Independence Day 2022: ಮಕ್ಕಳಿಗೆ ಧ್ವಜ ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ ತಾಯಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 13, 2022 | 5:34 PM

ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಮೋದಿ ಅವರು ಶನಿವಾರ ಗುಜರಾತ್‌ನ ಗಾಂಧಿನಗರ ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜವನ್ನು ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದರು.

Independence Day 2022: ಮಕ್ಕಳಿಗೆ ಧ್ವಜ ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ ತಾಯಿ
Prime Minister Modi's mother
Image Credit source: ANI
Follow us on

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಮೋದಿ ಅವರು ಶನಿವಾರ ಗುಜರಾತ್‌ನ ಗಾಂಧಿನಗರ ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶನಿವಾರ ರಾಜ್ಯ ರಾಜಧಾನಿಯ ಮಕ್ಕಳ ವಿಶ್ವವಿದ್ಯಾಲಯದಲ್ಲಿ 100 ಅಡಿ ಎತ್ತರದ ಧ್ವಜ ಕಂಬದ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಮೂರು ದಿನಗಳ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಅಭಿಯಾನದ ಅಡಿಯಲ್ಲಿ ಹೀರಾಬಾ ಮೋದಿ ಅವರು ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಿದರು ಮತ್ತು ಅವರೊಂದಿಗೆ ತ್ರಿವರ್ಣ ಧ್ವಜವನ್ನು ಬೀಸಿದರು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಇದ್ದರು. ಗುಜರಾತ್‌ನ ವಿವಿಧ ಭಾಗಗಳಲ್ಲಿ ತಿರಂಗ ಯಾತ್ರೆ ಆಯೋಜಿಸಲಾಗಿದ್ದು, ಬಿಜೆಪಿ ಶಾಸಕರು ಮತ್ತು ಸಚಿವರು ತ್ರಿವರ್ಣ ಧ್ವಜವನ್ನು ಹೊತ್ತ ಜನರೊಂದಿಗೆ ರ್ಯಾಲಿಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ಇದಕ್ಕೂ ಮುನ್ನ ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರು ಮೆಹ್ಸಾನಾ ಜಿಲ್ಲೆಯ ವಿಜಾಪುರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರು, ಶಾಸಕರು ಮತ್ತು ಮಾಜಿ ಶಾಸಕರ ಸಮ್ಮುಖದಲ್ಲಿ ಏಳು ಕಿ.ಮೀ. ರ್ಯಾಲಿ ನಡೆಸಿದರು.

ವಡೋದರಾದಲ್ಲಿ, ಬಿಜೆಪಿ ಸಂಸದ ರಂಜನ್ ಭಟ್ ಸ್ಥಳೀಯ ಶಾಸಕರೊಂದಿಗೆ ತಿರಂಗಾ ಯಾತ್ರೆ ನಡೆಸಿದರು. ಗುಜರಾತ್‌ನ ಇತರ ನಗರಗಳು ಮತ್ತು ಪಟ್ಟಣಗಳಲ್ಲಿ ಇದೇ ರೀತಿಯ ಆಚರಣೆಗಳು ಕಂಡುಬಂದವು.

Published On - 5:33 pm, Sat, 13 August 22