Independence Day 2023: ಕೆಂಪು ಕೋಟೆಯಲ್ಲಿ ನಾಳೆ ಧ್ವಜಾರೋಹಣ, ಪ್ರಧಾನಿ ಮೋದಿ ಭಾಷಣ ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ
Independence Day: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1,800 ಜನ ಮುಖ್ಯ ಅತಿಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ.
ದೆಹಲಿ, ಆ.14: ಭಾರತವು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಆಚರಿಸಿಕೊಳ್ಳಲು ಆಗಸ್ಟ್ 15 ಅಂದರೆ ನಾಳೆಯ ದಿನಕ್ಕಾಗಿ ಮುಂದು ನೋಡುತ್ತಿದೆ. ಈ ಪ್ರಯುಕ್ತ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಪ್ರಧಾನಿ ಪಟ್ಟ ಏರಿದ ನಂತರ ಪ್ರಧಾನಿ ಮೋದಿ ನೇತೃತ್ವದ ಆಚರಿಸಿದ ಪ್ರತಿಯೊಂದು ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ, ದೇಶ ಭವಿಷ್ಯಕ್ಕೆ ಅನೇಕ ಹೊಸ ವಿಚಾರಗಳ ಜತೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡುತ್ತಾರೆ. ಹಾಗಾಗಿ ಅವರು ಕೆಂಪು ಕೋಟೆಯಲ್ಲಿ ಮಾಡುವ ಪ್ರಮುಖ ಭಾಷಣವನ್ನು ಲೈವ್ ವೀಕ್ಷಣೆ ಮಾಡುವುದು ಹೇಗೆ? ಎಂಬುದ ಬಗ್ಗೆ ಇಲ್ಲಿದೆ ಮಾಹಿತಿ.
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆದಿದೆ. ಇದು ಅವರು ಕೆಂಪು ಕೋಟೆಯಲ್ಲಿ ಮಾಡುತ್ತಿರುವ 10ನೇ ಭಾಷಣ. ನಾಳೆ ಬೆಳಿಗ್ಗೆ 7.30ಕ್ಕೆ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶವನ್ನುದ್ದೇಶಿ ಭಾಷಣ ಮಾಡಲಿದ್ದಾರೆ.
ಸ್ವಾತಂತ್ರ್ಯ ದಿನದ ಭಾಷಣ ಲೈವ್ ಅನ್ನು ಎಲ್ಲಿ ವೀಕ್ಷಿಸಬೇಕು
ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಲೈವ್
ಭಾರತ ಸರ್ಕಾರವು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ನೇರ ಪ್ರಸಾರ ಮಾಡುತ್ತದೆ. ಪ್ರಧಾನಿ ಮೋದಿಯವರ ಭಾಷಣವನ್ನು ಯೂಟ್ಯೂಬ್ ಚಾನೆಲ್ ಮತ್ತು ಅವರ ಇತರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಲೈವ್ ನೋಡಬಹುದು.
ಟಿವಿ ಸುದ್ದಿ ವಾಹಿನಿಗಳು
ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರಧಾನಿ ಮೋದಿ ಅವರ ಭಾಷಣವನ್ನು ದೂರದರ್ಶನ ಮತ್ತು ಇತರ ಹಲವಾರು ಸುದ್ದಿ ವಾಹಿನಿಗಳು ನೇರ ಪ್ರಸಾರ ಮಾಡುತ್ತವೆ.
ಇದನ್ನೂ ಓದಿ: ದಿಲ್ಲಿಯಲ್ಲಿ ಸ್ವಾತಂತ್ರ್ಯೋತ್ಸವದ ತಯಾರಿ ಹೇಗಿದೆ? ಈ ಬಾರಿ ವಿಶೇಷ ಏನು? ಫೋಟೋಗಳಲ್ಲಿ ನೋಡಿ
1,800 ಜನ ವಿಶೇಷ ಅತಿಥಿಯಾಗಿ ಭಾಗಿ
ಕೇಂದ್ರ ಸರ್ಕಾರ ಸ್ವಾತಂತ್ರ್ಯ ದಿನಾಚರಣೆಗೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಕೊಂಡಿರುವ 1,800 ಜನರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಿದೆ. ರಕ್ಷಣಾ ಸಚಿವಾಲಯದ ಅಧಿಕೃತ ಪ್ರಕಟಣೆಯ ಪ್ರಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸು ನಿಟ್ಟಿನಲ್ಲಿ ಮತ್ತು ಅವರ ಜತೆಗೆ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:41 pm, Mon, 14 August 23