AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ, ಮೂವರು ಸಾವು, ಇಬ್ಬರಿಗೆ ಗಾಯ

ಮಹಾರಾಷ್ಟ್ರದ ಪಾಲ್ಘಢ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಕಾರು ರಸ್ತೆ ವಿಭಜಕಕ್ಕೆ ಜಿಗಿದು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಪ್ರಯಾಣಿಕರಿದ್ದ ಕಾರು ಮುಂಬೈನಿಂದ ಗುಜರಾತ್‌ನ ಅಹಮದಾಬಾದ್ ಕಡೆಗೆ ಹೋಗುತ್ತಿದ್ದಾಗ ಸತಿವಲಿ ಗ್ರಾಮದ ಬಳಿ ಬೆಳಿಗ್ಗೆ 6.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವಲಿವ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಜೈರಾಮ್ ರಾನವರೆ ತಿಳಿಸಿದ್ದಾರೆ.

ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ, ಮೂವರು ಸಾವು, ಇಬ್ಬರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Sep 06, 2023 | 12:49 PM

Share

ಮಹಾರಾಷ್ಟ್ರದ ಪಾಲ್ಘಢ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಕಾರು ರಸ್ತೆ ವಿಭಜಕಕ್ಕೆ ಜಿಗಿದು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಪ್ರಯಾಣಿಕರಿದ್ದ ಕಾರು ಮುಂಬೈನಿಂದ ಗುಜರಾತ್‌ನ ಅಹಮದಾಬಾದ್ ಕಡೆಗೆ ಹೋಗುತ್ತಿದ್ದಾಗ ಸತಿವಲಿ ಗ್ರಾಮದ ಬಳಿ ಬೆಳಿಗ್ಗೆ 6.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವಲಿವ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಜೈರಾಮ್ ರಾನವರೆ ತಿಳಿಸಿದ್ದಾರೆ.

ಕಾರು ರಸ್ತೆ ವಿಭಜಕವನ್ನು ಜಿಗಿದು, ಇನ್ನೊಂದು ಬದಿಯ ಲೇನ್‌ಗೆ ಹೋಗಿ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಟ್ರಕ್​ಗೆ ಮಿನಿ ವ್ಯಾನ್ ಡಿಕ್ಕಿ ಒಂದೇ ಕುಟುಂಬದ 6 ಮಂದಿ ಸಾವು ತಮಿಳುನಾಡಿನ ಸೇಲಂ-ಕೊಯಂಬತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿವ್ಯಾನ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಕ್ಯಾಮರಾದಲ್ಲಿ ಸೆರೆಯಾಗಿದೆ ಮತ್ತು ಬಿಳಿಯ ವೇಗದ ಮಿನಿವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು. ಮಂಗಳವಾರ, ರಾಜಸ್ಥಾನದ ಭಿಲ್ವಾರಾದಲ್ಲಿ ಟ್ರಕ್‌ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಮತ್ತು ಇಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ನಾಲ್ವರ ಸಾವು

ಕಾರಿನ ಟೈರ್ ಬರ್ಸ್ಟ್​ ಆಗಿ ನಂತರ ಅದು ರಸ್ತೆ ವಿಭಜಕವನ್ನು ಜಿಗಿದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶಿವರಾಜ್ ವರದಿಯಲ್ಲಿ ತಿಳಿಸಿದ್ದಾರೆ.

ಮೃತರನ್ನು ರಾಧೇಶ್ಯಾಮ್, ಅವರ ಪತ್ನಿ ಶಕುಂತ್ಲಾ, ಅವರ ಮಗ ಮನೀಶ್ ಮತ್ತು ಅವರ ಪತ್ನಿ ಯಶಿಕಾ ಎಂದು ಗುರುತಿಸಲಾಗಿದ್ದು, ಅಪ್ರಾಪ್ತ ಬಾಲಕಿ ಮತ್ತು ಕಾರಿನ ಚಾಲಕ ಗಾಯಗೊಂಡಿದ್ದಾರೆ.

ಮಂಗಳವಾರ ಪಂಜಾಬ್‌ನಲ್ಲಿ ನಡೆದ ಮತ್ತೊಂದು ಕಾರು ಅಪಘಾತದಲ್ಲಿ ಓರ್ವ ವ್ಯಕ್ತಿ ಮತ್ತು ಆತನ ಮೂರು ವರ್ಷದ ಮಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಜಾಬ್‌ನ ಹೋಶಿಯಾರ್‌ಪುರದ ಉಚಿ ಬಸ್ಸಿ ಪ್ರದೇಶದ ಬಳಿ ಒಂದೇ ಕುಟುಂಬದ ನಾಲ್ವರು ತಮ್ಮ ಕಾರಿನಲ್ಲಿ ಜಲಂಧರ್‌ನಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ