AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ನಡುವೆ ಎರಡನೇ ತರಗತಿ ವಿದ್ಯಾರ್ಥಿಯ ಎದೆಗೆ ಹಾರಿದ ಸಹಪಾಠಿಗಳು; ಬಾಲಕ ಸಾವು

ಸೋಮವಾರ ಫಿರೋಜಾಬಾದ್‌ನ ಕಿಶನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಇತರ ವಿದ್ಯಾರ್ಥಿಗಳು ಏಳರ ಹರೆಯದ ಶಿವಂ ಎದೆ ಮೇಲೆ ಹಾರಿದ್ದಾರೆ.

ಜಗಳದ ನಡುವೆ ಎರಡನೇ ತರಗತಿ ವಿದ್ಯಾರ್ಥಿಯ ಎದೆಗೆ ಹಾರಿದ ಸಹಪಾಠಿಗಳು; ಬಾಲಕ ಸಾವು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Dec 13, 2022 | 8:36 PM

Share

ಫಿರೋಜಾಬಾದ್: ಉತ್ತರ ಪ್ರದೇಶದ (Uttar Pradesh) ಫಿರೋಜಾಬಾದ್‌ನ ಪ್ರಾಥಮಿಕ ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಸಹಪಾಠಿಗಳ ಜತೆಗಿನ ಜಗಳದಲ್ಲಿ ಸಾವಿಗೀಡಾಗಿದ್ದಾನೆಎಂದು ಪೊಲೀಸರು ಹೇಳಿದ್ದಾರೆ. ಸೋಮವಾರ ಫಿರೋಜಾಬಾದ್‌ನ (Firozabad) ಕಿಶನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಇತರ ವಿದ್ಯಾರ್ಥಿಗಳು ಏಳರ ಹರೆಯದ ಶಿವಂ ಎದೆ ಮೇಲೆ ಹಾರಿದ್ದಾರೆ. ಇದು ಆತನ ಸಾವಿಗೆ ಕಾರಣವಾಯಿತು ಎಂದು ಶಿಕೋಹಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಹರವೀಂದ್ರ ಮಿಶ್ರಾ ಹೇಳಿದ್ದಾರೆ. ಶಿವಂನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಂಗಳವಾರ ಆತ ಮೃತಪಟ್ಟ ಎಂದು ಪೊಲೀಸರು ಹೇಳಿದ್ದಾರೆ. ಮೃತದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಶಾಲಾ ಆಡಳಿತ ಮಂಡಳಿಯನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ರವಿ ರಂಜನ್ ಅವರನ್ನು ಸಂಪರ್ಕಿಸಿದಾಗ ಮೂಲ ಶಿಕ್ಷಣಾಧಿಕಾರಿ ಆಶಿಶ್ ಕುಮಾರ್ ಪಾಂಡೆ ಮತ್ತು ಎಸ್‌ಡಿಎಂ ಶಿಕೋಹಾಬಾದ್ ಶಿವ ಧ್ಯಾನ್ ಪಾಂಡೆ ವಿಷಯದ ತನಿಖೆಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಫೊರೆನ್ಸಿಕ್ ವರದಿ ಬಂದ ನಂತರ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿಚಾರಣೆ ಪೂರ್ಣಗೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: HSR Layout ನಲ್ಲಿ ಕನ್ನಡ ಬಾವುಟ ಸುಟ್ಟ ಪ್ರಕರಣಕ್ಕೆ ಲಾಕ್ ಡೌನ್ ಲಿಂಕ್ ಕೊಟ್ಟ ಉತ್ತರ ಪ್ರದೇಶದ ಆರೋಪಿ ಟೆಕ್ಕಿ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್