ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ಗೆ ದೇವಸ್ಥಾನ ಕಟ್ಟಿ ದಿನವೂ ಪೂಜೆ, ಭಜನೆ

ಆರತಿಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳುವ ಭಜನೆಗಳನ್ನು ಹಾಡಲಾಗುತ್ತದೆ. ಪ್ರಭಾಕರ್ ಮೌರ್ಯ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದ ವ್ಯಕ್ತಿ.

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ಗೆ ದೇವಸ್ಥಾನ ಕಟ್ಟಿ ದಿನವೂ ಪೂಜೆ, ಭಜನೆ
ಯೋಗಿ ಆದಿತ್ಯನಾಥ್ ದೇವಾಲಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 20, 2022 | 10:13 AM

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅಯೋಧ್ಯೆಯ ಭರತಕುಂಡ್‌ನಲ್ಲಿರುವ ದೇವಾಲಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಗ್ರಹವನ್ನು ಸ್ಥಾಪಿಸಿ, ಅದನ್ನು ಪೂಜಿಸಲಾಗುತ್ತಿದೆ. ಅವರನ್ನು ಭಗವಾನ್ ರಾಮನ ಅವತಾರದಂತೆ ಚಿತ್ರಿಸಿ, ಪ್ರಾರ್ಥಿಸಲಾಗುತ್ತಿದೆ.

ಆರತಿಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳುವ ಭಜನೆಗಳನ್ನು ಹಾಡಲಾಗುತ್ತದೆ. ಪ್ರಭಾಕರ್ ಮೌರ್ಯ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದ ವ್ಯಕ್ತಿ. ಈ ಸ್ಥಳದಲ್ಲಿ ಪ್ರಸಾರ ಮಾಡಲು ಭಜನೆಗಳ ಆಡಿಯೋ ಮತ್ತು ವಿಡಿಯೋ ಕ್ಯಾಸೆಟ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಬಹುಕಾಲದ ಭರವಸೆಯ ರಾಮಮಂದಿರ ನಿರ್ಮಾಣದ ಹಂತದಲ್ಲಿದೆ. ಪ್ರಭಾಕರ ಮೌರ್ಯ ಅಯೋಧ್ಯೆಯಿಂದ ಕೇವಲ 15 ಕಿಮೀ ದೂರದಲ್ಲಿ ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಇದನ್ನು ಭಗವಾನ್ ರಾಮನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಅಯೋಧ್ಯೆ-ಗೋರಖ್‌ಪುರ ಹೆದ್ದಾರಿಯಲ್ಲಿರುವ ಭರತ್‌ಕುಂಡ್ ಬಳಿಯ ಯೋಗಿ ಆದಿತ್ಯನಾಥ್ ಅವರ ದೇವಾಲಯವು ಇರುವ ಈ ಸ್ಥಳದಲ್ಲಿ ರಾಮನ ಸಹೋದರ ಭರತ ತನ್ನ ಮರದ ಚಪ್ಪಲಿಯನ್ನು ಸಿಂಹಾಸನದ ಮೇಲೆ ಇರಿಸುವ ಮೂಲಕ 14 ವರ್ಷಗಳ ಕಾಲ ಅಯೋಧ್ಯೆಯ ಆಳ್ವಿಕೆಯನ್ನು ವಹಿಸಿಕೊಂಡನೆಂದು ನಂಬಲಾಗಿದೆ.

ಇದನ್ನೂ ಓದಿ: ದೇವಸ್ಥಾನದ ಮಹದ್ವಾರ ನಿರ್ಮಾಣಕ್ಕೆ ವಿರೋಧ: ಟಿಪ್ಪು ಗೇಟ್ ನಿರ್ಮಾಣಕ್ಕೆ ಮುಂದಾದ ಅನ್ಯಕೋಮಿನ ಯುವಕರು; ಶಾಸಕ ಸುನೀಲ್ ನಾಯ್ಕ ಖಡಕ್ ಎಚ್ಚರಿಕೆ

ಪ್ರಭಾಕರ್ ಮೌರ್ಯರ ಸಂಕಲ್ಪ ಈಡೇರಿಕೆಗೆ ಈ ದೇವಾಲಯ ಸಾಕ್ಷಿಯಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಮಂದಿರವನ್ನು ನಿರ್ಮಿಸುವ ವ್ಯಕ್ತಿಯ ಹೆಸರಿನಲ್ಲಿ ಮಂದಿರವನ್ನು ನಿರ್ಮಿಸುತ್ತೇನೆ ಎಂದು ಪ್ರಭಾಕರ್ ಮೌರ್ಯ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಈಗ, ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿ ಯೋಗಿ ಆದಿತ್ಯನಾಥ್ ದೊಡ್ಡ ಪಾತ್ರವನ್ನು ವಹಿಸಿದ್ದಾರೆ ಎಂದು ಪ್ರಭಾಕರ್ ಮೌರ್ಯ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಎತ್ತರ 5.4 ಅಡಿ ಇದೆ. ಈ ವಿಗ್ರಹದ ಮೇಲಿರುವ ಬಟ್ಟೆಗಳ ಬಗ್ಗೆಯೂ ಗಮನ ಹರಿಸಲಾಗಿದೆ. ಯೋಗಿ ಆದಿತ್ಯನಾಥ್ ಧರಿಸುವ ರೀತಿಯ ಬಟ್ಟೆಯನ್ನೇ ಇದಕ್ಕೆ ಹಾಕಲಾಗಿದೆ ಎಂದು ಪ್ರಭಾಕರ್ ಮೌರ್ಯ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್