ದೆಹಲಿ: ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳಲ್ಲಿ ನಾಯಕತ್ವವನ್ನು ಬೆಳೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯಗಳಲ್ಲಿ ಬಿಜೆಪಿ(BJP) ಪಕ್ಷವು ಕ್ಯಾಬಿನೆಟ್(Cabinet) ರಚಿಸಬೇಕು. ನಾಲ್ಕು ರಾಜ್ಯಗಳಲ್ಲಿ ಗೆದ್ದಿರುವ ಈ ಸಂದರ್ಭದಲ್ಲಿ ನಾಯಕತ್ವವನ್ನು ಬೆಳೆಸಲು ಸರಿಯಾದ ಸಮಯ ಎಂದು ಪ್ರಧಾನಿ ಮೋದಿ(Narendra modi) ಹೇಳಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಕೆಲವು ದಿನಗಳ ನಂತರ ನಿಯೋಗದೊಂದಿಗೆ ಪ್ರಧಾನಿಯವರು ಭೇಟಿಯಾಗಿದ್ದಾರೆ. ಇತ್ತೀಚಿಗೆ ಬಿಜೆಪಿ ಪಕ್ಷವು ಗೆದ್ದ ನಾಲ್ಕು ರಾಜ್ಯಗಳಲ್ಲಿ ಹೊಸ ಸರ್ಕಾರಗಳು ಮುಂದಿನ 25 ವರ್ಷಗಳ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ರಚನೆಯಾಗಲಿವೆ. ಪಕ್ಷದೊಳಗೆ ಭವಿಷ್ಯದ ನಾಯಕತ್ವವನ್ನು ಬೆಳೆಸಲು ಇದು ಒಳ್ಳೆಯ ಅವಕಾಶ ಎಂದು ಬಿಜೆಪಿಯ ಹಿರಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆದ್ದ ರಾಜ್ಯಗಳ ನಾಯಕರ ನಿಯೋಗಗಳೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿಯವರು ಈ ಮಾತುಗಳನ್ನು ಹೇಳಿದ್ದು, ಮುಂದಿನ 25 ವರ್ಷಗಳ ಕಾಲ ದೇಶ ಮತ್ತು ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯುವ ರಾಷ್ಟ್ರ ಮತ್ತು ನಾಯಕತ್ವದ ಅಡಿಪಾಯವನ್ನು ಹಾಕುವ ಬಯಕೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಚುನಾವಣೆಯಲ್ಲಿ ಸಾಧನೆಗಾಗಿ ನಾಯಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ, ರಾಷ್ಟ್ರದ ಬಗ್ಗೆ ತಮ್ಮ ದೃಷ್ಟಿಕೋನ ಮತ್ತು ಆ ಗುರಿಯನ್ನು ಸಾಧಿಸಲು ಪಕ್ಷವನ್ನು ಬಲಪಡಿಸುವ ಅಗತ್ಯವನ್ನು ಅವರೊಂದಿಗೆ ಹಂಚಿಕೊಂಡಿದ್ದು, ಸಂಪುಟಗಳನ್ನು ರಚಿಸುವಾಗ ಪರಿಪೂರ್ಣ ಸಮತೋಲನವನ್ನು ಹೊಂದಿರಬೇಕು ಎಂದು ಪ್ರಧಾನಿ ಮೋದಿ ರಾಜ್ಯ ನಾಯಕತ್ವಕ್ಕೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತರ ಸಮುದಾಯಗಳು ಮತ್ತು ಜಾತಿಗಳನ್ನು ಹೊರತುಪಡಿಸಿ ಎಸ್‌ಸಿ, ಎಸ್‌ಟಿ, ಒಬಿಸಿಗಳು ಮತ್ತು ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಾಯಕರಿಗೆ ಇಂದು ತರಬೇತಿ ನೀಡಿದರೆ ಮಾತ್ರ ಭವಿಷ್ಯದಲ್ಲಿ ಬಲಿಷ್ಠ ರಾಷ್ಟ್ರದ ನಿರ್ಮಾಣದ ಗುರಿಯನ್ನು ಈಡೇರಿಸಲು ಸಾಧ್ಯವಾಗುತ್ತದೆ. ಇದಲ್ಲದೆ ಬಿಜೆಪಿ ಉತ್ತಮವಾಗಿ ಕಾರ್ಯನಿರ್ವಹಿಸದ 100 ಬೂತ್‌ಗಳನ್ನು ಗುರುತಿಸಿ, ಕಾರಣವನ್ನು ವಿಶ್ಲೇಷಿಸಿ ಅವುಗಳನ್ನು ಸುಧಾರಿಸುವ ಕಾರ್ಯವನ್ನು ಸಂಸದರಿಗೂ ನೀಡಲಾಗಿದೆ ಎಂದು ಎಂದು ಮೋದಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ