AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಮಹಾರಾಷ್ಟ್ರ, ಹೈ ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ

Omicron ಇತ್ತೀಚಿನ ಮಾರ್ಗಸೂಚಿಗಳ ಅಡಿಯಲ್ಲ  ಮೂರು "ಹೆಚ್ಚಿನ ಅಪಾಯದ" ರಾಷ್ಟ್ರಗಳ ಪ್ರಯಾಣಿಕರು ಕೊವಿಡ್‌ನ ಓಮಿಕ್ರಾನ್ ರೂಪಾಂತರಿ ಆತಂಕದ ದೃಷ್ಟಿಯಿಂದ ಮಹಾರಾಷ್ಟ್ರದ ವಿಮಾನ ನಿಲ್ದಾಣದ ಪರಿಷ್ಕೃತ ನಿಯಮಗಳ ಅಡಿಯಲ್ಲಿ ಸಾಂಸ್ಥಿಕ ಕ್ವಾರಂಟೈನ್​​ಗೆ ಒಳಗಾಗುತ್ತಾರೆ.

ಪ್ರಯಾಣ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಮಹಾರಾಷ್ಟ್ರ, ಹೈ ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 02, 2021 | 8:15 PM

Share

ದೆಹಲಿ: ಮಹಾರಾಷ್ಟ್ರ (Maharashtra) ಸರ್ಕಾರವು ಎಲ್ಲಾ ಒಳಬರುವ ಪ್ರಯಾಣಿಕರಿಗೆ ತನ್ನ ಪ್ರಯಾಣ ಮಾರ್ಗಸೂಚಿಗಳನ್ನು (travel guidelines) ಗುರುವಾರ ಪರಿಷ್ಕರಿಸಿದೆ. ಕೇಂದ್ರ ಸರ್ಕಾರವು ಹೊರಡಿಸಿದ ಕೊವಿಡ್ 19 ಪ್ರಮಾಣಿತ ಕಾರ್ಯಾಚರಣೆಗಳು ಮತ್ತು ಮಾರ್ಗಸೂಚಿಗಳೊಂದಿಗೆ ತನ್ನ ಆದೇಶವು ಭಿನ್ನವಾಗಿದೆ ಎಂದು ಕೇಂದ್ರವು ರಾಜ್ಯಕ್ಕೆ ಪತ್ರ ಬರೆದ ಒಂದು ದಿನದ ನಂತರ ಮಹಾರಾಷ್ಟ್ರ ಈ ಪರಿಷ್ಕರಣೆ ಮಾಡಿದೆ. ಇತ್ತೀಚಿನ ಮಾರ್ಗಸೂಚಿಗಳ ಅಡಿಯಲ್ಲ  ಮೂರು “ಹೆಚ್ಚಿನ ಅಪಾಯದ” ರಾಷ್ಟ್ರಗಳ ಪ್ರಯಾಣಿಕರು ಕೊವಿಡ್‌ನ ಓಮಿಕ್ರಾನ್(Omicron) ರೂಪಾಂತರಿ ಆತಂಕದ ದೃಷ್ಟಿಯಿಂದ ಮಹಾರಾಷ್ಟ್ರದ ವಿಮಾನ ನಿಲ್ದಾಣದ ಪರಿಷ್ಕೃತ ನಿಯಮಗಳ ಅಡಿಯಲ್ಲಿ ಸಾಂಸ್ಥಿಕ ಕ್ವಾರಂಟೈನ್​​ಗೆ (institutional quarantine) ಒಳಗಾಗುತ್ತಾರೆ. ಆದಾಗ್ಯೂ, “ಅಪಾಯದಲ್ಲಿರುವ” ರಾಷ್ಟ್ರಗಳ ಪ್ರಯಾಣಿಕರು ಕೇಂದ್ರದ ನಿಯಮಗಳನ್ನು ಅನುಸರಿಸಬೇಕು. ಹೈ ರಿಸ್ಕ್ ಅಥವಾ”ಹೆಚ್ಚಿನ ಅಪಾಯದ” ರಾಷ್ಟ್ರಗಳೆಂದರೆ ದಕ್ಷಿಣ ಆಫ್ರಿಕಾ, ಬೋಟ್ಸ್ವಾನ ಮತ್ತು ಜಿಂಬಾಬ್ವೆ. ಈ ರಾಷ್ಟ್ರಗಳ ಪ್ರಯಾಣಿಕರನ್ನು “ಆದ್ಯತೆಯ ಮೇಲೆ ಡಿಬೋರ್ಡ್ ಮಾಡಲಾಗುವುದು. ಇವರನ್ನು ಕಡ್ಡಾಯವಾಗಿ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ” ಎಂದು ಹೊಸ ನಿಯಮಗಳು ಹೇಳಿವೆ. ಈ ನಿಯಮವು ಅವರ ಆಗಮನದ 15 ದಿನಗಳ ಮೊದಲು ಯಾವುದೇ ಸಮಯದಲ್ಲಿ ಈ ರಾಷ್ಟ್ರಗಳಿಗೆ ಭೇಟಿ ನೀಡಿದ ಜನರಿಗೆ ಮತ್ತು ರೋಗಲಕ್ಷಣಗಳನ್ನು ಹೊಂದಿರುವ ಯಾವುದೇ ಪ್ರಯಾಣಿಕರಿಗೆ ಅನ್ವಯಿಸುತ್ತದೆ. ಸಾಂಸ್ಥಿಕ ಸಂಪರ್ಕತಡೆಯನ್ನು ಪೂರ್ಣಗೊಳಿಸಿದ ನಂತರ ಪ್ರಯಾಣಿಕರು ಆರ್​​ಟಿಪಿಸಿಆರ್ (RTPCR )ಪರೀಕ್ಷೆಗೆ ಒಳಗಾಗುತ್ತಾರೆ. ಫಲಿತಾಂಶವು ನಕಾರಾತ್ಮಕವಾಗಿದ್ದರೆ, ಏಳು ದಿನಗಳ ಹೋಮ್ ಕ್ವಾರಂಟೈನ್‌ಗೆ  ಒಳಗಾಗುತ್ತಾರೆ. “ಅಪಾಯದಲ್ಲಿರುವ” ರಾಷ್ಟ್ರಗಳ ಪ್ರಯಾಣಿಕರಿಗೆ ಇನ್ನು ಮುಂದೆ ಆಗಮನದ ನಂತರ ಸಾಂಸ್ಥಿಕ ಕ್ವಾರಂಟೈನ್ ಅಗತ್ಯವಿಲ್ಲ.

ದೇಶೀಯ ಪ್ರಯಾಣಿಕರು ಆಗಿದ್ದರೆ , ಪ್ರಯಾಣಿಕರು ಸಂಪೂರ್ಣವಾಗಿ ಲಸಿಕೆಯನ್ನು ಹೊಂದಿರಬೇಕು ಅಥವಾ ಋಣಾತ್ಮಕ RT-PCR ವರದಿಯನ್ನು ಹೊಂದಿರಬೇಕು, ಇದಕ್ಕಾಗಿ ಪರೀಕ್ಷೆಯನ್ನು 72 ಗಂಟೆಗಳ ಒಳಗೆ ವಿಮಾನ ಹತ್ತುವ ಮೊದಲು ನಡೆಸಲಾಗುತ್ತದೆ.

ಬುಧವಾರ, ಮಹಾರಾಷ್ಟ್ರ ಸರ್ಕಾರವು ‘ಅಪಾಯದಲ್ಲಿರುವ’ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಏಳು ದಿನಗಳ ಸಾಂಸ್ಥಿಕ ಸಂಪರ್ಕತಡೆಯನ್ನು ಕಡ್ಡಾಯಗೊಳಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ನಿನ್ನೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರವೊಂದನ್ನು ಕಳುಹಿಸಿದ್ದು, ಅದರ ಮಾರ್ಗಸೂಚಿಗಳೊಂದಿಗೆ ಹೊಂದಿಕೊಳ್ಳುವಂತೆ ಒತ್ತಾಯಿಸಿದೆ.

ಇಂದಿನಿಂದ 50 ಕ್ಕೂ ಹೆಚ್ಚು ರಾಷ್ಟ್ರಗಳು ಒಮಿಕ್ರಾನ್‌ ಪ್ರಕರಣಗಳನ್ನು ಹೊಂದಿವೆ ಅಥವಾ “ಅಪಾಯದಲ್ಲಿದೆ”. ಈ ಪಟ್ಟಿಯಲ್ಲಿ ಯುಕೆ, ಜರ್ಮನಿ, ಸ್ಪೇನ್, ಬೆಲ್ಜಿಯಂ ಮತ್ತು ಇಟಲಿಯಂತಹ ಯುರೋಪಿಯನ್ ರಾಷ್ಟ್ರಗಳು ಸೇರಿವೆ. ಅಲ್ಲದೆ, ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಇಸ್ರೇಲ್, ಹಾಂಗ್ ಕಾಂಗ್ ಮತ್ತು ಜಪಾನ್ ಒಮಿಕ್ರಾನ್ ಪ್ರಕರಣಗಳನ್ನು ದೃಢಪಡಿಸಿವೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಪಡೆಯುವುದಕ್ಕೆ ಜನರ ಹಿಂದೇಟು; ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಮುಂದಾದ ಬಿಬಿಎಂಪಿ

ಇದನ್ನೂ ಓದಿ: Omicron in Karnataka: ಕರ್ನಾಟಕದಲ್ಲಿ ಒಮಿಕ್ರಾನ್ ದೃಢ: ರಾಜ್ಯದಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ