ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ (Loksabha Election) ಕಾಂಗ್ರೆಸ್ಗೆ (Congress) ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ (Congress Government) ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಮಳೆ ಬಾರದೆ, ಬೆಳೆಗಳಿಗೆ ನೀರಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ಬೆಳೆ ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು, ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಕ್ಷಾಮ ಉಂಟಾಗುವ ಸಾಧ್ಯತೆ ಇದೆ. ನೀರಿನ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಆಗಿದೆ. ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿ ರೈತರಿಗೆ ಸಮಸ್ಯೆಯಾಗಲಿದೆ. ಯಾವುದೇ ಕ್ರಮಕ್ಕೆ ಮುಂದಾಗದೆ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಇದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್ನಲ್ಲೂ ಮಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಕಹಳೆ, ಜೋರಾಯ್ತು ಟಿಕೆಟ್ಗೆ ಲಾಬಿ: ಯಾರು-ಯಾವ ಕ್ಷೇತ್ರಕ್ಕೆ? ಇಲ್ಲಿದೆ ವಿವರ
ವರ್ಗಾವಣೆ ದಂದೆ ಸೇರಿದಂತೆ ಹಲವು ವಿಚಾರದಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಕಾಂಗ್ರೆಸ್ನವರು ಬಡಿದಾಡುತ್ತಿದ್ದಾರೆ. ಇದು ರಾಜ್ಯದ ದುಸ್ಥಿತಿ ಹಾಗೂ ವಿಪರ್ಯಾಸ. ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಧಮನ ಮಾಡುವ ಕೆಲಸ ನಡೆದಿದೆ. ಪತ್ರಕರ್ತರು ಶಾಸಕರ ಪತ್ರ ಹೊರಗೆ ತಂದರೇ ಪತ್ರಕರ್ತರಿಗೆ ನೋಟಿಸ್ ಕೊಡುತ್ತಾರೆ. ಪತ್ರಿಕಾ ಸ್ವಾತಂತ್ರ್ಯ ಧಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ