ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ಶಾಲೆImage Credit source: Hindustan Times
Follow us
|

Updated on: Oct 22, 2024 | 12:30 PM

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ಸಿಆರ್​ಪಿಎಫ್ ಶಾಲೆ ಎದುರು ಸ್ಫೋಟ ಸಂಭವಿಸಿತ್ತು ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್​ಪಿಎಫ್ ಶಾಲೆಯ ಬಳಿ ಭಾನುವಾರ ಬೆಳಗ್ಗೆ ಭಾರಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 7.50ರ ಸುಮಾರಿಗೆ ಸಂಭವಿಸಿದ ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಸೆಕ್ಟರ್ 14ರಲ್ಲಿರುವ ಸಿಆರ್​ಪಿಎಫ್ ಶಾಲೆಯ ಬಳಿಗೆ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ವಿಧಿವಿಜ್ಞಾನ ತಂಡಗಳು ಆಗಮಿಸಿದ್ದವು.

ಅಪರಾಧ ವಿಭಾಗ ಮತ್ತು ವಿಶೇಷ ಸೆಲ್ ಮತ್ತು ಅಗ್ನಿಶಾಮಕ ದಳ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸಿದ್ದರು. ಶಾಲೆಯ ಗೋಡೆ, ಹತ್ತಿರದ ಅಂಗಡಿಗಳು ಮತ್ತು ಕಾರಿಗೆ ಹಾನಿಯಾಗಿದೆ ಮತ್ತು ಇಡೀ ಪ್ರದೇಶದ ಸುತ್ತ ಯಾರೂ ಬರದಂತೆ ನಿರ್ಬಂಧ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ

ಸ್ಥಳದಿಂದ ಹೊಗೆ ಬರುತ್ತಿರುವುದು ಕಾಣಿಸಿದೆ. ಸ್ಫೋಟದ ನಂತರ ದಟ್ಟವಾದ ಬಿಳಿ ಹೊಗೆ ಕಾಣಿಸಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದೊಡ್ಡ ಶಬ್ದದೊಂದಿಗೆ ಸ್ಫೋಟ ಸಂಭವಿಸಿದೆ ಎಂದು ಬೆಳಗ್ಗೆ 7.47ಕ್ಕೆ ಪಿಸಿಆರ್ ಕರೆ ಬಂದಿತ್ತು. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ

ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!

ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು

ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ

Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ

ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು

ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!