ನ್ಯೂಯಾರ್ಕ್‌ನ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ರಾಮಮಂದಿರ ಉದ್ಘಾಟನೆ ನೇರ ಪ್ರಸಾರ

|

Updated on: Jan 08, 2024 | 12:52 PM

ಯುನೈಟೆಡ್ ಸ್ಟೇಟ್ಸ್‌ನ ನ್ಯೂಯಾರ್ಕ್ ನಗರದ ಟೈಮ್ಸ್ ಸ್ಕ್ವೇರ್​​ನಲ್ಲಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದ್ದಾರೆ ಎಂದು ಮೂಲಗಳು ಹೇಳಿದೆ. ರಾಮ ಲಲ್ಲಾನ ಪ್ರಾಣ ಪತಿಷ್ಠೆಯ ಕಾರ್ಯವನ್ನು ಕೂಡ ನೇರ ಪ್ರಸಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ನ್ಯೂಯಾರ್ಕ್‌ನ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ರಾಮಮಂದಿರ ಉದ್ಘಾಟನೆ ನೇರ ಪ್ರಸಾರ
Follow us on

ಜನವರಿ 22ರಂದು ಅಯೋಧ್ಯೆ ರಾಮ ಮಂದಿರ  ಉದ್ಘಾಟನೆಗೆ ( Ram Mandir inauguration) ಇಡಿ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ರಾಮ ಜನ್ಮಭೂಮಿ ಟ್ರಸ್ಟ್ ಎಲ್ಲ​​​​​​​ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇನ್ನು ವಿದೇಶದಲ್ಲೂ ಭಾರತೀಯರು ಹಾಗೂ ರಾಮಭಕ್ತರು ಈ ಪುಣ್ಯ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಜನವರಿ 22ರ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯನ್ನು ಭಾರತದ ಅನೇಕ ಕಡೆ ನೇರ ಪ್ರಸಾರ ಮಾಡಲಿದ್ದಾರೆ. ಇದೀಗ ವಿದೇಶದಲ್ಲೂ ಈ ಕಾರ್ಯಕ್ರಮವನ್ನು ಲೈವ್​​ ಪ್ರಸಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಯುನೈಟೆಡ್ ಸ್ಟೇಟ್ಸ್‌ನ ನ್ಯೂಯಾರ್ಕ್ ನಗರದ ಟೈಮ್ಸ್ ಸ್ಕ್ವೇರ್​​ನಲ್ಲಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದ್ದಾರೆ ಎಂದು ಮೂಲಗಳು ಹೇಳಿದೆ. ರಾಮ ಲಲ್ಲಾನ ಪ್ರಾಣ ಪತಿಷ್ಠೆಯ ಕಾರ್ಯವನ್ನು ಕೂಡ ನೇರ ಪ್ರಸಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ವಿದೇಶದಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲೂ ಈ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುವುದು ಎಂದು ಹೇಳಲಾಗಿದೆ.

ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ಮೋದಿ ಅವರು ಭಾರತ ಹಾಗೂ ರಾಮಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಈಗಾಗಲೇ ದೇಶದ ಬೂತ್​​​ ಮಟ್ಟದಲ್ಲಿ ಅಯೋಧ್ಯೆ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಾರ್ಯಕ್ರಮವನ್ನು ಬೂತ್​​​ ಮಟ್ಟದಲ್ಲಿ ಪ್ರಸಾರ ಮಾಡುವಂತೆ ಕಾರ್ಯಕರ್ತರಿಗೆ ಬಿಜೆಪಿ ಪಕ್ಷ ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲೇ ಇದೆ ರಾಮಾಯಣದ ಕತೃ ವಾಲ್ಮೀಕಿ ಹುಟ್ಟಿ ಬೆಳೆದು ಮೋಕ್ಷ ಪಡೆದ ಸ್ಥಳ; ಯಾವುದು ಗೊತ್ತಾ?

ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಸಿದ್ಧತೆಗಳು ಹಾಗೂ ಆಚರಣೆಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದ್ದಾರೆ. ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯಂದು ತಾನು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಕೇಳಿದ್ದಾರೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.

ಹಳೆಯ ರಾಮನ ಮೂರ್ತಿ ಹಾಗೂ ಹೊಸ ರಾಮನ ಮೂರ್ತಿ ಎರಡನ್ನು ಇಲ್ಲಿ ಪ್ರತಿಷ್ಠೆ ಮಾಡಲಾಗುವುದು. ಹಳೆಯ ರಾಮನ ಮೂರ್ತಿಯನ್ನು ಉತ್ಸವ ರಾಮ ಎಂದು ಕರೆಯಲಾಗುತ್ತದೆ. ಎರಡೂ ಪ್ರತಿಮೆಗಳನ್ನು ಹೊಸ ರಾಮಮಂದಿರದಲ್ಲಿ ಇರಿಸಲಾಗುತ್ತದೆ ಎಂದು ನೃಪೇಂದ್ರ ಮಿಶ್ರಾ ಹೇಳಿದರು.

ಶ್ರೀರಾಮನ ಮತ್ತಷ್ಟು ವಿಚಾರಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ