AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ, 35 ವಿದ್ಯಾರ್ಥಿಗಳು ಅಸ್ವಸ್ಥ

ತೆಲಂಗಾಣದ ಹಾಸ್ಟೆಲ್​ನಲ್ಲಿ ಬೆಳಗ್ಗೆ ವಿದ್ಯಾರ್ಥಿಗಳಿಗೆ ನೀಡಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತೆಲಂಗಾಣದ ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ, 35 ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳು
ನಯನಾ ರಾಜೀವ್
|

Updated on:Jul 10, 2024 | 2:30 PM

Share

ತೆಲಂಗಾಣದ ಮೇದಕ್‌ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಅಸ್ವಸ್ಥರಾಗಿದ್ದರು. ವಾಂತಿ, ಬೇಧಿ ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿರ್ಲಕ್ಷ್ಯದ ಆರೋಪದ ಮೇಲೆ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದ್ದು, ಹಾಸ್ಟೆಲ್‌ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ತಿಳಿಸಿದ್ದಾರೆ.

ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ವೈದ್ಯಕೀಯ ನೆರವು ನೀಡಿ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ವರದಿಗಳ ಪ್ರಕಾರ ಆಹಾರವನ್ನು ತಯಾರಿಸುವ ಸಮಯದಲ್ಲಿ ಹಲ್ಲಿ ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಜಿಲ್ಲಾಧಿಕಾರಿ ಸೇರಿದಂತೆ ಉನ್ನತಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಉಪ್ಪಿಟ್ಟು ನೀಡಲಾಗಿತ್ತು, ಅದರಲ್ಲಿ ಹಲ್ಲಿ ಇರುವುದನ್ನು ವಿದ್ಯಾರ್ಥಿಗಳು ಕಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿದೆ. ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಆದೇಶಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:30 pm, Wed, 10 July 24