AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2023: 77ನೇ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಕೆಂಪುಕೋಟೆಯಲ್ಲಿ ಇಂದು ಪ್ರಧಾನಿ ಮೋದಿ ಭಾಷಣ

ದೆಹಲಿಯ ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಸತತ 10ನೇ ಬಾರಿಗೆ ಕೆಂಪು ಕೋಟೆಯ ಆವರಣದಿಂದ ಭಾಷಣ ಮಾಡಲಿದ್ದಾರೆ.

Independence Day 2023: 77ನೇ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಕೆಂಪುಕೋಟೆಯಲ್ಲಿ ಇಂದು ಪ್ರಧಾನಿ ಮೋದಿ ಭಾಷಣ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Aug 15, 2023 | 7:21 AM

Share

ದೆಹಲಿಯ ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಸತತ 10ನೇ ಬಾರಿಗೆ ಕೆಂಪು ಕೋಟೆಯ ಆವರಣದಿಂದ ಭಾಷಣ ಮಾಡಲಿದ್ದಾರೆ.

ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಲಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಈ ಸಮಾರಂಭಕ್ಕೆ ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿ ಜತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಮತ್ತಷ್ಟು ಓದಿ:Independence Day 2023 Live: ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ 

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 10 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ ಒಂದು ಸಾವಿರ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೆಂಪು ಕೋಟೆಯಲ್ಲೂ ಆ್ಯಂಟಿ ಡ್ರೋನ್ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.

ಪ್ರಧಾನಿ ಮತ್ತು ಇತರ ವಿವಿಐಪಿ ಅತಿಥಿಗಳ ಭದ್ರತೆಗಾಗಿ ಸ್ನೈಪರ್‌ಗಳು, SWAT ಕಮಾಂಡೋಗಳು ಮತ್ತು ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:16 am, Tue, 15 August 23