BBC: ದೆಹಲಿ, ಮುಂಬೈ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಪರಿಶೀಲನೆ

ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ತಪಾಸಣೆ ನಡೆಸುತ್ತಿದ್ದು ಸಿಬ್ಬಂದಿಯ ಮೊಬೈಲ್​ ವಶಕ್ಕೆ ಪಡೆದಿದ್ದಾರೆ. ನೌಕರರು ಕೂಡ ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ.ಕೆಲವು ದಾಖಲೆಗಳ ಪರಿಶೀಲನೆ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

BBC: ದೆಹಲಿ, ಮುಂಬೈ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಪರಿಶೀಲನೆ
ಆದಾಯ ತೆರಿಗೆ ಇಲಾಖೆ

Updated on: Feb 14, 2023 | 2:25 PM

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (BBC) ದೆಹಲಿ ಮತ್ತು ಮುಂಬೈ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆಯ(Income Tax department) ಅಧಿಕಾರಿಗಳು ಪರಿಶೀಲನೆ(IT Survey) ನಡೆಸುತ್ತಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ  ವರದಿ ಮಾಡಿದೆ. ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ತಪಾಸಣೆ ನಡೆಸುತ್ತಿದ್ದು ಸಿಬ್ಬಂದಿಯ ಮೊಬೈಲ್​ ವಶಕ್ಕೆ ಪಡೆದಿದ್ದಾರೆ. ನೌಕರರು ಕೂಡ ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ.ಕೆಲವು ದಾಖಲೆಗಳ ಪರಿಶೀಲನೆ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.BBC ಒಳಗೊಂಡಿರುವ ಅಂತರರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ  ಇಲಾಖೆ ತಪಾಸಣೆ  ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಾರು 20 ತೆರಿಗೆ ಅಧಿಕಾರಿಗಳು ಬಿಬಿಸಿಯ ದೆಹಲಿ ಕಚೇರಿಯನ್ನು ಶೋಧಿಸಿದರು. ಮುಂಬೈನಲ್ಲಿ, BBC ಸ್ಟುಡಿಯೊದಲ್ಲಿ ಶೋಧ ನಡೆದಿದೆ.ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಪತ್ರಕರ್ತರ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ. ತಪಾಸಣೆ ಅವಧಿಯವರೆಗೆ ಕಚೇರಿಗಳನ್ನು ಮುಚ್ಚಲಾಗುವುದು ಮತ್ತು ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ನೌಕರರಿಗೆ ತಿಳಿಸಲಾಗಿದೆ.

ಇದು ತಪಾಸಣೆಯೇ ಹೊರತು ಶೋಧ ಅಲ್ಲ, ಫೋನ್‌ಗಳನ್ನು ಹಿಂತಿರುಗಿಸಲಾಗುವುದು ಎಂದು ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ನಮಗೆ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ ಮ. ಅದಕ್ಕಾಗಿ ನಮ್ಮ ತಂಡವು BBC ಕಚೇರಿಗೆ ಭೇಟಿ ನೀಡುತ್ತಿದೆ. ಅಲ್ಲಿ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ನಮ್ಮ ಅಧಿಕಾರಿಗಳು ಖಾತೆ ಪುಸ್ತಕಗಳನ್ನು ಪರಿಶೀಲಿಸಲು ಹೋಗಿದ್ದಾರೆ, ಇದು ಶೋಧ ಅಲ್ಲ ಎಂದು  ಆದಾಯ ತೆರಿಗೆ ಮೂಲಗಳು ಹೇಳಿವೆ,.

ತೆರಿಗೆದಾರರು ಬಿಬಿಸಿಯ ಹಣಕಾಸು ಇಲಾಖೆಯನ್ನು ಅದರ ಬ್ಯಾಲೆನ್ಸ್ ಶೀಟ್ ಮತ್ತು ಖಾತೆಗಳ ವಿವರಗಳನ್ನು ಕೇಳಿದರು ಎಂದು ಮೂಲಗಳು ತಿಳಿಸಿವೆ.

ಬಿಬಿಸಿ ಇತ್ತೀಚೆಗೆ 2022 ರ ಗುಜರಾತ್ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆಪಾದನೆ ಮಾಡಲಾಗಿತ್ತು. ದೇ ಕೇಂದ್ರವು ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಚಾನೆಲ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದರೂ, ದೇಶದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಇದನ್ನು ಪ್ರದರ್ಶಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಾಕ್ಷ್ಯಚಿತ್ರ ಮತ್ತು 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದ ಆರೋಪಗಳ ಕುರಿತು ಭಾರತದಲ್ಲಿ ಬಿಬಿಸಿಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ತಿರಸ್ಕರಿಸಿದ ಸುಪ್ರೀ ಕೋರ್ಟ್, ಸಾಕ್ಷ್ಯಚಿತ್ರ ದೇಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಮೌಖಿಕವಾಗಿ ಪ್ರಶ್ನಿಸಿದೆ.


ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎಂ. ಸುಂದ್ರೇಶ್ 2002ರ ಗುಜರಾತ್ ಗಲಭೆ ಕುರಿತ ಸಾಕ್ಷ್ಯಚಿತ್ರ ‘ಇಂಡಿಯಾ: ದ ಮೋದಿ ಕ್ವೆಶ್ಚನ್’ ಪ್ರಸಾರಕ್ಕಾಗಿ ಬಿಬಿಸಿಯನ್ನು ನಿಷೇಧಿಸುವಂತೆ ಕೋರಿ ಹಿಂದೂ ಸೇನೆಯ ಅಧ್ಯಕ್ಷರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅವರು “ಸಂಪೂರ್ಣವಾಗಿ ತಪ್ಪು ಕಲ್ಪನೆ” ಎಂದು ಬಣ್ಣಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಸಾಕ್ಷ್ಯಚಿತ್ರವು ದೇಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಪೀಠವು ಪ್ರಶ್ನಿಸಿತು. “ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ, ಇದನ್ನು ಹೇಗೆ ವಾದಿಸಬಹುದು? ನಾವು ಸಂಪೂರ್ಣ ಸೆನ್ಸಾರ್ಶಿಪ್ ಅನ್ನು ಹಾಕಬೇಕೆಂದು ನೀವು ಬಯಸುತ್ತೀರಾ? ಇದು ಏನು?” ಎಂದು ಪೀಠ, ಅರ್ಜಿದಾರರ ವಕೀಲರಲ್ಲಿ ಕೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿಂಕಿ ಆನಂದ್, ಅರ್ಜಿದಾರರ ವಿಚಾರಣೆ ನಡೆಸುವಂತೆ ಪೀಠವನ್ನು ಒತ್ತಾಯಿಸಿದ್ದು ಬಿಬಿಸಿ ಉದ್ದೇಶಪೂರ್ವಕವಾಗಿ ಭಾರತದ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದು ವಾದಿಸಿದರು.

ಈ ತಿಂಗಳ ಆರಂಭದಲ್ಲಿ ಎನ್. ರಾಮ್ ಮತ್ತು ಇತರರ ಮನವಿಯ ಮೇರೆಗೆ ಕಾರ್ಯನಿರ್ವಹಿಸಿದ ಉನ್ನತ ನ್ಯಾಯಾಲಯವು, ಪ್ರಧಾನಿ ಮೋದಿಯ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವ ನಿರ್ಧಾರಕ್ಕೆ ಸಂಬಂಧಿಸಿದ ಮೂಲ ದಾಖಲೆಗಳನ್ನು ನೀಡುವಂತೆ ಕೇಂದ್ರವನ್ನು ಕೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 12:46 pm, Tue, 14 February 23