾಮುಖ್ಯತೆಯನ್ನು ನೀಡುತ್ತದೆ.

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ಶ್ರೀಲಂಕಾ ಪರವಾಗಿ ಮಾತನಾಡಿದೆ. ಪ್ರಪಂಚದಾದ್ಯಂತದ ಅನೇಕ ಭಾರತೀಯ ಸಂಸ್ಥೆಗಳು ಮತ್ತು ವ್ಯಕ್ತಿಗಳು ಶ್ರೀಲಂಕಾಕ್ಕೆ ಸಹಾಯವನ್ನು ಒದಗಿಸಿದ್ದಾರೆ. ಭಾರತವು ಶ್ರೀಲಂಕಾವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada