ದೇಶದಲ್ಲಿ ಕೊರೊನಾ ಸೋಂಕಿನ ನಾಗಾಲೋಟ; 24 ಗಂಟೆಯಲ್ಲಿ 1,341 ಮಂದಿ ಕೊವಿಡ್​-19ನಿಂದ ಸಾವು

|

Updated on: Apr 17, 2021 | 11:19 AM

ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ಅತಿ ವೇಗವಾಗಿ ಹರಡುತ್ತಿರುವುದು ಆತಂಕ ತಂದಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿನ ನಾಗಾಲೋಟ; 24 ಗಂಟೆಯಲ್ಲಿ 1,341 ಮಂದಿ ಕೊವಿಡ್​-19ನಿಂದ ಸಾವು
ಪ್ರಾತಿನಿಧಿಕ ಚಿತ್ರ
Follow us on

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಸರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಳೇ ದಾಖಲೆಗಳನ್ನೆಲ್ಲ ಮುರಿಯುತ್ತಿದೆ. ಇಂದು ಒಂದೇ ದಿನ ಬರೋಬ್ಬರಿ 2,34,692 ಕೊರೊನಾ ಕೇಸ್​ಗಳು ಪತ್ತೆಯಾಗಿದ್ದು, ಇದೂ ಸಹ ಒಂದು ದಾಖಲೆಯೇ ಆಗಿದೆ. ಅಲ್ಲಿಗೆ ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ1,45,26,609ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 1,341 ಜನರು ಮೃತಪಟ್ಟಿದ್ದು, ಒಟ್ಟೂ ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಹಾಗೇ, ಕಳೆದೊಂದು ದಿನದಲ್ಲಿ 1,23,354 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 1,26,71,220 ಆಗಿದೆ. ಕೊರೊನಾ ಸಕ್ರಿಯ ಪ್ರಕರಣಗಳು 16,79,740 ಇವೆ.

ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ಅತಿ ವೇಗವಾಗಿ ಹರಡುತ್ತಿರುವುದು ಆತಂಕ ತಂದಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇತ್ತೀಚೆಗೆ ಶುರುವಾದ ಕುಂಭಮೇಳ ಕೊರೊನಾ ಹಾಟ್​ಸ್ಪಾಟ್ ಆಗಿ ಬದಲಾಗಿದ್ದು, 80ಕ್ಕೂ ಹೆಚ್ಚು ಸಾಧುಗಳಿಗೆ ಸೋಂಕು ತಗುಲಿದೆ. ಈ ಬಾರಿ ಕುಂಭಮೇಳ ಆಚರಣೆ ಸರಳವಾಗಿದ್ದರೆ ಸಾಕು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

ಮಂಗಳ‌ಮುಖಿಯರೂ ಯಾಕೆ ಕಮ್ಮಿ ಅಂತ ಚುನಾವಣೆಗೆ ಸ್ಪರ್ಧಿಸಿದ ಮಂಗಳ‌ಮುಖಿ ದೀಕ್ಷಾ

Published On - 11:17 am, Sat, 17 April 21