Independence Day 2023: ಭಾರತದ ಸ್ವಾತಂತ್ರ್ಯ ದಿನಾಚರಣೆ ಇತಿಹಾಸ, ಮಹತ್ವ ಮತ್ತು ಈ ಬಾರಿಯ ಥೀಮ್

Independence Day History: ಬ್ರಿಟಿಷರು ಭಾರತ ಬಿಟ್ಟು ಹೋಗುವಂತೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.

Independence Day 2023: ಭಾರತದ ಸ್ವಾತಂತ್ರ್ಯ ದಿನಾಚರಣೆ ಇತಿಹಾಸ, ಮಹತ್ವ ಮತ್ತು ಈ ಬಾರಿಯ ಥೀಮ್
ಸ್ವಾತಂತ್ರ್ಯ ದಿನಾಚರಣೆ 2023 (Photo Credit: PTI)
Follow us
Rakesh Nayak Manchi
|

Updated on: Aug 15, 2023 | 6:00 AM

ಸುಮಾರು ಎರಡು ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯು 1947 ಆಗಸ್ಟ್ 15 ರಂದು ಕೊನೆಗೊಂಡಿತು. ಅಲ್ಲದೆ, ಬ್ರಿಟಿಷರು ಭಾರತ ಬಿಟ್ಟು ಹೋಗುವಂತೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು (Independence Day) ಆಚರಿಸಲಾಗುತ್ತದೆ. ಅದರಂತೆ ಇಂದು ದೇಶಾದ್ಯಂತ ದೇಶಪ್ರೇಮಿಗಳು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸುತ್ತಿದ್ದಾರೆ.

2023 ರ ಸ್ವಾತಂತ್ರ್ಯ ದಿನಾಚರಣೆಯ ಥೀಮ್ “ರಾಷ್ಟ್ರ ಮೊದಲು, ಯಾವಾಗಲೂ ಮೊದಲು” (Nation First, Always First). ಈ ದಿನದ ದೇಶದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಈ ವಿಷಯವನ್ನು ಆಧರಿಸಿ ನಡೆಯಲಿದೆ.

ಸ್ವಾತಂತ್ರ್ಯ ದಿನದ ಇತಿಹಾಸ

ಜುಲೈ 4, 1947 ರಂದು, ಭಾರತೀಯ ಸ್ವಾತಂತ್ರ್ಯ ಮಸೂದೆಯನ್ನು ಬ್ರಿಟಿಷ್ ಹೌಸ್ ಆಫ್ ಕೊಲೊನಿಯಲ್​ನಲ್ಲಿ ಪರಿಚಯಿಸಲಾಯಿತು ಮತ್ತು ಅದೇ ತಿಂಗಳ 18 ರಂದು ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯು ಭಾರತೀಯ ಸ್ವಾತಂತ್ರ್ಯ ಚಳವಳಿಗೆ ಕಾರಣವಾಯಿತು. ಅದರಂತೆ ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಆಡಳಿತವು ಕೊನೆಗೊಂಡಿತು.

ಇದನ್ನೂ ಓದಿ: Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ

ಮಹಾತ್ಮಾ ಗಾಂಧಿ, ಭಗತ್ ಸಿಂಗ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಮುಂತಾದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಹಲವಾರು ವೀರ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಮಹತ್ವ

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ದಿನವು ಬ್ರಿಟಿಷ್ ಪ್ರಾಬಲ್ಯದಿಂದ ನಮ್ಮ ಸ್ವಾತಂತ್ರ್ಯವನ್ನು ಪಡೆಯಲು ಭಾರತೀಯರು ಮಾಡಿದ ತ್ಯಾಗ ಬಲಿದಾನಗಳನ್ನು ನೆನಪಿಸುತ್ತದೆ.

ಅಲ್ಲದೆ, 1947 ರ ಆಗಸ್ಟ್ 15 ರಂದು ಆಂಧ್ರಪ್ರದೇಶದ ಶಿಕ್ಷಣತಜ್ಞ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪಿಂಗಲಿ ವೆಂಕಯ್ಯ ವಿನ್ಯಾಸಗೊಳಿಸಿದ ಧ್ವಜವನ್ನು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ದೆಹಲಿಯ ಕೆಂಪು ಕೋಟೆಯ ಲಾಹೋರಿ ಗೇಟ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.

ಪ್ರಸ್ತುತ ರಾಷ್ಟ್ರಧ್ವಜವು ಮೂರು ಬಣ್ಣಗಳನ್ನು ಹೊಂದಿದೆ. ಈ ಪೈಕಿ ಕೇಸರಿ ಧೈರ್ಯ ಮತ್ತು ತ್ಯಾಗವನ್ನು ಪ್ರತಿನಿಧಿಸಿದರೆ, ಬಿಳಿ ಬಣ್ಣ ಶಾಂತಿಯನ್ನು ಪ್ರತಿನಿಧಿಸುತ್ತದೆ ಮತ್ತು ಹಸಿರು ಬಣ್ಣ ಸಮೃದ್ಧಿಯನ್ನು ಸಂಕೇತಿಸುತ್ತದೆ. ಮಧ್ಯದಲ್ಲಿರುವ ಅಶೋಕ ಚಕ್ರವು ಜೀವನ ಚಕ್ರವನ್ನು ಪ್ರತಿನಿಧಿಸುತ್ತದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ