AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 25 ವರ್ಷ ಗಮನದಲ್ಲಿಟ್ಟುಕೊಂಡು ನಾಯಕತ್ವ ರೂಪಿಸಿ; ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ

ಇತರ ಸಮುದಾಯಗಳು ಮತ್ತು ಜಾತಿಗಳನ್ನು ಹೊರತುಪಡಿಸಿ ಎಸ್‌ಸಿ, ಎಸ್‌ಟಿ, ಒಬಿಸಿಗಳು ಮತ್ತು ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ 25 ವರ್ಷ ಗಮನದಲ್ಲಿಟ್ಟುಕೊಂಡು ನಾಯಕತ್ವ ರೂಪಿಸಿ; ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ
ಪ್ರಧಾನಿ ನರೇಂದ್ರ ಮೋದಿ
S Chandramohan
| Updated By: preethi shettigar|

Updated on: Mar 17, 2022 | 9:44 PM

Share

ದೆಹಲಿ: ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳಲ್ಲಿ ನಾಯಕತ್ವವನ್ನು ಬೆಳೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯಗಳಲ್ಲಿ ಬಿಜೆಪಿ(BJP) ಪಕ್ಷವು ಕ್ಯಾಬಿನೆಟ್(Cabinet) ರಚಿಸಬೇಕು. ನಾಲ್ಕು ರಾಜ್ಯಗಳಲ್ಲಿ ಗೆದ್ದಿರುವ ಈ ಸಂದರ್ಭದಲ್ಲಿ ನಾಯಕತ್ವವನ್ನು ಬೆಳೆಸಲು ಸರಿಯಾದ ಸಮಯ ಎಂದು ಪ್ರಧಾನಿ ಮೋದಿ(Narendra modi) ಹೇಳಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಕೆಲವು ದಿನಗಳ ನಂತರ ನಿಯೋಗದೊಂದಿಗೆ ಪ್ರಧಾನಿಯವರು ಭೇಟಿಯಾಗಿದ್ದಾರೆ. ಇತ್ತೀಚಿಗೆ ಬಿಜೆಪಿ ಪಕ್ಷವು ಗೆದ್ದ ನಾಲ್ಕು ರಾಜ್ಯಗಳಲ್ಲಿ ಹೊಸ ಸರ್ಕಾರಗಳು ಮುಂದಿನ 25 ವರ್ಷಗಳ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ರಚನೆಯಾಗಲಿವೆ. ಪಕ್ಷದೊಳಗೆ ಭವಿಷ್ಯದ ನಾಯಕತ್ವವನ್ನು ಬೆಳೆಸಲು ಇದು ಒಳ್ಳೆಯ ಅವಕಾಶ ಎಂದು ಬಿಜೆಪಿಯ ಹಿರಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆದ್ದ ರಾಜ್ಯಗಳ ನಾಯಕರ ನಿಯೋಗಗಳೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿಯವರು ಈ ಮಾತುಗಳನ್ನು ಹೇಳಿದ್ದು, ಮುಂದಿನ 25 ವರ್ಷಗಳ ಕಾಲ ದೇಶ ಮತ್ತು ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯುವ ರಾಷ್ಟ್ರ ಮತ್ತು ನಾಯಕತ್ವದ ಅಡಿಪಾಯವನ್ನು ಹಾಕುವ ಬಯಕೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಚುನಾವಣೆಯಲ್ಲಿ ಸಾಧನೆಗಾಗಿ ನಾಯಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ, ರಾಷ್ಟ್ರದ ಬಗ್ಗೆ ತಮ್ಮ ದೃಷ್ಟಿಕೋನ ಮತ್ತು ಆ ಗುರಿಯನ್ನು ಸಾಧಿಸಲು ಪಕ್ಷವನ್ನು ಬಲಪಡಿಸುವ ಅಗತ್ಯವನ್ನು ಅವರೊಂದಿಗೆ ಹಂಚಿಕೊಂಡಿದ್ದು, ಸಂಪುಟಗಳನ್ನು ರಚಿಸುವಾಗ ಪರಿಪೂರ್ಣ ಸಮತೋಲನವನ್ನು ಹೊಂದಿರಬೇಕು ಎಂದು ಪ್ರಧಾನಿ ಮೋದಿ ರಾಜ್ಯ ನಾಯಕತ್ವಕ್ಕೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತರ ಸಮುದಾಯಗಳು ಮತ್ತು ಜಾತಿಗಳನ್ನು ಹೊರತುಪಡಿಸಿ ಎಸ್‌ಸಿ, ಎಸ್‌ಟಿ, ಒಬಿಸಿಗಳು ಮತ್ತು ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಾಯಕರಿಗೆ ಇಂದು ತರಬೇತಿ ನೀಡಿದರೆ ಮಾತ್ರ ಭವಿಷ್ಯದಲ್ಲಿ ಬಲಿಷ್ಠ ರಾಷ್ಟ್ರದ ನಿರ್ಮಾಣದ ಗುರಿಯನ್ನು  ಈಡೇರಿಸಲು ಸಾಧ್ಯವಾಗುತ್ತದೆ. ಇದಲ್ಲದೆ ಬಿಜೆಪಿ ಉತ್ತಮವಾಗಿ ಕಾರ್ಯನಿರ್ವಹಿಸದ 100 ಬೂತ್‌ಗಳನ್ನು ಗುರುತಿಸಿ, ಕಾರಣವನ್ನು ವಿಶ್ಲೇಷಿಸಿ ಅವುಗಳನ್ನು ಸುಧಾರಿಸುವ ಕಾರ್ಯವನ್ನು ಸಂಸದರಿಗೂ ನೀಡಲಾಗಿದೆ ಎಂದು ಎಂದು ಮೋದಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ

ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ