ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ ಸಂಬಂಧಿಸಿದ ಈ ಘಟನೆಯಲ್ಲಿ ದೂರು ದಾಖಲಿಸುವಂತೆ ಸಹರಾನ್​ಪುರ ನ್ಯಾಯಾಲಯವು ಉತ್ತರ ಪ್ರದೇಶದ ಪೊಲೀಸರಿಗೆ ಆದೇಶಿಸಿದೆ. ಮಹಿಳೆ ಸಹರಾನ್​ಪುರ ನಿವಾಸಿ, ಆಕೆಯ ಪತಿ, ಅತ್ತೆ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಐಪಿಸಿ 307, 498ಎ, 323, 328, 406 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಗಳ ಪ್ರಕಾರ, ಈ ಘಟನೆ ಮೇ 2024 ರಲ್ಲಿ ಹರಿದ್ವಾರದಲ್ಲಿರುವ ಮಹಿಳೆಯ ಅತ್ತೆಯ ಮನೆಯಲ್ಲಿ ನಡೆದಿತ್ತು.

ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ
ಇಂಜೆಕ್ಷನ್
Image Credit source: Healthline

Updated on: Feb 16, 2025 | 10:25 AM

ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ ಸಂಬಂಧಿಸಿದ ಈ ಘಟನೆಯಲ್ಲಿ ದೂರು ದಾಖಲಿಸುವಂತೆ ಸಹರಾನ್​ಪುರ ನ್ಯಾಯಾಲಯವು ಉತ್ತರ ಪ್ರದೇಶದ ಪೊಲೀಸರಿಗೆ ಆದೇಶಿಸಿದೆ.

ಮಹಿಳೆ ಸಹರಾನ್​ಪುರ ನಿವಾಸಿ, ಆಕೆಯ ಪತಿ, ಅತ್ತೆ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಐಪಿಸಿ 307, 498ಎ, 323, 328, 406 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಗಳ ಪ್ರಕಾರ, ಈ ಘಟನೆ ಮೇ 2024 ರಲ್ಲಿ ಹರಿದ್ವಾರದಲ್ಲಿರುವ ಮಹಿಳೆಯ ಅತ್ತೆಯ ಮನೆಯಲ್ಲಿ ನಡೆದಿತ್ತು.

ಸಂತ್ರಸ್ತೆಯ ತಂದೆ ಮಾತನಾಡಿ, 2023ರಲ್ಲಿ ತಮ್ಮ ಮಗಳ ಮದುವೆ ಮಾಡಿಕೊಟ್ಟಿದ್ದೆವು, ಮದುವೆಗೆ 45 ಲಕ್ಷ ರೂ. ಖರ್ಚು ಮಾಡಿದ್ದೆವು. ವರನ ಕುಟುಂಬಕ್ಕೆ 15 ಲಕ್ಷ ರೂ. ನಗದು ಹಾಗೂ ಸಬ್​-ಕಾಂಪ್ಯಾಕ್ಟ್​ ಎಸ್​ಯುವಿ ನೀಡಿದ್ದೇವೆ, ಆದರೆ ಅವರು ಹೆಚ್ಚುವರಿಯಾಗಿ 10 ಲಕ್ಷ ರೂಪಾಯಿ ನಗದು ಮತ್ತು ದೊಡ್ಡ ಎಸ್​ಯುವಿ ಕೇಳಿದ್ದಾರೆ ಎಂದು ತಮದೆ ಹೇಳಿದ್ದಾಗಿ ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಓದಿ: ವರದಕ್ಷಿಣೆ ಬಗ್ಗೆ ಸುಳ್ಳು ಕೇಸ್, ಪತ್ನಿ ವಿರುದ್ಧ ಪತ್ರ ಬರೆದಿಟ್ಟು ಪತಿ ಆತ್ಮಹತ್ಯೆ

ಮದುವೆಯಾದ ತಕ್ಷಣ ಆಕೆಗೆ ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿದ್ದರು, ಮಗಳನ್ನು ಅವಮಾನಿಸಿದರು, ಮಗನಿಗೆ ಬೇರೆ ಮದುವೆ ಮಾಡುವುದಾಗಿ ಹೇಳಿದರು. ಮಾರ್ಚ್​ 25, 2023ರಂದು ಆಕೆಯನ್ನು ಮನೆಯಿಂದ ಹೊರಹಾಕಲಾಯಿತು. ಮೂರು ತಿಂಗಳುಗಳ ಕಾಲ ನಮ್ಮೊಂದಿಗೆ ಇದ್ದಳು, ನಂತರ ಹೇಗೋ ಮಾತನಾಡಿ ಆಕೆಯ ಗಂಡನ ಮನೆಗೆ ಕಳುಹಿಸಲಾಯಿತು. ಬಳಿಕ ಆಕೆಗೆ ದೈಹಿಕ ಹಾಗೂ ಮಾನಸಿಕವಾಗಿ ಚಿತ್ರಹಿಂಸೆ ನೀಡಲಾಯಿತು.

2024ರ ಮೇನಲ್ಲಿ ಆಕೆಯ ಅತ್ತೆ ಮಾವ ಬಲವಂತವಾಗಿ ಆಕೆಗೆ ಎಚ್​ಐವಿ ಸೋಂಕಿತ ಸಿರಿಂಜ್ ಅನ್ನು ಚುಚ್ಚಿದ್ದರು. ಆಕೆಯ ಆರೋಗ್ಯ ಶೀಘ್ರವಾಗಿ ಹದಗೆಟ್ಟಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಆಕೆ ಎಚ್​ಐವಿ ಪಾಸಿಟಿವ್ ಆಗಿರುವುದು ತಿಳಿದುಬಂದಿತ್ತು. ಆದರೆ ಆಕೆಯ ಪತಿಗೆ ಎಚ್‌ಐವಿ-ನೆಗೆಟಿವ್ ಕಂಡುಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us