ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು 78ನೇ ಸ್ವಾತಂತ್ರ್ಯ ದಿನದಂದು ಜನರಿಗೆ ಶುಭಾಶಯ ಕೋರಿದರು ಮತ್ತು “ಸ್ವಾತಂತ್ರ್ಯವು ನಮ್ಮ ದೊಡ್ಡ ರಕ್ಷಣಾತ್ಮಕ ಕವಚವಾಗಿದೆ, ಇದನ್ನು ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಹೆಣೆಯಲಾಗಿದೆ” ಎಂದು ಹೇಳಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ನಂತರ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿದರು.
सभी देशवासियों को स्वतंत्रता दिवस की शुभकामनाएं।
हमारे लिए स्वतंत्रता सिर्फ एक शब्द नहीं – संवैधानिक और लोकतांत्रिक मूल्यों में पिरोया हुआ हमारा सबसे बड़ा सुरक्षा कवच है।
यह शक्ति है अभिव्यक्ति की, क्षमता है सच बोलने की और उम्मीद है सपनों को पूरा करने की।
जय हिंद। 🇮🇳 pic.twitter.com/foLmlSyJDk
— Rahul Gandhi (@RahulGandhi) August 15, 2024
“ಎಲ್ಲಾ ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮಗೆ, ಸ್ವಾತಂತ್ರ್ಯವು ಕೇವಲ ಒಂದು ಪದವಲ್ಲ ಇದು ನಮ್ಮ ಅತಿದೊಡ್ಡ ರಕ್ಷಣಾತ್ಮಕ ಕವಚವಾಗಿದೆ, ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಹೆಣೆಯಲ್ಪಟ್ಟಿದೆ” ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Indepencence Day: 2014ರಿಂದ 2024ರವರೆಗೆ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಧರಿಸಿರುವ ಪೇಟಗಳಿವು
ಇದೇ ವೇಳೆ 78ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾಡಿದ ಭಾಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಂಘಪರಿವಾರವು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಅದರ ಲಾಭಕ್ಕಾಗಿ ಪ್ರಚಾರ ಮಾಡಿದೆ ಎಂದು ಹೇಳಿದರು. “ವಿವಿಧತೆಯಲ್ಲಿ ಏಕತೆ ನಮ್ಮ ಶಕ್ತಿಯೇ ಹೊರತು ದೌರ್ಬಲ್ಯವಲ್ಲ. ಕೆಲವರು ನಮಗೆ ಸುಲಭವಾಗಿ ಸ್ವಾತಂತ್ರ್ಯ ಸಿಕ್ಕಿತು ಎಂದು ಪ್ರಚಾರ ಮಾಡುತ್ತಾರೆ. ಆದರೆ ಸತ್ಯವೆಂದರೆ ಅದಕ್ಕಾಗಿ ಲಕ್ಷಾಂತರ ಜನರು ತ್ಯಾಗ ಮಾಡಿದರು, ತಮ್ಮ ಮನೆಗಳನ್ನು ತೊರೆದರು ಮತ್ತು ಶ್ರೀಮಂತ ಕುಟುಂಬದವರು ಸಹ ಜೈಲುಗಳಲ್ಲಿ ಕಾಲ ಕಳೆದರು” ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ