ಮಣಿಪುರ ಹಿಂಸಾಚಾರದ ವೇಳೆ ಸ್ವಾತಂತ್ರ್ಯ ಹೋರಾಟಗಾರನ ಪತ್ನಿ ಸಜೀವ ದಹನ

ಸ್ವಾತಂತ್ರ್ಯ ಹೋರಾಟಗಾರರ ಪತ್ನಿ 80 ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ಆಕೆಯ ಗ್ರಾಮದ ಮೇಲೆ ದಾಳಿ ಮಾಡಿದವರು ಹೊರಗಿನಿಂದ ಬೀಗ ಹಾಕಿದ್ದರು. ಆನಂತರ ಮನೆಗೆ ಬೆಂಕಿ ಹಚ್ಚಲಾಗಿದೆ, ಕುಟುಂಬ ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದೆ ಎಂದು ಇಬೆಟೊಂಬಿಯ ಮೊಮ್ಮಗ 22ರ ಹರೆಯದ ಪ್ರೇಮಕಾಂತ ಹೇಳಿದ್ದಾರೆ.

ಮಣಿಪುರ ಹಿಂಸಾಚಾರದ ವೇಳೆ ಸ್ವಾತಂತ್ರ್ಯ ಹೋರಾಟಗಾರನ ಪತ್ನಿ ಸಜೀವ ದಹನ
ಮಣಿಪುರ ಹಿಂಸಾಚಾರ ವಿರೋಧಿಸಿ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on:Jul 22, 2023 | 9:01 PM

ಸೆರೌ (ಕಾಕ್ಚಿಂಗ್) ಜುಲೈ 22: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಮಹಿಳೆಯರ ಮೇಲಿನ ದೌರ್ಜನ್ಯದ ಕತೆ ಒಂದೊಂದೇ ವರದಿಯಾಗುತ್ತಿದೆ. ಬುಡಕಟ್ಟು ಮಹಿಳೆಯರನ್ನು ಪುರುಷರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಚ್ಚಿಬೀಳಿಸುವಂತಿದೆ. ಕಾಕ್ಚಿಂಗ್ ಜಿಲ್ಲೆಯ ಸೆರೌ ಗ್ರಾಮದಲ್ಲಿ (Serou village) ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು (80 ವರ್ಷ ವಯಸ್ಸು) ಮನೆಯೊಳಗೆ ಬೀಗ ಹಾಕಿ ಸಶಸ್ತ್ರ ಗುಂಪು ಬೆಂಕಿ ಹಚ್ಚಿದೆ ಎಂದು ಸೆರೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ (Churachand Singh) ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಘಟನೆಯು ಮೇ 28ರಂದು ಬೆಳಗ್ಗೆ ನಡೆದ್ದು, ಸೆರೌನಂತಹ ಸ್ಥಳಗಳಲ್ಲಿ ಭಾರಿ ಹಿಂಸಾಚಾರ ಮತ್ತು ಗುಂಡಿನ ಚಕಮಕಿಯನ್ನು ನಡೆದಿತ್ತು. ಮೇ 3 ರಂದು ಹಿಂಸಾಚಾರ ಪ್ರಾರಂಭವಾಗುವ ಮೊದಲು, ಸೆರೌ ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಒಂದು ಸುಂದರವಾದ ಗ್ರಾಮವಾಗಿತ್ತು. ಆದರೆ ಈಗ ಅಲ್ಲಿ ಸುಟ್ಟ ಮನೆಗಳು ಮತ್ತು ಗೋಡೆಗಳ ಮೇಲೆ ಗುಂಡಿನ ರಂಧ್ರಗಳು ಮಾತ್ರ ಉಳಿದಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ

ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತಿ ಬೇಡಿಕೆಯ ಮೇಲೆ ಕಣಿವೆಯ ಬಹುಸಂಖ್ಯಾತ ಮೈತಿ ಮತ್ತು ಬೆಟ್ಟದ ಬಹುಸಂಖ್ಯಾತ ಕುಕಿ ಬುಡಕಟ್ಟಿನ ನಡುವಿನ ಘರ್ಷಣೆಯ ಸಮಯದಲ್ಲಿ ಹೆಚ್ಚು ಹಾನಿಗೊಳಗಾದ ಹಳ್ಳಿಗಳಲ್ಲಿ ಇದೂ ಒಂದು.

ಸ್ವಾತಂತ್ರ್ಯ ಹೋರಾಟಗಾರರ ಪತ್ನಿ 80 ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ಆಕೆಯ ಗ್ರಾಮದ ಮೇಲೆ ದಾಳಿ ಮಾಡಿದವರು ಹೊರಗಿನಿಂದ ಬೀಗ ಹಾಕಿದ್ದರು. ಆನಂತರ ಮನೆಗೆ ಬೆಂಕಿ ಹಚ್ಚಲಾಗಿದೆ, ಕುಟುಂಬ ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದೆ ಎಂದು ಇಬೆಟೊಂಬಿಯ ಮೊಮ್ಮಗ 22ರ ಹರೆಯದ ಪ್ರೇಮಕಾಂತ ಹೇಳಿದ್ದಾರೆ.

ಅಜ್ಜಿಯನ್ನು ಉಳಿಸಲು ಪ್ರಯತ್ನಿಸಿದಾಗ ಗುಂಡುಗಳು ತೋಳು ಮತ್ತು ತೊಡೆಗೆ ತಾಗಿತ್ತು. ನಾವು ದಾಳಿಗೆ ಒಳಗಾದಾಗ, ನನ್ನ ಅಜ್ಜಿ ನಮಗೆ ಈಗ ಓಡಿಹೋಗಿ ಸ್ವಲ್ಪ ಸಮಯದ ನಂತರ ಹಿಂತಿರುಗಿ ಬನ್ನಿ ಎಂದು ಹೇಳಿದ್ದರು.ನಾವು ಹೊರಡುವಾಗ ನನ್ನನ್ನು ಕರೆದೊಯ್ಯಲು ವಾಪಸ್ ಬನ್ನಿ ಎಂದು ಆಕೆ ಹೇಳಿದ್ದರು.ದುರದೃಷ್ಟವಶಾತ್ ಅದು ಅವರ ಕೊನೆಯ ಮಾತುಗಳಾಗಿತ್ತು. ಅಜ್ಜಿಗೆ ಓಡಲಾಗದ ಕಾರಣ ಮನೆಯಲ್ಲೇ ಬಾಕಿಯಾದರು ಅಂತಾರೆ ಮೊಮ್ಮಗ.

ಇದನ್ನೂ ಓದಿ: ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ

ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಸುಮಾರು ಎರಡು ತಿಂಗಳ ನಂತರ, ಪ್ರೇಮಕಾಂತ ಅವರು ತಮ್ಮ ಮನೆಯಿದ್ದ ಜಾಗಕ್ಕೆ ಮರಳಿದ್ದಾರೆ.ಇನ್ನುಳಿದ ಅವಶೇಷ ವೆಂದರೆ ಇಬೆಟೊಂಬಿ ಅವರು ಬಹಳ ಪ್ರೀತಿಯಿಂದ ಹಿಡಿದಿದ್ದ ಅಮೂಲ್ಯವಾದ ಛಾಯಾಚಿತ್ರ. ಸ್ವಾತಂತ್ರ್ಯ ಹೋರಾಟಗಾರನಾದ ತನ್ನ ಪತಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಜತೆಗಿದ್ದ ಫೋಟೊ ಅದು.

ಹಳ್ಳಿಯಿಂದ ಸ್ವಲ್ಪ ದೂರದಲ್ಲಿರುವ ಸೆರೌ ಮಾರುಕಟ್ಟೆ ಬಿಕೋ ಅನ್ನುತ್ತಿದೆ. ಇಲ್ಲಿ ವ್ಯಾಪಾರ ಮಾಡಿ ವಾಸವಿದ್ದವರೆಲ್ಲ ಸ್ಥಳದಿಂದ ಗುಳೆ ಹೋಗಿದ್ದಾರೆ.ಈಗಲೂ ಸಹ ಈ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಯಾವುದೇ ಹೊಸ ಘರ್ಷಣೆಯನ್ನು ತಡೆಯಲು ಭದ್ರತಾ ಪಡೆಗಳು ಕಟ್ಟೆಚ್ಚರದಲ್ಲಿವೆ. ಗ್ರಾಮಸ್ಥರು ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ನೋಡುವುದರಿಂದ ಚಲನೆಯ ಮೇಲೆ ನಿರ್ಬಂಧಗಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Sat, 22 July 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ