ಕಲ್ಲಿದ್ದಲು ಗಣಿ ಕಂಪನಿಯ ಹೆಸರನ್ನು ಅಕ್ರಮ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ₹1 ಲಕ್ಷ ದಂಡ

Coalgate Scam ಸ್ಕ್ರೀನಿಂಗ್ ಕಮಿಟಿ ರೂಟ್ ಮೂಲಕ ಕಲ್ಲಿದ್ದಲು ನಿಕ್ಷೇಪವನ್ನು ಮಂಜೂರು ಮಾಡಲಾಗಿಲ್ಲ ಮತ್ತು ಎಂಎಂಡಿಆರ್ ಕಾಯಿದೆಯ ಪ್ರಕಾರ ಅದರ ಹಂಚಿಕೆಯನ್ನು ಕಟ್ಟುನಿಟ್ಟಾಗಿ ನಿಗದಿಪಡಿಸಲಾಗಿದೆ ಎಂದು ಅರ್ಜಿದಾರರು ಸೂಚಿಸಿದರು

ಕಲ್ಲಿದ್ದಲು ಗಣಿ ಕಂಪನಿಯ ಹೆಸರನ್ನು ಅಕ್ರಮ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ₹1 ಲಕ್ಷ ದಂಡ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 18, 2022 | 12:57 PM

ದೆಹಲಿ: ಕಲ್ಲಿದ್ದಲು ಹಗರಣದಲ್ಲಿ (Coalgate scam) ನಡೆದ ಅಕ್ರಮ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಟ್ಟಿಯಲ್ಲಿ(coal block allotments) ಕಲ್ಲಿದ್ದಲು ಗಣಿ ಕಂಪನಿಯ ಹೆಸರನ್ನು ತಪ್ಪಾಗಿ ನಮೂದಿಸಿದ್ದಕ್ಕಾಗಿ ಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ದೂರುದಾರ ಕಂಪನಿಯಾದ ಬಿಎಲ್ಎ ಇಂಡಸ್ಟ್ರೀಸ್ ಪೈವೇಟ್ ಲಿಮಿಟೆಡ್  (BLA Industries Pvt Ltd)ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯಿದೆ, 1957 (MMDR ಕಾಯಿದೆ) ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಿ ಕಾನೂನು ಮಾರ್ಗದ ಮೂಲಕ ಅರ್ಜಿ ಸಲ್ಲಿಸಿದ್ದು, ಮೇ 21, 1998 ರಂದು ಕೇಂದ್ರ ಸರ್ಕಾರದ ಅನುಮೋದನೆಯ ನಂತರ ಮಧ್ಯಪ್ರದೇಶ ರಾಜ್ಯವು ಗಣಿಗಾರಿಕೆ ಗುತ್ತಿಗೆಯನ್ನು ನೀಡಿತು ಎಂದು ನ್ಯಾಯಾಲಯ ಗಮನಿಸಿದೆ. 2014 ಆಗಸ್ಟ್ ತಿಂಗಳಲ್ಲಿ ಕಲ್ಲಿದ್ದಲು ನಿಕ್ಷೇಪಗಳನ್ನು ರದ್ದು ಪಡಿಸಿದ್ದು ಸ್ಕ್ರೀನಿಂಗ್ ಕಮಿಟಿ ರೂಟ್ ಅಥವಾ ಕೇಂದ್ರ ಸರ್ಕಾರದ ವಿತರಣಾ ಮಾರ್ಗದ ಮೂಲಕ ಹಂಚಿಕೆ ಮಾಡಲಾಗಿದೆ. ಆದರೆ, ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸ್ಕ್ರೀನಿಂಗ್ ಕಮಿಟಿ ರೂಟ್ ಮೂಲಕ ಮಾಡಿದ ಹಂಚಿಕೆಗಳ ಪಟ್ಟಿಯಲ್ಲಿ ಅರ್ಜಿದಾರರ ಕಂಪನಿಯ ಹೆಸರನ್ನು ಉಲ್ಲೇಖಿಸಲಾಗಿದೆ. ಕಲ್ಲಿದ್ದಲು ಗಣಿಗಳ (ವಿಶೇಷ ನಿಬಂಧನೆಗಳು) ಸುಗ್ರೀವಾಜ್ಞೆ 2014 ರಲ್ಲಿ ವಿವರ ಪಟ್ಟಿಯಲ್ಲಿಯೂ ಅರ್ಜಿದಾರರ ಹೆಸರನ್ನು   ಸೇರಿಸಲಾಗಿದೆ. ಇದು ಅರ್ಜಿದಾರರಿಗೆ ನೀಡಲಾದ ಗಣಿಗಾರಿಕೆ ಗುತ್ತಿಗೆಯನ್ನು ರದ್ದುಪಡಿಸಲು ಕಾರಣವಾಯಿತು.

ಸ್ಕ್ರೀನಿಂಗ್ ಕಮಿಟಿ ರೂಟ್ ಮೂಲಕ ಕಲ್ಲಿದ್ದಲು ನಿಕ್ಷೇಪವನ್ನು ಮಂಜೂರು ಮಾಡಲಾಗಿಲ್ಲ ಮತ್ತು ಎಂಎಂಡಿಆರ್ ಕಾಯಿದೆಯ ಪ್ರಕಾರ ಅದರ ಹಂಚಿಕೆಯನ್ನು ಕಟ್ಟುನಿಟ್ಟಾಗಿ ನಿಗದಿಪಡಿಸಲಾಗಿದೆ ಎಂದು ಅರ್ಜಿದಾರರು ಸೂಚಿಸಿದರು. ಕೋಲ್ ಗೇಟ್ ಅಥವಾ ಕಲ್ಲಿದ್ದಲು ಹಗರಣದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ಹೆಚ್ಚಿಸಿದ ಹೆಚ್ಚುವರಿ ಶುಲ್ಕದ ಬೇಡಿಕೆಯನ್ನು ಪ್ರಶ್ನಿಸಿ ಆರ್ಟಿಕಲ್ 32 ರ ಅಡಿಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸುವ ಮೂಲಕ ಪ್ರಸ್ತುತ ಕಂಪನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ನ್ಯಾಯಮೂರ್ತಿ ಹೀಮಾ ಕೊಹ್ಲಿಯವರ ನ್ಯಾಯಪೀಠವು ಅರ್ಜಿದಾರರ ವಾದವನ್ನು ಒಪ್ಪಿದೆ. 1997ರ 26-27ರಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಗಳಲ್ಲಿ ಅರ್ಜಿದಾರರು ಭಾಗವಹಿಸಿದ್ದರು ಎಂಬುದನ್ನು ಒಪ್ಪಿಕೊಂಡಾಗ ಅಂತಹ ಸಭೆಗಳಲ್ಲಿ ಭಾಗವಹಿಸುವುದರಿಂದ ಅದು ನೇರವಾಗಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ ಎಂದು ಅರ್ಥವಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರವಾಗಿ ಗಣಿಗಾರಿಕೆ ಗುತ್ತಿಗೆ ಕೇಂದ್ರ ಸರ್ಕಾರ ಮತ್ತು/ಅಥವಾ ಸ್ಕ್ರೀನಿಂಗ್ ಕಮಿಟಿ ನೇರವಾಗಿ ನೀಡಿದ ಯಾವುದೇ ಹಂಚಿಕೆ ಪತ್ರವನ್ನು ಆಧರಿಸಿಲ್ಲ, ಆದರೆ ಸ್ವತಂತ್ರ ಪರಿಗಣನೆಯ ಮೇಲೆ ಸ್ಥಾಪಿಸಲಾಗಿದೆ ಎಂದು ಮಧ್ಯಪ್ರದೇಶ ರಾಜ್ಯದ ಅಫಿಡವಿಟ್ ಸ್ಪಷ್ಟಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಎಂಎಂಡಿಆರ್ ಕಾಯಿದೆಯ ನಿಬಂಧನೆಗಳ ಪ್ರಕಾರ ಎಂಸಿ ನಿಯಮಗಳನ್ನು ಪಾಲಿಸಿದೆ.  ಈ ಹಿನ್ನೆಲೆಯಲ್ಲಿ ಕೇಂದ್ರವು ಅರ್ಜಿದಾರರ ಹೆಸರನ್ನು ಅಕ್ರಮ ಹಂಚಿಕೆದಾರರ ಪಟ್ಟಿಯಲ್ಲಿ ಸೇರಿಸಬಾರದಿತ್ತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅರ್ಜಿದಾರರು ಹೊರತೆಗೆಯಲಾದ ಕಲ್ಲಿದ್ದಲಿನ ಮೇಲೆ ಕೇಂದ್ರವು ಹೆಚ್ಚುವರಿ ಸುಂಕವನ್ನು ಕೋರುವಂತಿಲ್ಲ ಎಂದು ಹೇಳಿದ ನ್ಯಾಯಾಲಯ ಕೇಂದ್ರದ ಬೇಡಿಕೆಯನ್ನು ರದ್ದುಗೊಳಿಸಿತು.

Published On - 12:46 pm, Thu, 18 August 22

ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ