AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಒಂದಕ್ಕೆ ಐದರಷ್ಟು ಹಣ: ಎಟಿಎಂ ಎದುರು ಮುಗಿಬಿದ್ದ ಗ್ರಾಹಕರು

ನೀವು 10000ರೂ. ನಗದು ಪಡೆಯಲು ಎಟಿಎಂಗೆ ಹೋಗಿ ಬದಲಾಗಿ ನಿಮಗೆ 50000ರೂ. ಸಿಕ್ಕರೆ ನೀವು ಏನು ಮಾಡುತ್ತೀರಿ? ಮತ್ತಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತೀರಿ ಅಲ್ಲವೇ? ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಖಪರ್ಖೇಡಾ ಪಟ್ಟಣದ ಖಾಸಗಿ ಬ್ಯಾಂಕ್‌ನ ಎಟಿಎಂನಲ್ಲಿ ಗ್ರಾಹಕರೊಬ್ಬರಿಗೆ 500 ರೂ ಬದಲಿಗೆ 500ರೂ. ಮುಖಬೆಲೆಯ 5 ನೋಟುಗಳು ದೊರೆತಿವೆ.

ಎಟಿಎಂನಲ್ಲಿ ಒಂದಕ್ಕೆ ಐದರಷ್ಟು ಹಣ: ಎಟಿಎಂ ಎದುರು ಮುಗಿಬಿದ್ದ ಗ್ರಾಹಕರು
ATMImage Credit source: NDTV
TV9 Web
| Updated By: ನಯನಾ ರಾಜೀವ್|

Updated on:Jun 16, 2022 | 12:18 PM

Share

ನೀವು 10000ರೂ. ನಗದು ಪಡೆಯಲು ಎಟಿಎಂಗೆ ಹೋಗಿ ಬದಲಾಗಿ ನಿಮಗೆ 50000ರೂ. ಸಿಕ್ಕರೆ ಏನು ಮಾಡುತ್ತೀರಿ? ಮತ್ತಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತೀರಿ ಅಲ್ಲವೇ?  ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಖಪರ್ಖೇಡಾ ಪಟ್ಟಣದ ಖಾಸಗಿ ಬ್ಯಾಂಕ್‌ನ ಎಟಿಎಂನಲ್ಲಿ ಗ್ರಾಹಕರೊಬ್ಬರಿಗೆ 500 ರೂ ಬದಲಿಗೆ 500ರೂ. ಮುಖಬೆಲೆಯ 5 ನೋಟುಗಳು ದೊರೆತಿವೆ.

ಎಟಿಎಂನಿಂದ ಗ್ರಾಹಕರೊಬ್ಬರು 500 ಡ್ರಾ ಮಾಡಲು ಪ್ರಯತ್ನಿಸಿದಾಗ ಅವರಿಗೆ ಆಶ್ಚರ್ಯ ಕಾದಿತ್ತು, 500 ರೂ,ಗಳ ಬದಲು 2,500 ರೂ ಸಿಕ್ಕಿತ್ತು. ಈ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆ ಹರಡಿ ಕೆಲವೇ ನಿಮಿಷಗಳಲ್ಲಿ ಎಟಿಎಂ ಎದುರು ಗ್ರಾಹಕರ ಕ್ಯೂ ನಿಂತಿತ್ತು. ಬಳಿಕ ಗ್ರಾಹಕರೊಬ್ಬರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಎಟಿಎಂ ಕೇದ್ರವನ್ನು ಮುಚ್ಚಿ ಬ್ಯಾಂಕ್​ಗೆ ಮಾಹಿತಿ ರವಾನಿಸಿದ್ದಾರೆ.

ತಾಂತ್ರಿಕ ದೋಷದಿಂದ ಎಟಿಎಂನಲ್ಲಿ ಹೆಚ್ಚಿನ ಹಣ ಬರುತ್ತಿತ್ತು, ಎಂದು ಖಪರ್ಖೇಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100 ರೂ. ಇರಿಸುವ ಜಾಗದಲ್ಲಿ 500 ರೂ. ಇರಿಸಿದ್ದು, ಈ ಗೊಂದಲಕ್ಕೆ ಕಾರಣವಾಗಿದೆ. ಹಾಗಾಗಿ 500 ರೂ. ಎಂಟ್ರಿ ಮಾಡಿದಾಗ 100ರೂ. ಬದಲು 500 ರೂ. ಮುಖಬೆಲೆಯ 5 ನೋಟುಗಳು ಸಿಕ್ಕಿದ್ದವು.

ಈ ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 16 June 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!