ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ

ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ
ಸೌರವ್​ ಗಂಗೂಲಿ- ದೇವಿ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
| Updated By: Lakshmi Hegde

Updated on: Jan 27, 2021 | 9:52 PM

ಕೋಲ್ಕತ್ತ: ಹೃದಯ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ನಾಳೆ ವುಡ್​ಲ್ಯಾಂಡ್​ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ವೇಳೆ ಅವರಿಗೆ ಸ್ಟಂಟ್​ ಅಳವಡಿಕೆ ಮಾಡಲಾಗುತ್ತದೆ. ವಿಶೇಷ ಎಂದರೆ, ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ದೇವಿ ಶೆಟ್ಟಿ ಅವರು ಕೂಡ ಹಾಜರಿರಲಿದ್ದಾರೆ.

ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಡಾ. ಸಪ್ತರ್ಷಿ ಬಸು ಮತ್ತು ಡಾ. ಸರೋಜ್​ ಮೊಂಡಲ್​ ಅವರ ಮೇಲ್ವಿಚಾರಣೆ ಮಾಡಿದ್ದಾರೆ. ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿತ್ತು. ಆದರೆ, ಅವರ ಆರೋಗ್ಯ ಸಮಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್